ಬಾಲಿವುಡ್ ನಟಿ ಕೃತಿ ಸನೋನ್ (Kriti Sanon) ಅವರಿಗೆ ಭರ್ಜರಿ ಬೇಡಿಕೆ ಇದೆ. ಪ್ರತಿ ಸಿನಿಮಾಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಗ್ಲಾಮರ್ ಜತೆಗೆ ಅವರು ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಡಿಫರೆಂಟ್ ಸಿನಿಮಾಗಳನ್ನು ಮಾಡಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಇದೆಲ್ಲದರ ಪರಿಣಾಮ ದಿನದಿಂದ ದಿನಕ್ಕೆ ಅವರ ಆದಾಯವೂ ಹೆಚ್ಚುತ್ತಿದೆ. ಇಷ್ಟೆಲ್ಲ ಇದ್ದರೂ ಕೂಡ ಅವರ ಬಾಡಿಗೆ ಮನೆಯಲ್ಲಿದ್ದಾರೆ! ಹೌದು, ಮುಂಬೈನ ಒಂದು ಅಪಾರ್ಟ್ಮೆಂಟ್ನಲ್ಲಿ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಸೇರಿದ ಎರಡು ಫ್ಲೋರ್ ಅನ್ನು ಕೃತಿ ಸನೋನ್ ಬಾಡಿಗೆಗೆ ಪಡೆದಿದ್ದಾರೆ. ಸದ್ಯ ಅವರು ಅಲ್ಲಿಯೇ ವಾಸವಾಗಿದ್ದಾರೆ. ಪ್ರತಿ ತಿಂಗಳು ಅವರು ಅದಕ್ಕೆ ದುಬಾರಿ ಮೊತ್ತದ ಬಾಡಿಗೆ ಕಟ್ಟುತ್ತಾರೆ.
ಕೃತಿ ಸನೋನ್ ಮೂಲತಃ ದೆಹಲಿಯವರು. ಬಾಲಿವುಡ್ ಸಿನಿಮಾಗಳಲ್ಲಿ ಅವಕಾಶ ಹುಡುಕಿಕೊಂಡು ಅವರು ಹಲವು ವರ್ಷಗಳ ಹಿಂದೆ ಮುಂಬೈಗೆ ಬಂದರು. ಅನೇಕ ಸಿನಿಮಾಗಳಲ್ಲಿ ನಟಿಸಿ ಈಗ ಬಹುಬೇಡಿಕೆಯ ಕಲಾವಿದೆ ಆಗಿದ್ದಾರೆ. ಈ ವರ್ಷ ಅವರು ನಟಿಸಿದ ‘ಮಿಮಿ’ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಕೃತಿ ಸನೋನ್ ಸಂಭಾವನೆ ಕೂಡ ಹೆಚ್ಚಿದೆ. ಆದರೂ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಎರಡೂ ಫ್ಲೋರ್ ಸೇರಿ ಪ್ರತಿ ತಿಂಗಳು ಕೃತಿ ಸನೋನ್ ಅವರು ಬರೋಬ್ಬರಿ 10 ಲಕ್ಷ ರೂ. ಬಾಡಿಗೆ ಕಟ್ಟುತ್ತಾರೆ! ಮುಂದಿನ ಎರಡು ವರ್ಷಗಳಿಗೆ ಅವರು ಇದನ್ನು ಬಾಡಿಗೆಗೆ ಪಡೆದಿದ್ದು, ಒಪ್ಪಂದ ಮಾಡಿಕೊಂಡಿದ್ದಾರೆ. ಸೆಕ್ಯೂರಿಟಿ ಡಿಪಾಸಿಟ್ ಆಗಿ 60 ಲಕ್ಷ ರೂ.ಗಳನ್ನು ಕಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೃತಿ ಸನೋನ್ ಕೈಯಲ್ಲಿ ಈಗ ಅನೇಕ ಸಿನಿಮಾಗಳಿವೆ. ಆ ಪೈಕಿ ಅತಿ ಹೆಚ್ಚು ನಿರೀಕ್ಷೆ ಮೂಡಿಸಿರುವುದು ‘ಆದಿಪುರುಷ್’ ಸಿನಿಮಾ. ಈ ಚಿತ್ರದಲ್ಲಿ ಅವರು ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಖ್ಯಾತ ನಿರ್ದೇಶಕ ಓಂ ರಾವುತ್ ಅವರು ನಿರ್ದೇಶನ ಮಾಡುತ್ತಿದ್ದಾರೆ.
ಹಲವು ದಶಕಗಳಿಂದ ಅಮಿತಾಭ್ ಬಚ್ಚನ್ ಅವರು ಬಾಲಿವುಡ್ನಲ್ಲಿ ಸಕ್ರಿಯರಾಗಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅವರು ಆಸ್ತಿ ಹೊಂದಿದ್ದಾರೆ. ಮುಂಬೈನಲ್ಲಿರುವ ಇನ್ನೊಂದು ಕಟ್ಟಡವನ್ನು ಅವರು ಎಸ್ಬಿಐ ಬ್ಯಾಂಕ್ಗೆ ಬಾಡಿಗೆ ನೀಡಿದ್ದಾರೆ.
ಇದನ್ನೂ ಓದಿ:
‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಕನ್ನಡ ಸಿನಿಮಾ ಮಾತು; ಅಮಿತಾಭ್ ಕಡೆಯಿಂದ ಶುಭ ಹಾರೈಕೆ
‘ಕೌನ್ ಬನೇಗಾ ಕರೋಡ್ಪತಿ’ 1000ನೇ ಎಪಿಸೋಡ್; ಮಗಳ ಎದುರು ಕಣ್ಣೀರು ಹಾಕಿದ ಅಮಿತಾಭ್ ಬಚ್ಚನ್