ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಅಮಿತಾಭ್​ ಬಚ್ಚನ್​ ಮೇಲೆ ರಜನಿಕಾಂತ್​ ಅವರಿಗೆ ಅಪಾರ ಗೌರವ ಇದೆ. ಅನಂತ್​ ಅಂಬಾನಿಯ ಮದುವೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ರಜನಿಕಾಂತ್​ ಅವರ ಸರಳತೆ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ವಿವಾಹ ಸಮಾರಂಭಕ್ಕೆ ವಿದೇಶದಿಂದಲೂ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು.

ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?
ಅಮಿತಾಭ್​ ಬಚ್ಚನ್​, ರಜನಿಕಾಂತ್​
Follow us
ಮದನ್​ ಕುಮಾರ್​
|

Updated on: Jul 14, 2024 | 3:02 PM

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್​ ಲೈಫ್​ನಲ್ಲಿ ತುಂಬ ಸಿಂಪಲ್​. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್​ ಸೂಪರ್​ ಸ್ಟಾರ್​ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್​ ಬಚ್ಚನ್​ ಅವರನ್ನು ನೋಡಿದ ಕೂಡಲೇ ರಜನಿಕಾಂತ್​ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್​ ಬಚ್ಚನ್​ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.

ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಶೇರ್ವಾನಿ ಹಾಗೂ ಶಾಲ್​ ಧರಿಸಿ ಮಿಂಚಿದ್ದಾರೆ. ರಜನಿಕಾಂತ್​ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್​ ಹೊಂದಿದ್ದಾರೆ.

ಇದನ್ನೂ ಓದಿ: ಅನಂತ್​ ಅಂಬಾನಿ ವಿವಾಹದಲ್ಲಿ ರಜನಿಕಾಂತ್​ ಮಸ್ತ್​ ಡ್ಯಾನ್ಸ್​; ಯುವಕರೂ ನಾಚಬೇಕು

ರಾಧಿಕಾ ಮರ್ಚೆಂಟ್​ ಹಾಗೂ ಅನಂತ್​ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್​ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್​ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಜಾನ್ವಿ ಕಪೂರ್​, ಮಹೇಶ್​ ಬಾಬು, ರಿತೇಶ್ ದೇಶಮುಖ್​, ಜೆನಿಲಿಯಾ ದೇಶಮುಖ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ