Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ

Aryan Khan: ಬಾಲಿವುಡ್ ನಟಿ ಅನನ್ಯಾ ಪಾಂಡೆಯವರನ್ನು ಎನ್​ಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಈ ವೇಲೆ ಅವರು ಭಯಗೊಂಡು ಕಣ್ಣೀರಿಟ್ಟಿದ್ದಾರೆ. ವಿಚಾರಣೆಯಲ್ಲಿ ಅವರು ಕೆಲವು ಶಾಕಿಂಗ್ ಹೇಳಿಕೆಗಳನ್ನು ನೀಡಿದ್ದಾರೆ.

Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ, ಆರ್ಯನ್ ಖಾನ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shivaprasad.hs

Updated on:Oct 22, 2021 | 12:35 PM

ಮುಂಬೈ: ಡ್ರಗ್ಸ್ ಕೇಸ್​ನಲ್ಲಿ ಆರ್ಯನ್ ಖಾನ್​​ ಬಂಧನದ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಾಲಿವುಡ್ ನಟಿ ಅನನ್ಯಾ ಪಾಂಡೆಗೆ ಎನ್​ಸಿಬಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ನಿನ್ನೆ (ಗುರುವಾರ) ಮುಂಬೈ NCB ಕಚೇರಿಗೆ ಬಂದಾಗ ಭಯಗೊಂಡಿದ್ದ ಅನನ್ಯಾ ಪಾಂಡೆ, ವಿಚಾರಣೆಗೂ ಮೊದಲು ಕಣ್ಣೀರಿಟ್ಟಿದ್ದರು. ಸಮಾಧಾನ ಮಾಡಿದ ಬಳಿಕ NCB ಅಧಿಕಾರಿಗಳು ಅವರನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್​ಸಿಬಿ ಅಧಿಕಾರಿಗಳ ಪ್ರಶ್ನೆಗೆ ಅವರು ಉತ್ತರಿಸಿದ್ದು, ಇಂದೂ ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ.

ನಟಿ ಅನನ್ಯಾ ಅವರನ್ನು ನಿನ್ನೆ ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಡ್ರಗ್ಸ್ ವಿಚಾರವಾಗಿ ಆರ್ಯನ್, ಅನನ್ಯಾ ನಡುವೆ ಚಾಟ್ ನಡೆದಿದ್ದರ ಕುರಿತು ಅದಿಕಾರಿಗಳು ಪ್ರಶ್ನಿಸಿದ್ದರು. ಈ ವೇಳೆ ಅನನ್ಯಾ, ತಾನು ಈವರೆಗೂ ಡ್ರಗ್ಸ್ ತೆಗೆದುಕೊಂಡಿಲ್ಲ. ಹಾಗೂ ಆರ್ಯನ್ ಖಾನ್ ಜತೆ ಡ್ರಗ್ಸ್ ವಿಚಾರವಾಗಿ ಚಾಟ್ ಮಾಡಿಲ್ಲ. ಸಿಗರೇಟ್ ಬಗ್ಗೆ ವಾಟ್ಸಾಪ್ ಮೆಸೇಜ್, ಸಂಭಾಷಣೆ ಮಾಡಿದ್ದೆವು. ಆದರೆ ಡ್ರಗ್ಸ್ ಬಗ್ಗೆ ವಾಟ್ಸಾಪ್‌ನಲ್ಲಿ ಮೆಸೇಜ್ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿ ವರದಿಗಳು ತಿಳಿಸಿವೆ.

ಇದೇ ವೇಳೆ ಎನ್​ಸಿಬಿ ಮೂಲಗಳ ಪ್ರಕಾರ, ಅನನ್ಯಾ ತಾವು ಆರ್ಯನ್​ಗೆ ಡ್ರಗ್ಸ್ ಒದಗಿಸಿಲ್ಲ ಮತ್ತು ಅವರ ವಿರುದ್ಧ ಅದಕ್ಕೆ ಯಾವ ಸಾಕ್ಷ್ಯಗಳೂ ಇಲ್ಲ ಎಂದು ತಿಳಿಸಿವೆ. ಆರ್ಯನ್ ಖಾನ್ ಅವರನ್ನು ಅಕ್ಟೋಬರ್ 2ರಂದು ಮುಂಬೈನ ಐಷಾರಾಮಿ ಹಡಗೊಂದರಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಇದುವರೆಗೆ ಹಲವರನ್ನು ಬಂಧಿಸಲಾಗಿದೆ ಎಂದು ಎನ್​ಸಿಬಿ ತಿಳಿಸಿದೆ. ಆರ್ಯನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ಹೈಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಅಕ್ಟೋಬರ್ 26ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Anushka Sharma: ಒಂದೇ ಒಂದು ಚಿತ್ರದಿಂದ ಅಭಿಮಾನಿಗಳ ಮನಗೆದ್ದ ಅನುಷ್ಕಾ; ಅಂಥದ್ದೇನಿದೆ ಅದರಲ್ಲಿ?

HBD Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ-ಪ್ರೇರಣಾ ವಿಶ್​; ಚಿರು ಪುತ್ರನಿಗೆ ಶುಭಾಶಯಗಳ ಸುರಿಮಳೆ

Published On - 12:32 pm, Fri, 22 October 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್