ಬಾಕ್ಸ್ ಆಫೀಸ್ನಲ್ಲಿ ನಡೆಯಲೇ ಇಲ್ಲ ಸಲ್ಮಾನ್ ಕಮಾಲ್; ‘ಅಂತಿಮ್’ ಸಿನಿಮಾ ಗಳಿಕೆ ಮಾಡಿದ್ದೆಷ್ಟು?
‘ಅಂತಿಮ್: ದಿ ಫೈನಲ್ ಟ್ರುತ್’ ಚಿತ್ರದಲ್ಲಿ ಸಲ್ಮಾನ್ ಖಾನ್ ಸಿಖ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ, ಅವರ ಭಾಮೈದ ಆಯುಶ್ ಶರ್ಮಾ ಗ್ಯಾಂಗ್ಸ್ಟರ್ ಆಗಿ ಮಿಂಚಿದ್ದಾರೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತಿದೆ.
ಸಲ್ಮಾನ್ ಖಾನ್ ಹಾಗೂ ಆಯುಷ್ ಶರ್ಮಾ ನಟನೆಯ ‘ಅಂತಿಮ್: ದಿ ಫೈನಲ್ ಟ್ರುತ್’ ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿದೆ. ಆದಾಗ್ಯೂ ಸಲ್ಮಾನ್ ಖಾನ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಂದುಕೊಂಡ ಮಟ್ಟಿಗೆ ಗಳಿಕೆ ಮಾಡುತ್ತಿಲ್ಲ. ಇದು ಅವರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ. ಇದಕ್ಕೆ ಫ್ಯಾನ್ಸ್ ನಾನಾ ಕಾರಣಗಳನ್ನೂ ನೀಡುತ್ತಿದ್ದಾರೆ. ಹಾಗಾದರೆ ಈ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
‘ಅಂತಿಮ್: ದಿ ಫೈನಲ್ ಟ್ರುತ್’ ಚಿತ್ರದಲ್ಲಿ ಸಲ್ಮಾನ್ ಖಾನ್ ಸಿಖ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ, ಅವರ ಭಾಮೈದ ಆಯುಶ್ ಶರ್ಮಾ ಗ್ಯಾಂಗ್ಸ್ಟರ್ ಆಗಿ ಮಿಂಚಿದ್ದಾರೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತಿದೆ. ಈ ಸಿನಿಮಾ ಮೊದಲ ದಿನ 4.55 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶನಿವಾರ (ನವೆಂಬರ್ 27) ಈ ಚಿತ್ರ 5.50 ಕೋಟಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಒಟ್ಟು ಗಳಿಕೆ 10 ಕೋಟಿ ರೂಪಾಯಿ ಆಗಿದೆ. ಇಂದು (ನವೆಂಬರ್ 28) ಭಾನುವಾರ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡುವ ನಿರೀಕ್ಷೆ ಇದೆ. ಸಿನಿಮಾ ಬಗ್ಗೆ ಒಳ್ಳೆಯ ಟಾಕ್ ಶುರುವಾಗಿರುವುದರಿಂದ ಚಿತ್ರದ ಕಲೆಕ್ಷನ್ ಹೆಚ್ಚುವ ನಿರೀಕ್ಷೆ ಇದೆ.
ಅಕ್ಷಯ್ ಕುಮಾರ್ ನಟನೆಯ ‘ಸೂರ್ಯವಂಶಿ’ ಸಿನಿಮಾ ಮೊದಲ ದಿನ ಬರೋಬ್ಬರಿ 26 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಸಲ್ಮಾನ್ ಖಾನ್ ಸಿನಿಮಾ ಅಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತಿಲ್ಲ. ಹಾಗಾದರೆ, ಇದಕ್ಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಅಂತಿಮ್’ ಸಿನಿಮಾದಲ್ಲಿ ಆಯುಶ್ ಶರ್ಮಾ ಸಂಪೂರ್ಣವಾಗಿ ಆವರಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಪಾತ್ರ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಇದು ಸಲ್ಲು ಸಿನಿಮಾ ಅನ್ನೋದಕ್ಕಿಂತ, ಆಯುಶ್ ಶರ್ಮಾ ಸಿನಿಮಾ ಅನ್ನೋದು ಉತ್ತಮ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರಣಕ್ಕೆ ಈ ಸಿನಿಮಾ ಅಷ್ಟಾಗಿ ಗಳಿಕೆ ಮಾಡುತ್ತಿಲ್ಲ ಎನ್ನಲಾಗಿದೆ.
‘ಅಂತಿಮ್’ ಸಿನಿಮಾ ನೋಡೋಕೆ ಚಿತ್ರಮಂದಿರಕ್ಕೆ ತೆರಳಿದ ಅಭಿಮಾನಿಗಳು ಒಳ ಭಾಗದಲ್ಲೇ ಪಟಾಕಿ ಹೊಡೆದಿದ್ದರು. ಈ ಬಗ್ಗೆ ಸಲ್ಮಾನ್ ಖಾನ್ ಅಸಮಾಧಾನ ಹೊರ ಹಾಕಿದ್ದರು.
ಇದನ್ನೂ ಓದಿ: RRR ರಿಲೀಸ್ಗೂ ಮುನ್ನವೇ ಸಲ್ಮಾನ್ ಖಾನ್ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್ಡೇಟ್