AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ

ಅನುರಾಗ್ ಕಶ್ಯಪ್, ಬ್ರಾಹ್ಮಣರ ಬಗ್ಗೆ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ ಬ್ರಾಹ್ಮಣರ ಸಂಘವೊಂದು. ಹಲವು ಬ್ರಾಹ್ಮಣ ಸಂಘಟನೆಗಳು ಈ ವಿಷಯದಲ್ಲಿ ಆನ್‌ಲೈನ್ ಸಭೆ ನಡೆಸಿ ಕಶ್ಯಪ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಬ್ರಾಹ್ಮಣ ಸಮುದಾಯದ ತ್ಯಾಗ ಮತ್ತು ಕೊಡುಗೆಗಳನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿವೆ.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ
Anurag Kashyap
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 20, 2025 | 4:39 PM

Share

ಬ್ರಾಹ್ಮಣ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ನಂತರ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ವಿರುದ್ಧ ಚಾಣಕ್ಯ ಸೇನಾ ಶನಿವಾರ ಹೇಳಿಕೆ ನೀಡಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಚಾಣಕ್ಯ ಸೇನಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದೆ ಎಂದಿದೆ. ಅನುರಾಗ್ ಅವರ ಹೇಳಿಕೆಗಳ ವಿರುದ್ಧ ಹಲವಾರು ಬ್ರಾಹ್ಮಣ ಸಂಘಟನೆಗಳು ಶನಿವಾರ ಆನ್‌ಲೈನ್ ಸಭೆ ನಡೆಸಿದವು. ಇದರಲ್ಲಿ ಚಾಣಕ್ಯ ಸೇನೆ, ಅಖಿಲ ಬ್ರಾಹ್ಮಣ ಮಹಾಸಭಾ, ಬ್ರಾಹ್ಮಣ ಸೇವಾ ಸಂಘ, ಅಖಿಲ ಭಾರತ ಬ್ರಾಹ್ಮಣ ಮಹಾಸಭಾ, ವಿಶ್ವ ಬ್ರಾಹ್ಮಣ ಪರಿಷತ್ ಮತ್ತು ಅಖೀರ್ ಭಾರತೀಯ ಬ್ರಾಹ್ಮಣ ಸಂಘ ಸೇರಿವೆ. ಸರ್ವ ಬ್ರಾಹ್ಮಣ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಚಾಣಕ್ಯ ಸೇನೆಯ ಮುಖ್ಯ ಪೋಷಕರಾದ ಪಂಡಿತ್ ಸುರೇಶ್ ಮಿಶ್ರಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

‘ಬ್ರಾಹ್ಮಣರ ಬಗ್ಗೆ ಆಧಾರರಹಿತ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜವನ್ನು ವಿಭಜಿಸುತ್ತಿರುವ ಅನುರಾಗ್ ಕಶ್ಯಪ್ ಅವರಂತಹ ಜನರಿಗೆ ಪಾಠ ಕಲಿಸಬೇಕಾಗಿದೆ. ಈ ದೇಶಕ್ಕಾಗಿ ಬ್ರಾಹ್ಮಣ ಸಮುದಾಯ ತ್ಯಾಗ ಮಾಡಿಲ್ಲವೇ? ಎಲ್ಲರ ಕಲ್ಯಾಣಕ್ಕಾಗಿ ಮಾತನಾಡುವ ಮತ್ತು ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಬ್ರಾಹ್ಮಣರ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಪಾಠ ಕಲಿಸಬೇಕಾಗಿದೆ’ ಎಂದು ಮಿಶ್ರಾ ಅಸಮಾಧಾನ ವ್ಯಕ್ತಪಡಿಸಿದರು.

‘ಸಮಾಜದಲ್ಲಿ ಪರಸ್ಪರ ಗೌರವವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಇಂತಹ ವಿನಾಶಕಾರಿ ಜನರನ್ನು ಬಲವಾಗಿ ವಿರೋಧಿಸಬೇಕು. ಸರ್ವಜನ ಹಿತಾಯ ಮತ್ತು ಸರ್ವಜನ ಸುಖಾಯ ಎಂಬ ಮನೋಭಾವದಿಂದ ಕೆಲಸ ಮಾಡುವ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಇಂತಹ ಜನರನ್ನು ಅವಮಾನಿಸಬೇಕು, ಇದರಿಂದ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುವುದಿಲ್ಲ’ ಎಂದು ಮಿಶ್ರಾ ಹೇಳಿದರು.

ಇದನ್ನೂ ಓದಿ:ಬ್ರಾಹ್ಮಣರ ಬಗ್ಗೆ ಹೇಳಿಕೆ, ಕ್ಷಮೆ ಕೇಳಿದ ಅನುರಾಗ್ ಕಶ್ಯಪ್

ಜೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಜೀವನ ಆಧರಿಸಿದ ‘ಫುಲೆ’ ಸಿನಿಮಾಕ್ಕೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಈ ಕಾರಣದಿಂದ ಸೆನ್ಸಾರ್ ಮಂಡಳಿ ಸಿನಿಮಾಗೆ ವಿರೋಧ ಹೊರಹಾಕಿದೆ. ಅಲ್ಲದೆ, ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಇದೇ ಕಾರಣಕ್ಕೆ ಅನುರಾಗ್ ಕಶ್ಯಪ್ ಸಿಟ್ಟಾಗಿದ್ದು ಸಿಬಿಎಫ್​ಸಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುವಾಗ, ‘ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಏನಿವಾಗ’ ಎಂದು ಅನುರಾಗ್ ಕಶ್ಯಪ್ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು