ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..

Animal Movie Box Office Prediction: ಒಂದು ದೊಡ್ಡ ಗೆಲುವಿಗಾಗಿ ಬಾಲಿವುಡ್​ ನಟ ರಣಬೀರ್​ ಕಪೂರ್​ ಕಾದಿದ್ದಾರೆ. ‘ಅನಿಮಲ್​’ ಸಿನಿಮಾ ಮೂಲಕ ಅವರಿಗೆ ಆ ಗೆಲುವು ಸಿಗುವ ನಿರೀಕ್ಷೆ ಇದೆ. ಬುಧವಾರವೇ (ನ.29) ಅಂದಾಜು 20 ಕೋಟಿ ರೂಪಾಯಿಯಷ್ಟು ಅಡ್ವಾನ್ಸ್​ ಬುಕಿಂಗ್​ ಆಗಿದೆ. ಈ ಸಿನಿಮಾ ಗೆದ್ದರೆ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಲಿದೆ.

ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..
‘ಅನಿಮಲ್​’ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Nov 30, 2023 | 10:55 AM

ನಟ ರಣಬೀರ್​ ಕಪೂರ್​ (Ranbir Kapoor) ಅಭಿನಯದ ‘ಅನಿಮಲ್​’ ಸಿನಿಮಾ ಡಿಸೆಂಬರ್​ 1ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮಾಸ್​ ಅವತಾರದಲ್ಲಿ ಕಾಣಿಸಿಕೊಂಡಿರುವ ರಣಬೀರ್ ಕಪೂರ್​ ಅವರನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. ಮೊದಲ ದಿನ ಎಷ್ಟು ಕಲೆಕ್ಷನ್​ (Animal  Box Office Collection) ಮಾಡಬಹುದು ಎಂಬ ಕುತೂಹಲ ಎಲ್ಲರ ಮನದಲ್ಲೂ ಮೂಡಿದೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸಬಹುದು ಎಂದು ಅಂದಾಜಿಸಲಾಗುತ್ತಿದೆ. ‘ಅನಿಮಲ್​’ (Animal Movie) ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.

ರಣಬೀರ್​ ಕಪೂರ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಹಾಗಾಗಿ ‘ಅನಿಮಲ್​’ ಸಿನಿಮಾಗೆ ದೊಡ್ಡ ಓಪನಿಂಗ್​ ಸಿಗುವ ನಿರೀಕ್ಷೆ ಇದೆ. ಹಿಂದಿ ಮಾತ್ರವಲ್ಲದೇ ಕನ್ನಡ, ತೆಲುಗು, ತಮಿಳು ಮುಂತಾದ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ಸೌತ್​ ಡೈರೆಕ್ಟರ್​ ಸಂದೀಪ್​ ರೆಡ್ಡಿ ವಂಗಾ. ಈ ಹಿಂದೆ ಅವರು ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಸಿನಿಮಾಗಳ ಮೂಲಕ ಭರ್ಜರಿ ಸಕ್ಸಸ್​ ಕಂಡಿದ್ದರು. ಹಾಗಾಗಿ ಅವರ ಮೇಲೆ ಸಿನಿಪ್ರಿಯರಿಗೆ ಭರವಸೆ ಇದೆ. ಈ ಎಲ್ಲ ಕಾರಣದಿಂದ ಭಾರತದಲ್ಲಿ ಈ ಸಿನಿಮಾ ಮೊದಲ ದಿನ ಅಂದಾಜು 50 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಡಿ.1ರಂದು ‘ಅನಿಮಲ್​’ ಅದ್ದೂರಿ ಬಿಡುಗಡೆ; ಇಲ್ಲಿವೆ ಪೋಸ್ಟರ್​ಗಳು..

‘ಅನಿಮಲ್​’ ಸಿನಿಮಾಗೆ ‘ಟಿ-ಸಿರೀಸ್​’ ಸಂಸ್ಥೆ ಬಂಡವಾಳ ಹೂಡಿದೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದ ಅನುಭವಿ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಧೂಳೆಬ್ಬಿಸಿದೆ. ರಣಬೀರ್​ ಕಪೂರ್​ ಅವರ ಮಾಸ್​ ಲುಕ್​ ನೋಡಿ ಫ್ಯಾನ್ಸ್​ ಅಚ್ಚರಿಪಟ್ಟಿದ್ದಾರೆ. ಆ್ಯಕ್ಷನ್​ ದೃಶ್ಯಗಳನ್ನು ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: Ranbir Kapoor: ‘ರಣಬೀರ್​ ಕಪೂರ್​ ಅವರೇ ಭಾರತದ ಬೆಸ್ಟ್​ ನಟ’: ‘ಅನಿಮಲ್​’ ಹೀರೋಗೆ ಮಹೇಶ್​ ಬಾಬು ಮೆಚ್ಚುಗೆ

ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಲ್ಲಿ ‘ಅನಿಮಲ್​’ ಸಿನಿಮಾ ಧೂಳೆಬ್ಬಿಸುತ್ತಿದೆ. ಬುಧವಾರ (ನವೆಂಬರ್​ 29) ರಾತ್ರಿ ವೇಳೆಗೆ ಅಂದಾಜು 20 ಕೋಟಿ ರೂಪಾಯಿ ಮೊತ್ತದ ಟಿಕೆಟ್​ಗಳು ಸೇಲ್​ ಆಗಿದ್ದವು. ಈ ಟ್ರೆಂಡ್​ ಗಮನಿಸಿದರೆ ಈ ಚಿತ್ರಕ್ಕೆ ದೊಡ್ಡ ಓಪನಿಂಗ್​ ಸಿಗುವುದು ಗ್ಯಾರಂಟಿ ಎಂಬುದು ಸ್ಪಷ್ಟವಾಗುತ್ತಿದೆ. ದಕ್ಷಿಣ ಭಾರತದಲ್ಲೂ ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಮಹೇಶ್​ ಬಾಬು, ಎಸ್​.ಎಸ್​. ರಾಜಮೌಳಿ ಮುಂತಾದವರು ಭಾಗಿ ಆಗಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್