ಐಶ್ವರ್ಯಾ ರೈನ ಅನ್​ಫಾಲೋ ಮಾಡಿದ ಅಮಿತಾಭ್​; ನಿಜವಾಯ್ತಾ ವಿಚ್ಛೇದನ ವಿಚಾರ?

ಐಶ್ವರ್ಯಾ ರೈ ಅವರು ಅಮಿತಾಭ್ ಸೊಸೆ. ಅವರೂ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕುಟುಂಬದ ಇತರ ಸದಸ್ಯರನ್ನು ಫಾಲೋ ಮಾಡುವ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಅವರನ್ನು ಲಿಸ್ಟ್​ನಿಂದ ಹೊರಗೆ ಇಟ್ಟಿದ್ದು ಏಕೆ ಎಂಬುದು ಅನೇಕರ ಪ್ರಶ್ನೆ.

ಐಶ್ವರ್ಯಾ ರೈನ ಅನ್​ಫಾಲೋ ಮಾಡಿದ ಅಮಿತಾಭ್​; ನಿಜವಾಯ್ತಾ ವಿಚ್ಛೇದನ ವಿಚಾರ?
ಅಮಿತಾಭ್-ಐಶ್ವರ್ಯಾ

Updated on: Dec 09, 2023 | 11:35 AM

ಅಮಿತಾಭ್ ಬಚ್ಚನ್ (Amitabh Bachchan) ಕುಟುಂಬದಲ್ಲಿ ಯಾವುದೂ ಸರಿ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಐಶ್ವರ್ಯಾ ರೈ ಅವರನ್ನು ಅಮಿತಾಭ್ ಅವರು ಅನ್​ಫಾಲೋ ಮಾಡಿದ್ದಾರೆ. ಇದು ಈಗ ಹುಟ್ಟಿರುವ ವದಂತಿಗೆ ಮತ್ತಷ್ಟು ಪುಷ್ಟಿ ಕೊಟ್ಟಿದೆ. ಈ ಬಗ್ಗೆ ಅಮಿತಾಭ್ ಬಚ್ಚನ್ ಅವರ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಅಮಿತಾಭ್ ಬಚ್ಚನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ 74 ಜನರನ್ನು ಫಾಲೋ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ವಿರಾಟ್ ಕೊಹ್ಲಿ, ಶ್ವೇತಾ ಬಚ್ಚನ್ ನಂದ, ನವ್ಯಾ ನವೇಲಿ ನಂದ ಮೊದಲಾದವರು ಅಮಿತಾಭ್ ಫಾಲೋ ಮಾಡುತ್ತಿದ್ದಾರೆ. ಆದರೆ, ಈ ಲಿಸ್ಟ್​ನಲ್ಲಿ ಐಶ್ವರ್ಯಾ ರೈ ಇಲ್ಲ.

ಐಶ್ವರ್ಯಾ ರೈ ಅವರು ಅಮಿತಾಭ್ ಸೊಸೆ. ಅವರೂ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕುಟುಂಬದ ಇತರ ಸದಸ್ಯರನ್ನು ಫಾಲೋ ಮಾಡುವ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಅವರನ್ನು ಲಿಸ್ಟ್​ನಿಂದ ಹೊರಗೆ ಇಟ್ಟಿದ್ದು ಏಕೆ ಎಂಬುದು ಅನೇಕರ ಪ್ರಶ್ನೆ. ಇನ್ನು, ಐಶ್ವರ್ಯಾ ರೈ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪತಿ ಅಭಿಷೇಕ್ ಅವರನ್ನು ಬಿಟ್ಟು ಬೇರೆ ಯಾರನ್ನೂ ಫಾಲೋ ಮಾಡುತ್ತಿಲ್ಲ.

ಇದನ್ನೂ ಓದಿ: ಶೀಘ್ರವೇ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ? ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ಇತ್ತೀಚೆಗೆ ‘ದಿ ಆರ್ಚೀಸ್’ ಸಿನಿಮಾದ ಪ್ರೀಮೀಯರ್ ಶೋ ನಡೆದಿತ್ತು. ಸೆಲೆಬ್ರಿಟಿ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಗಸ್ತ್ಯ ನಂದ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದರು. ಈ ವೇಳೆ ಐಶ್ವರ್ಯಾ ರೈ ಅಗಸ್ತ್ಯ ಅವರು ನಗುತ್ತಲೇ ಟೀಕೆ ಮಾಡಿದ್ದರು. ‘ನೀನು ಕ್ಯಾಮೆರಾ ಫೇಸ್ ಮಾಡೋದು ಕಲಿಯಬೇಕು’ ಎಂದು ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.  ಈ ಕಾರಣದಿಂದಲೇ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ಅನ್​ಫಾಲೋ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Sat, 9 December 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us