ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್

ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲಾ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.  

ಪಾನ್​ ಮಸಾಲಾ ಕಂಪನಿಗೆ ನೋಟಿಸ್​ ನೀಡಿದ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 20, 2021 | 10:14 PM

ಅಮಿತಾಭ್​ ಬಚ್ಚನ್ ಅವರು ತಂಬಾಕು ಕಂಪನಿ ಕಮಲಾ ಪಸಂದ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋದ ವ್ಯಕ್ತವಾಗಿತ್ತು. ಜಾಹೀರಾತಿನಿಂದ ಹಿಂದೆ ಸರಿಯುವಂತೆ ಸಂಘಟನೆಯೊಂದು ವಿನಂತಿಸಿತ್ತು. ಈ ವಿನಂತಿಗೆ ಒಪ್ಪಿದ್ದ ಅಮಿತಾಭ್​ ಕಳೆದ ಅಕ್ಟೋಬರ್‌ನಲ್ಲಿ ಕಮಲಾ ಪಸಂದ್ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಒಪ್ಪಂದದ ಮುಗಿದ ಹೊರತಾಗಿಯೂ ಕಮಲಾ ಪಸಂದ್ ಕಂಪನಿ ಅಮಿತಾಭ್ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಅಮಿತಾಭ್​ ಪಾನ್ ಮಸಾಲ ಬ್ರ್ಯಾಂಡ್‌ಗೆ ಕಾನೂನು ನೋಟಿಸ್ ಕಳುಹಿಸಿದ್ದಾರೆ.  

‘ಕಮಲಾ ಪಸಂದ್ ಅವರಿಗೆ ಅಮಿತಾಭ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಒಪ್ಪಂದ  ಮುಕ್ತಾಯಗೊಂಡಿದ್ದರೂ ಕಮಲಾ ಪಸಂದ್ ಅಮಿತಾಭ್​ ಇರುವ ಜಾಹೀರಾತನ್ನು ಪ್ರಸಾರ ಮಾಡಿದೆ’ ಎಂದು ಬಚ್ಚನ್​ ಕಾನೂನು ತಂಡದ ಮೂಲಗಳು ತಿಳಿಸಿವೆ.

‘ಪಾನ್ ಮಸಾಲಾ ಸೇವನೆಯು ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಭ್​ಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಬಚ್ಚನ್ ಅವರು ಜಾಹೀರಾತು ಪ್ರಚಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಂಪೂರ್ಣವಾಗಿ ಬದಲಾಯ್ತು ಅಭಿಷೇಕ್​ ಬಚ್ಚನ್​ ಚಹರೆ; ಇವರು ಅಮಿತಾಭ್​ ಮಗನಾ ಎಂದು ಪ್ರಶ್ನಿಸಿದ ಫ್ಯಾನ್ಸ್​

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ