ರಜನಿಕಾಂತ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿರುವ ಸಾಧನೆ ಅಪಾರ. ಹಾಗಿದ್ದರೂ ಕೂಡ ಅವರು ರಿಯಲ್ ಲೈಫ್ನಲ್ಲಿ ತುಂಬ ಸಿಂಪಲ್. ಅದಕ್ಕೆ ಅನೇಕ ಉದಾಹರಣೆಗಳಿವೆ. ರಜನಿಕಾಂತ್ ಸೂಪರ್ ಸ್ಟಾರ್ ಆಗಿದ್ದರೂ ಕೂಡ ತಮಗಿಂತ ಹಿರಿಯರಿಗೆ ಅವರು ಸಿಕ್ಕಾಪಟ್ಟೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ಅಮಿತಾಭ್ ಬಚ್ಚನ್ ಕಾಲಿಗೆ ನಮಸ್ಕಾರ ಮಾಡಲು ಮುಂದಾಗಿದ್ದೇ ಈ ಮಾತಿಗೆ ಸಾಕ್ಷಿ. ಇಬ್ಬರು ಲೆಜೆಂಡರಿ ವ್ಯಕ್ತಿಗಳ ಈ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಅಮಿತಾಭ್ ಬಚ್ಚನ್ ಮತ್ತು ರಜನಿಕಾಂತ್ ಅವರು ಭೇಟಿ ಆಗಿದ್ದಾರೆ. ಈ ವೇಳೆ ಅಮಿತಾಭ್ ಬಚ್ಚನ್ ಅವರನ್ನು ನೋಡಿದ ಕೂಡಲೇ ರಜನಿಕಾಂತ್ ಅವರು ಕಾಲಿಗೆ ನಮಸ್ಕರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರನ್ನು ಅಮಿತಾಭ್ ಬಚ್ಚನ್ ತಡೆದಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದಾರೆ.
ದೇಶ-ವಿದೇಶದ ಅನೇಕ ಸೆಲೆಬ್ರಿಟಿಗಳು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಅಮಿತಾಭ್ ಬಚ್ಚನ್ ಅವರು ಶೇರ್ವಾನಿ ಹಾಗೂ ಶಾಲ್ ಧರಿಸಿ ಮಿಂಚಿದ್ದಾರೆ. ರಜನಿಕಾಂತ್ ಅವರು ಎಂದಿನಂತೆ ಬಿಳಿ ಬಟ್ಟೆ ಧರಿಸಿ ಬಂದಿದ್ದಾರೆ. ಚಿತ್ರರಂಗದಲ್ಲಿ ಈ ಇಬ್ಬರೂ ದಿಗ್ಗಜರಿಗೆ ಹಲವು ದಶಕಗಳ ಅನುಭವ ಇದೆ. ಇಬ್ಬರೂ ಈಗಲೂ ಅಷ್ಟೇ ಡಿಮ್ಯಾಂಡ್ ಹೊಂದಿದ್ದಾರೆ.
ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹದಲ್ಲಿ ರಜನಿಕಾಂತ್ ಮಸ್ತ್ ಡ್ಯಾನ್ಸ್; ಯುವಕರೂ ನಾಚಬೇಕು
ರಾಧಿಕಾ ಮರ್ಚೆಂಟ್ ಹಾಗೂ ಅನಂತ್ ಅಂಬಾನಿಯ ಮದುವೆಗೆ ಬಾಲಿವುಡ್, ಹಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಸೆಲೆಬ್ರಿಟಿಗಳು ಬಂದಿದ್ದಾರೆ. ನಟ ಯಶ್ ಕೂಡ ಈ ಮದುವೆಗೆ ಸಾಕ್ಷಿ ಆಗಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಜಾನ್ವಿ ಕಪೂರ್, ಮಹೇಶ್ ಬಾಬು, ರಿತೇಶ್ ದೇಶಮುಖ್, ಜೆನಿಲಿಯಾ ದೇಶಮುಖ್, ರಣಬೀರ್ ಕಪೂರ್, ಆಲಿಯಾ ಭಟ್ ಸೇರಿದಂತೆ ಅನೇಕ ಕಲಾವಿದರು ಕುಟುಂಬ ಸಮೇತರಾಗಿ ಬಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.