AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಲಿರುವ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

‘ಅನಿಮಲ್​’ ಸಿನಿಮಾದ ಸಲುವಾಗಿ ಇಷ್ಟು ದಿನಗಳ ಕಾಲ ಸಂದೀಪ್​ ರೆಡ್ಡಿ ವಂಗಾ ಅವರು ಮುಂಬೈನಲ್ಲಿ ವಾಸವಾಗಿದ್ದರು. ಆದರೆ ಅವರು ಈಗ ಹೈದರಾಬಾದ್​ಗೆ ವಾಪಸ್​ ಬಂದಿದ್ದು, ಹೊಸ ಆಫೀಸ್​ ತೆರೆದಿದ್ದಾರೆ. ಪ್ರಭಾಸ್​ ಜೊತೆಗಿನ ಸಿನಿಮಾ ಹಾಗೂ ತಮ್ಮ ನಿರ್ಮಾಣದ ಚಿತ್ರಗಳ ಸಲುವಾಗಿ ಮುಂದಿನ ಎರಡು ವರ್ಷ ಅವರು ಈ ಆಫೀಸ್​ನಲ್ಲೇ ಕೆಲಸ ಮಾಡಲಿದ್ದಾರೆ.

ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಲಿರುವ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Mar 28, 2024 | 2:55 PM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ‘ಕಬೀರ್​ ಸಿಂಗ್​’ ಹಾಗೂ ‘ಅನಿಮಲ್​’ (Animal) ಸಿನಿಮಾಗಳ ಯಶಸ್ಸಿನ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಅವರನ್ನು ನಂಬಿಕೊಂಡು ನೂರಾರು ಕೋಟಿ ರೂಪಾಯಿ ಸುರಿಯಲು ನಿರ್ಮಾಪಕರು ಸಿದ್ಧವಾಗಿದ್ದಾರೆ. ಪ್ರಭಾಸ್​ (Prabhas) ನಟನೆಯ ಹೊಸ ಸಿನಿಮಾಗೆ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಈ ನಡುವೆ ಅವರು ನಿರ್ಮಾಣದಲ್ಲೂ ಆಸಕ್ತಿ ತೋರಿಸಿದ್ದಾರೆ. ವಿಶೇಷ ಏನೆಂದರೆ, ಕಡಿಮೆ ಬಜೆಟ್​ನ ಸಿನಿಮಾಗಳನ್ನು ಸಂದೀಪ್​ ರೆಡ್ಡಿ ವಂಗಾ ನಿರ್ಮಾಣ ಮಾಡಲಿದ್ದಾರೆ.

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ಮಾಣದಲ್ಲೂ ಆಸಕ್ತಿ ಹೊಂದಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಅವರು ಕಡಿಮೆ ಬಜೆಟ್​ನ ಸಿನಿಮಾಗಳನ್ನು ನಿರ್ಮಾಣ ಮಾಡಲಿದ್ದಾರೆ. ಅವರ ತಂಡದವರು ಈಗ ಸ್ಕ್ರಿಪ್ಟ್​ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಯಾವ ಕಥೆಯನ್ನು ಸಿನಿಮಾ ಮಾಡಬೇಕು ಎಂಬ ಅಂತಿಮ ನಿರ್ಧಾರವನ್ನು ಸಂದೀಪ್​ ರೆಡ್ಡಿ ವಂಗಾ ಅವರು ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಇಷ್ಟು ದಿನಗಳ ಕಾಲ ‘ಅನಿಮಲ್​’ ಸಿನಿಮಾದ ಸಲುವಾಗಿ ಸಂದೀಪ್​ ರೆಡ್ಡಿ ವಂಗಾ ಅವರು ಮುಂಬೈನಲ್ಲಿ ವಾಸವಾಗಿದ್ದರು. ಈಗ ಅವರು ಹೈದರಾಬಾದ್​ಗೆ ವಾಪಸ್​ ಬಂದಿದ್ದಾರೆ. ಹೈದರಾಬಾದ್​ನಲ್ಲಿ ಅವರು ಹೊಸ ಆಫೀಸ್​ ತೆರೆದಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಅವರು ಈ ಹೊಸ ಆಫೀಸ್​ನಲ್ಲೇ ಕೆಲಸ ಮಾಡಲಿದ್ದಾರೆ. ತಮ್ಮ ನಿರ್ಮಾಣದಲ್ಲಿ ಸಂದೀಪ್ ರೆಡ್ಡಿ ವಂಗ ಅವರು ಯಾವ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗಾ ಅವರು ಈವರೆಗೂ ನಿರ್ದೇಶಿಸಿರುವುದು ಮೂರು ಸಿನಿಮಾ (ಅರ್ಜುನ್​ ರೆಡ್ಡಿ, ಕಬೀರ್ ಸಿಂಗ್​, ಅನಿಮಲ್​) ಮಾತ್ರ. ಈ ಎಲ್ಲ ಸಿನಿಮಾಗಳು ಭಾರಿ ಟೀಕೆಗೆ ಒಳಗಾಗಿದ್ದವು. ಮಹಿಳಾ ವಿರೋಧಿ ಸಂಭಾಷಣೆ ಮತ್ತು ದೃಶ್ಯಗಳು ಇವೆ ಎಂಬ ಕಾರಣಕ್ಕೆ ಈ ಚಿತ್ರಗಳನ್ನು ಅನೇಕರು ಟೀಕಿಸಿದ್ದುಂಟು. ಆದರೆ ಅಂಥ ಟೀಕೆಗಳಿಗೆ ಸಂದೀಪ್ ರೆಡ್ಡಿ ವಂಗಾ ಅವರು ತಲೆ ಕೆಡಿಸಿಕೊಂಡಿಲ್ಲ. ಅವರ ಮುಂದಿನ ‘ಸ್ಪಿರಿಟ್​’ ಸಿನಿಮಾ ಹೇಗಿರಲಿದೆ ಎಂಬ ಕೌತುಕ ಎಲ್ಲರಲ್ಲೂ ಇದೆ. ಇತ್ತೀಚೆಗೆ ಸಂದೀಪ್​ ರೆಡ್ಡಿ ವಂಗಾ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿಕೊಟ್ಟಿದ್ದರು. ಆಗ ‘ಸ್ಪಿರಿಟ್​’ ಬಗ್ಗೆ ಮಾತನಾಡಿದ್ದರು. ಈ ಚಿತ್ರದ ಕೆಲಸಗಳು ಆರಂಭ ಆಗಿವೆ ಎಂದು ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ