‘ಕಲ್ಕಿ 2898 ಎಡಿ’ ಚಿತ್ರದಿಂದ ಅಮಿತಾಭ್ ಬಚ್ಚನ್ ವೃತ್ತಿ ಜೀವನಕ್ಕೆ ಸಿಗಲಿದೆ ಮೈಲೇಜ್?

ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಕುರುಕ್ಷೇತ್ರದ ಯುದ್ಧದ ಬಳಿಕ ‘ಕಲ್ಕಿ 2898 ಎಡಿ’ ಸಿನಿಮಾದ ಕಥೆ ಆರಂಭ ಆಗುತ್ತದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿರುವುದರಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎನ್ನಲಾಗಿದೆ.

‘ಕಲ್ಕಿ 2898 ಎಡಿ’ ಚಿತ್ರದಿಂದ ಅಮಿತಾಭ್ ಬಚ್ಚನ್ ವೃತ್ತಿ ಜೀವನಕ್ಕೆ ಸಿಗಲಿದೆ ಮೈಲೇಜ್?
ಅಮಿತಾಭ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jun 27, 2024 | 12:18 PM

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ತಯಾರಾದ ಅತ್ಯಂತ ದುಬಾರಿ ಚಿತ್ರ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಪೌರಾಣಿಕ ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರದಲ್ಲಿ ಅಮಿತಾಭ್​ ಬಚ್ಚನ್ ನಟಿಸಿದ್ದಾರೆ. ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್, ನಟಿ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಬಹುದಿನಗಳ ನಿರೀಕ್ಷೆಯ ನಂತರ ಚಿತ್ರ ಇಂದು (ಜೂನ್ 27) ಬಿಡುಗಡೆಯಾಗಿದೆ. ಈ ಚಿತ್ರದಿಂದ ಅಮಿತಾಭ್​ಗೆ ದೊಡ್ಡ ಗೆಲುವಿನ ಅಗತ್ಯವಿದೆ.

‘ಕಲ್ಕಿ 2898 ಎಡಿ’ ನಿರ್ಮಾಪಕರು ಸಿನಿಮಾಗೆ 600 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಈ ಚಿತ್ರದ ನಿರ್ದೇಶಕರಿಗೆ ಅಮಿತಾಭ್​ ಬಚ್ಚನ್‌ಗೆ ಹಿಟ್ ನೀಡುವ ದೊಡ್ಡ ಜವಾಬ್ದಾರಿಯೂ ಇದೆ. ಅಮಿತಾಭ್​ ಬಚ್ಚನ್ ಕೂಡ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅಮಿತಾಭ್ ಬಚ್ಚನ್‌ಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಯಾವುದೇ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಗೆಲುವು ಕಾಣಲಿಲ್ಲ.

2019ರಲ್ಲಿ ಅಮಿತಾಭ್​ ಬಚ್ಚನ್ ‘ಬದ್ಲಾ’ ಚಿತ್ರದಲ್ಲಿ ಕಾಣಿಸಿಕೊಂಡರು. ಚಿತ್ರದಲ್ಲಿ ತಾಪ್ಸಿ ಪನ್ನು ಕೂಡ ಇದ್ದರು. ಸುಜೋಯ್ ಘೋಷ್ ಅವರ ನಿರ್ದೇಶನದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಯಿತು. ಅವರು ಮತ್ತೊಂದು ದೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. 2022ರಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಗೆಲುವಿನಲ್ಲಿ ರಣಬೀರ್ ಹಾಗೂ ಆಲಿಯಾ ಪಾತ್ರ ಹಿರಿಯದಿದೆ.

ಬಿಗ್ ಬಿ ಅವರ ಕೊನೆಯ ಏಳು ಚಿತ್ರಗಳ ಸ್ಥಿತಿ

ಸೈರಾ ನರಸಿಂಹ ರೆಡ್ಡಿ  (2019)

ಗುಲಾಬೋ ಸಿತಾಬೋ (2020)

ಚೆಹ್ರೆ (2021)

ಝುಂಡ್ (2022)

ರನ್​ವೇ 34 (2022)

ಬ್ರಹ್ಮಾಸ್ತ್ರ (2022)

ಗುಡ್​ಬೈ (2022)

ಊಂಚಾಯಿ (2022)

ಗಣಪತ್ (2023)

ಅಮಿತಾಭ್ ಬಚ್ಚನ್ ಅವರ ‘ಝುಂಡ್’ ಸೇರಿ ಇನ್ನೂ ಕೆಲವು ಚಿತ್ರಗಳು ವಿಮರ್ಶಕರಿಂದ ಪ್ರಶಂಸಿಸಲ್ಪಟ್ಟವು. ಆದರೆ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಹಣ ಗಳಿಸಲು ಸಾಧ್ಯವಾಗಲಿಲ್ಲ. ಈಗ ಎಲ್ಲರ ಕಣ್ಣು ‘ಕಲ್ಕಿ 2898 ಎಡಿ’ ಚಿತ್ರದ ಮೇಲಿದೆ. ಚಿತ್ರದ ಬಗ್ಗೆ ಗುಸುಗುಸು ಕೂಡ ಜೋರಾಗಿದೆ. ಮೊದಲ ದಿನದ ಮುಂಗಡ ಬುಕ್ಕಿಂಗ್ ಕೂಡ ಜೋರಾಗಿದೆ. ದೇಶದಲ್ಲಷ್ಟೇ ಅಲ್ಲ ವಿದೇಶಗಳಲ್ಲೂ ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಸಖತ್ ಆಗಿರುವುದು ಚಿತ್ರ ಹಲವು ದಾಖಲೆಗಳನ್ನು ಮುರಿಯಲಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ:  ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದ ಗಳಿಕೆ ಎಷ್ಟು? ಸೃಷ್ಟಿ ಆಗಲಿದೆ ದಾಖಲೆ?

‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಬಹಳ ದಿನಗಳಿಂದ ಯಾವುದೇ ದೊಡ್ಡ ಚಿತ್ರಗಳು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿಲ್ಲ. ಆದ್ದರಿಂದ ಹಿರಿಯ ತಾರೆಯರು ನಟಿಸಿದ ಕಲ್ಕಿ ಚಿತ್ರವನ್ನು ಪ್ರೇಕ್ಷಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಈ ಸಿನಿಮಾ ಮೊದಲ ದಿನ 200 ಕೋಟಿ ರೂಪಾಯಿ ಬಾಚಿಕೊಳ್ಳಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ