ತಣ್ಣಗಾಯ್ತು ‘ಅನಿಮಲ್​’ ಅಬ್ಬರ; ಸಾವಿರ ಕೋಟಿ ರೂಪಾಯಿ ಗಳಿಸುವ ಆಸೆ ಈಡೇರಲೇ ಇಲ್ಲ

2023ರಲ್ಲಿ ತೆರೆಕಂಡ ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳು ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿವೆ. 2022ರಲ್ಲಿ ಬಂದಿದ್ದ ‘ಕೆಜಿಎಫ್​: ಚಾಪ್ಟರ್​ 2’ ಮತ್ತು ‘ಆರ್​ಆರ್​ಆರ್​’ ಚಿತ್ರಗಳು ಕೂಡ ಸಾವಿರ ಕೋಟಿ ಕ್ಲಬ್​ ಸೇರಿದ್ದವು. ಆದರೆ ‘ಅನಿಮಲ್​’ ಸಿನಿಮಾಗೆ ಇದು ಸಾಧ್ಯವಾಗಿಲ್ಲ.

ತಣ್ಣಗಾಯ್ತು ‘ಅನಿಮಲ್​’ ಅಬ್ಬರ; ಸಾವಿರ ಕೋಟಿ ರೂಪಾಯಿ ಗಳಿಸುವ ಆಸೆ ಈಡೇರಲೇ ಇಲ್ಲ
ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
|

Updated on: Dec 19, 2023 | 6:26 PM

ನಟ ರಣಬೀರ್​ ಕಪೂರ್​ (Ranbir Kapoor) ಅವರು ‘ಅನಿಮಲ್​’ ಸಿನಿಮಾದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಭರ್ಜರಿಯಾಗಿ ಅಬ್ಬರಿಸಿದೆ. ಈ ವರ್ಷದ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ಸಿನಿಮಾಗಳ ಪಟ್ಟಿಯಲ್ಲಿ ಅನಿಮಲ್​’ ಚಿತ್ರ (Animal Movie) ಕೂಡ ಸ್ಥಾನ ಪಡೆದುಕೊಂಡಿದೆ. ಆದರೆ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ಇನ್ನು ಎರಡೇ ದಿನಗಳಲ್ಲಿ ಈ ಸಿನಿಮಾದ ಹವಾ ಬಹುತೇಕ ಕಡಿಮೆ ಆಗಲಿದೆ. ‘ಡಂಕಿ’ ಮತ್ತು ‘ಸಲಾರ್​’ ಸಿನಿಮಾಗಳು ಬಿಡುಗಡೆಯಾದರೆ ‘ಅನಿಮಲ್​’ ಕಲೆಕ್ಷನ್​ (Animal Box Office Collection) ಗಣನೀಯವಾಗಿ ಕುಸಿಯಲಿದೆ.

17 ದಿನಕ್ಕೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಬರೋಬ್ಬರಿ 517 ಕೋಟಿ ರೂಪಾಯಿ ಗಳಿಸಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ ಆಗಿರುವುದು 853 ಕೋಟಿ ರೂಪಾಯಿ ಕಲೆಕ್ಷನ್​. ಸಾವಿರ ಕೋಟಿ ರೂಪಾಯಿ ಗಡಿ ಮುಟ್ಟಬೇಕು ಎಂದರೆ ಇನ್ನೂ ಅನೇಕ ದಿನಗಳ ಕಾಲ ಪ್ರದರ್ಶನ ಕಾಣಬೇಕು. ಆದರೆ ಈಗ ‘ಡಂಕಿ’ ಮತ್ತು ‘ಸಲಾರ್​’ ಸಿನಿಮಾ ಚಿತ್ರಮಂದಿರಗಳನ್ನು ಆಕ್ರಮಿಸಿಕೊಳ್ಳುವುದರಿಂದ ‘ಅನಿಮಲ್​’ ಚಿತ್ರಕ್ಕೆ ಶೋಗಳ ಸಂಖ್ಯೆ ಕಡಿಮೆ ಆಗಲಿದೆ.

ಇದನ್ನೂ ಓದಿ: ‘ಅನಿಮಲ್​’ ಸೂಪರ್​ ಹಿಟ್​ ಆದ ಬಳಿಕ ಹೆಚ್ಚಿದೆ ಬಾಬಿ ಡಿಯೋಲ್​ ಬೇಡಿಕೆ

‘ಅನಿಮಲ್​’ ಸಿನಿಮಾದಲ್ಲಿ ರಣಬೀರ್​ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಶಕ್ತಿ ಕಪೂರ್​, ತೃಪ್ತಿ ದಿಮ್ರಿ, ಬಾಬಿ ಡಿಯೋಲ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ಈ ಸಿನಿಮಾಗೆ ವಿಮರ್ಶಕರಿಂದ ಟೀಕೆ ವ್ಯಕ್ತವಾಗಿದೆ. ಆದರೂ ಕೂಡ ಸಿನಿಮಾ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಕಾಲಿಡಲಿರುವ ಬಾಬಿ ಡಿಯೋಲ್​ ಮಕ್ಕಳು; ಆದರೆ ಒಂದು ಷರತ್ತು ಹಾಕಿದ ‘ಅನಿಮಲ್​’ ನಟ

2023ರಲ್ಲಿ ತೆರೆಕಂಡ ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳು ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿವೆ. 2022ರಲ್ಲಿ ಬಂದಿದ್ದ ‘ಕೆಜಿಎಫ್​: ಚಾಪ್ಟರ್​ 2’ ಮತ್ತು ‘ಆರ್​ಆರ್​ಆರ್​’ ಚಿತ್ರಗಳು ಕೂಡ ಸಾವಿರ ಕೋಟಿ ಕ್ಲಬ್​ ಸೇರಿದ್ದವು. ಆದರೆ ‘ಅನಿಮಲ್​’ ಸಿನಿಮಾಗೆ ಇದು ಸಾಧ್ಯವಾಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ