AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾಗಿಂತ ವಿರಾಟ್ ಕೊಹ್ಲಿ ಎಷ್ಟು ಶ್ರೀಮಂತರು?

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮದುವೆ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಈಗ ಇಬ್ಬರು ಮಕ್ಕಳು. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯೇ ಅವರು ಸೆಟಲ್ ಆಗಲಿದ್ದಾರೆ ಎನ್ನುವ ಮಾತಿದೆ. ಈಗ ಅನುಷ್ಕಾ ಹಾಗೂ ವಿರಾಟ್ ಅವರ ಆಸ್ತಿ ಬಗ್ಗೆ ಚರ್ಚೆ ಆಗಿದೆ.

ಅನುಷ್ಕಾ ಶರ್ಮಾಗಿಂತ ವಿರಾಟ್ ಕೊಹ್ಲಿ ಎಷ್ಟು ಶ್ರೀಮಂತರು?
ಅನುಷ್ಕಾ-ವಿರಾಟ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jul 10, 2024 | 11:57 AM

Share

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಟಿ20 ವಿಶ್ವಕಪ್‌ ಫೈನಲ್​ನಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಆಟ ಆಡಿದ್ದಾರೆ. ವಿರಾಟ್ ಭಾರತ ತಂಡದೊಂದಿಗೆ ಮರಳಿದ್ದಾರೆ. ಆ ಬಳಿಕ ಅವರು ಶೀಘ್ರವೇ ಲಂಡನ್​ಗೆ ತೆರಳಿದ್ದಾರೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯೇ ಅವರು ಸೆಟಲ್ ಆಗಲಿದ್ದಾರೆ ಎನ್ನುವ ಮಾತಿದೆ. ಈಗ ಅನುಷ್ಕಾ ಹಾಗೂ ವಿರಾಟ್ ಅವರ ಆಸ್ತಿ ಬಗ್ಗೆ ಚರ್ಚೆ ಆಗಿದೆ.

ಅನುಷ್ಕಾ ಶರ್ಮಾ ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು. 2018ರಲ್ಲಿ ಅನುಷ್ಕಾ ಶರ್ಮಾ ಅಂತಿಮವಾಗಿ ‘ಝೀರೋ’ ಚಿತ್ರದಲ್ಲಿ ನಟಿಸಿದರು. ಅನುಷ್ಕಾ ಶರ್ಮಾ ಅವರ ಈ ಚಿತ್ರ ಫ್ಲಾಪ್ ಆಗಿತ್ತು. ಆ ಬಳಿಕ ಅವರು ನಟನೆಯಿಂದ ದೂರ ಆದರು. ಆದಾಗ್ಯೂ ಅನುಷ್ಕಾ ಶರ್ಮಾ ಕೋಟಿಗಟ್ಟಲೆ ಸಂಪಾದಿಸುತ್ತಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಸಾವಿರಾರು ಕೋಟಿ ಸಂಪತ್ತಿನ ಒಡೆಯರು.

ಅನುಷ್ಕಾ ಶರ್ಮಾ ನಟಿಸದೇ ಇದ್ದರೂ ಕೈತುಂಬಾ ಹಣ ಸಂಪಾದಿಸುತ್ತಾರೆ. ಅನುಷ್ಕಾ ಶರ್ಮಾ ಜಾಹೀರಾತುಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಭಾರಿ ಶುಲ್ಕವನ್ನು ವಿಧಿಸುತ್ತಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ಕ್ರಿಕೆಟ್, ಜಾಹೀರಾತುಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಸಾಕಷ್ಟು ಆದಾಯವನ್ನು ಗಳಿಸುತ್ತಾರೆ. ವರದಿಯ ಪ್ರಕಾರ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಅವರ ಆಸ್ತಿ ಮೌಲ್ಯ 1300 ಕೋಟಿ. ಈ ಪೈಕಿ ವಿರಾಟ್ ಕೊಹ್ಲಿ ಆಸ್ತಿ 1050 ಕೋಟಿ ರೂ. ಹಾಗೂ ಅನುಷ್ಕಾ ಶರ್ಮಾ ಅವರ ಆಸ್ತಿ 255 ಕೋಟಿ ರೂಪಾಯಿ.

ವಿರಾಟ್ ಕೊಹ್ಲಿ ಬಿಸಿಸಿಐನಿಂದ ವರ್ಷಕ್ಕೆ 7 ಕೋಟಿ ರೂಪಾಯಿ ಪಡೆಯುತ್ತಾರೆ. ಅಲ್ಲದೆ ಪ್ರತಿ ಪಂದ್ಯಕ್ಕೂ ಪ್ರತ್ಯೇಕ ಸಂಭಾವನೆ ಪಡೆಯುತ್ತಾರೆ. ವಿರಾಟ್ ಕೊಹ್ಲಿ ಜಾಹೀರಾತುಗಳು ಮತ್ತು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಿಗೆ 8-9 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ವಿರಾಟ್ ಪೋಸ್ಟ್ ಮಾಡೋದು ಬಹುತೇಕ ಜಾಹೀರಾತುಗಳೇ.

ಇದನ್ನೂ ಓದಿ: ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್ ಕೂಡ ಒಬ್ಬರು; ಕಿಚ್ಚನ ಒಟ್ಟೂ ಆಸ್ತಿ ಎಷ್ಟು?

ಅನುಷ್ಕಾ ಶರ್ಮಾ ಒಂದು ಚಿತ್ರಕ್ಕೆ 7 ಕೋಟಿ ಚಾರ್ಜ್ ಮಾಡುತ್ತಾರೆ. ಜಾಹೀರಾತಿಗಾಗಿ ಅನುಷ್ಕಾ 5 ರಿಂದ 10 ಕೋಟಿ ತೆಗೆದುಕೊಳ್ಳುತ್ತಾರೆ. ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಿಗೆ 1 ಕೋಟಿ ರೂಪಾಯಿ ಪಡೆಯುತ್ತಾರೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತ ಮತ್ತು ಲಂಡನ್ ಸೇರಿದಂತೆ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿದೇಶಕ್ಕೆ ಶಿಫ್ಟ್ ಆಗಲಿದ್ದಾರೆ ಎಂಬ ನಿರಂತರ ಚರ್ಚೆ ನಡೆಯುತ್ತಿದೆ. ಆದರೆ, ಇಬ್ಬರೂ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.