Anupam Kher: ರವೀಂದ್ರನಾಥ್​ ಟ್ಯಾಗೋರ್​ ಪಾತ್ರದಲ್ಲಿ ಅನುಪಮ್​ ಖೇರ್​; ‘ದಿ ಕಾಶ್ಮೀರ್​ ಫೈಲ್ಸ್​’ ನಟನ 538ನೇ ಸಿನಿಮಾ ಇದು

Rabindranath Tagore: ‘ನನ್ನ 538ನೇ ಸಿನಿಮಾದಲ್ಲಿ ಗುರುದೇವ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರ ಮಾಡಲು ಖುಷಿ ಆಗುತ್ತಿದೆ’ ಎಂದು ಅನುಪಮ್​ ಖೇರ್​ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಫಸ್ಟ್​ ಲುಕ್​ ವೈರಲ್​ ಆಗಿದೆ.

Anupam Kher: ರವೀಂದ್ರನಾಥ್​ ಟ್ಯಾಗೋರ್​ ಪಾತ್ರದಲ್ಲಿ ಅನುಪಮ್​ ಖೇರ್​; ‘ದಿ ಕಾಶ್ಮೀರ್​ ಫೈಲ್ಸ್​’ ನಟನ 538ನೇ ಸಿನಿಮಾ ಇದು
ಅನುಪಮ್​ ಖೇರ್
Follow us
ಮದನ್​ ಕುಮಾರ್​
|

Updated on:Jul 08, 2023 | 4:52 PM

ನಟ ಅನುಪಮ್​ ಖೇರ್​ (Anupam Kher) ಅವರು ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಹೊಂದಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’  (The Kashmir Files) ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಿತು. ಆ ಸಿನಿಮಾದಲ್ಲಿ ಕಾಶ್ಮೀರಿ ಪಂಡಿತನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈಗ ಅನುಪಮ್​ ಖೇರ್​ ಅವರಿಗೆ 68 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ತುಂಬ ಆಕ್ಟೀವ್​ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರ ನೂತನ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ರವೀಂದ್ರನಾಥ್​ ಟ್ಯಾಗೋರ್ (Rabindranath Tagore)​ ಪಾತ್ರದಲ್ಲಿ ಅನುಪಮ್​ ಖೇರ್​ ಅಭಿನಯಿಸುತ್ತಿದ್ದಾರೆ ಎಂಬುದು ವಿಶೇಷ. ಇದು ಅವರು ನಟಿಸುತ್ತಿರುವ 583ನೇ ಸಿನಿಮಾ ಆಗಲಿದೆ.

ಬೆಂಗಾಲಿ ಕವಿ, ಲೇಖಕ, ತತ್ವಜಾನಿ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರವನ್ನು ಮಾಡುವುದು ಎಂದರೆ ಸುಲಭದ ಮಾತಲ್ಲ. ಆ ಪಾತ್ರಕ್ಕಾಗಿ ಅನುಪಮ್​ ಖೇರ್​ ಆಯ್ಕೆ ಆಗಿದ್ದಾರೆ. ಈ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಅವರು ಸಖತ್​ ಖುಷಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ಅಚ್ಚರಿ ಎನಿಸಿದೆ. ‘ಇದು ನೀವು ಅಂತ ಕಂಡು ಹಿಡಿಯಲು ಸಾಧ್ಯವೇ ಆಗುತ್ತಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ಅಂದಹಾಗೆ, ಈ ಸಿನಿಮಾದ ಶೀರ್ಷಿಕೆ ಏನು? ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರೆ? ನಿರ್ದೇಶನ ಮಾಡೋದು ಯಾರು? ಯಾವ ಬ್ಯಾನರ್​ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ? ಈ ಯಾವ ಪ್ರಶ್ನೆಗಳಿಗೂ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಕೇವಲ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಅನುಪಮ್​ ಖೇರ್​ ಅವರು ಕುತೂಹಲ ಮೂಡಿಸಿದ್ದಾರೆ. 2019ರಲ್ಲಿ ಬಿಡುಗಡೆಯಾದ ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಸಿನಿಮಾದಲ್ಲಿ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಪಾತ್ರಕ್ಕೆ ಅನುಪಮ್​ ಖೇರ್​ ಬಣ್ಣ ಹಚ್ಚಿದ್ದರು. ಈಗ ಮತ್ತೊಂದು ರಿಯಲ್​ ಲೈಫ್​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿರುವುಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: Vijay 69: ಅನುಪಮ್​ ಖೇರ್​ ಹೊಸ ಚಿತ್ರಕ್ಕೆ ‘ವಿಜಯ್​ 69’ ಶೀರ್ಷಿಕೆ; ಇಂಥ ಟೈಟಲ್​ ಇಟ್ಟಿದ್ದಕ್ಕೆ ಇದೆ ಒಂದು ಕಾರಣ

‘ನನ್ನ 538ನೇ ಸಿನಿಮಾದಲ್ಲಿ ಗುರುದೇವ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರ ಮಾಡಲು ಖುಷಿ ಆಗುತ್ತಿದೆ. ಸಮಯ ಬಂದಾಗ ಹೆಚ್ಚಿನ ಮಾಹಿತಿ ಹಂಚಿಕೊಳ್ಳುತ್ತೇನೆ. ತೆರೆಮೇಲೆ ಇಂಥ ಪಾತ್ರ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ’ ಎಂದು ಅನುಪಮ್​ ಖೇರ್​ ಅವರು ಪೋಸ್ಟ್​ ಮಾಡಿದ್ದಾರೆ. ಇದಲ್ಲದೇ, ‘ದಿ ವ್ಯಾಕ್ಸಿನ್​ ವಾರ್​’, ‘ಎಮರ್ಜೆನ್ಸಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:02 pm, Sat, 8 July 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್