AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ಶಿಲ್ಪಾ, ಶಮಿತಾ ಹಾಗೂ ಸುನಂದಾ ಶೆಟ್ಟಿಗೆ ಸಮನ್ಸ್ ನೀಡಿದ ಅಂಧೇರಿ ನ್ಯಾಯಾಲಯ; ಏನಿದು ಪ್ರಕರಣ?

Sunanda Shetty | Shamita Shetty: ಬಾಲಿವುಡ್​ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ, ಅವರ ಸೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿಯವರಿಗೆ ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

Shilpa Shetty: ಶಿಲ್ಪಾ, ಶಮಿತಾ ಹಾಗೂ ಸುನಂದಾ ಶೆಟ್ಟಿಗೆ ಸಮನ್ಸ್ ನೀಡಿದ ಅಂಧೇರಿ ನ್ಯಾಯಾಲಯ; ಏನಿದು ಪ್ರಕರಣ?
ಶಿಲ್ಪಾ ಶೆಟ್ಟಿ, ಸುನಂದಾ ಶೆಟ್ಟಿ, ಶಮಿತಾ ಶೆಟ್ಟಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 13, 2022 | 1:19 PM

Share

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty), ಅವರ ಸಹೋದರಿ ಶಮಿತಾ ಶೆಟ್ಟಿ (Shamita Shetty) ಮತ್ತು ಅವರ ತಾಯಿ ಸುನಂದಾ ಶೆಟ್ಟಿಗೆ (Sunanda Shetty) ಅಂಧೇರಿ ನ್ಯಾಯಾಲಯವು ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ. 21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಆರೋಪಿಸಿ ಉದ್ಯಮಿಯೊಬ್ಬರು ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಫೆಬ್ರವರಿ 28 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಎಎನ್‌ಐ ಹಂಚಿಕೊಂಡಿರುವ ಟ್ವೀಟ್​ನಲ್ಲಿ ‘‘21 ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದ ಆರೋಪದ ಮೇಲೆ ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಅಂಧೇರಿ ನ್ಯಾಯಾಲಯವು ನಟಿ ಶಿಲ್ಪಾ ಶೆಟ್ಟಿ ಕುಂದ್ರಾ, ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 28 ರಂದು ಮೂವರಿಗೂ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ’’ ಎಂದು ತಿಳಿಸಲಾಗಿದೆ.

ಎಎನ್​ಐ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಪ್ರಕರಣದ ಕುರಿತು ಇಟೈಮ್ಸ್ ವರದಿ ಮಾಡಿದ್ದು, ಆಟೋಮೊಬೈಲ್ ಸಂಸ್ಥೆಯೊಮದರ ಮಾಲೀಕರು ತಮ್ಮ ಕಾನೂನು ಸಂಸ್ಥೆಯಾದ M/s Y & A Legal ಮೂಲಕ ಶಿಲ್ಪಾ ಸೇರಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ಯಮಿ ನೀಡಿರುವ ದೂರಿನ ಪ್ರಕಾರ, ಶಿಲ್ಪಾ ಅವರ ತಂದೆ ದಿವಂಗತ ಸುರೇಂದ್ರ 21 ಲಕ್ಷ ರೂ ಸಾಲವನ್ನು ಪಡೆದಿದ್ದರು. ಅದನ್ನು 2017ರ ಜನವರಿಯಲ್ಲಿ ಬಡ್ಡಿಯೊಂದಿಗೆ ಪಾವತಿಸಬೇಕಾಗಿತ್ತು. ಆದರೆ, ಸಾಲವನ್ನು ಮರುಪಾವತಿಸಲು ಶಿಲ್ಪಾ, ಶಮಿತಾ ಮತ್ತು ಸುನಂದಾ ವಿಫಲರಾಗಿದ್ದಾರೆ.

ಸುರೇಂದ್ರ ಅವರು ವರ್ಷಕ್ಕೆ 18% ಬಡ್ಡಿದರದಲ್ಲಿ ಸಾಲ ಪಡೆದಿದ್ದರು ಎಂದು ಇಟೈಮ್ಸ್ ತನ್ನ ವರದಿಯಲ್ಲಿ ತಿಳಿಸಿದೆ. ಸುರೇಂದ್ರ ಕಂಪನಿ ಪರವಾಗಿ ಚೆಕ್ ಬರೆದಿದ್ದು, ಸಾಲದ ವಿಚಾರ ಅವರ ಪುತ್ರಿಯರು ಮತ್ತು ಪತ್ನಿಗೆ ತಿಳಿದಿತ್ತು. ಸಾಲ ಮರುಪಾವತಿ ಮಾಡುವ ಮುನ್ನವೇ ಸುರೇಂದ್ರ ತೀರಿಕೊಂಡಿದ್ದರಿಂದ ಅದನ್ನು ತೀರಿಸುವ ಹೊಣೆಗಾರಿಕೆ ಅವರದಾಯಿತು, ಆದರೆ ಹಣ ಪಡೆದಿದ್ದನ್ನೂ ಅವರು ನಿರಾಕರಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ:

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಜೊತೆ ಶಿವಣ್ಣ-ಗೀತಾ; ಇಲ್ಲಿದೆ ಫೋಟೋ ಗ್ಯಾಲರಿ

Gehraiyaan: ‘ಗೆಹರಾಯಿಯಾ’, ‘ಖಿಲಾಡಿ’ಗೂ ಪೈರಸಿ ಕಾಟ; ತೆರೆ ಕಂಡ ಒಂದೇ ದಿನಕ್ಕೆ ಲೀಕ್ ಆಯ್ತು ಚಿತ್ರಗಳು

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!