Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಅನ್ನೋದಕ್ಕೆ ಇಲ್ಲಿದೆ ವಿಡಿಯೋ ಸಾಕ್ಷಿ

ಅನುಷ್ಕಾ ಶರ್ಮಾ ಅವರು ಇತ್ತೀಚೆಗೆ ಆಸ್ಪತ್ರೆ ಒಂದಕ್ಕೆ ಭೇಟಿ ನೀಡಿದ್ದರು. ಇದು ಪ್ರೆಗ್ನೆನ್ಸಿಗೆ ಸಂಬಂಧಿಸಿದ ಆಸ್ಪತ್ರೆ. ಈ ಕಾರಣದಿಂದಲೇ ಅವರು ಪ್ರೆಗ್ನೆಂಟ್ ಎನ್ನುವ ಸುದ್ದಿ ಹರಿದಾಡಿತ್ತು. ಇದರ ಜೊತೆಗೆ ಅನುಷ್ಕಾ ಶರ್ಮಾ ಅವರು ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಂಡಿಲ್ಲ.

ಅನುಷ್ಕಾ ಶರ್ಮಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಅನ್ನೋದಕ್ಕೆ ಇಲ್ಲಿದೆ ವಿಡಿಯೋ ಸಾಕ್ಷಿ
ಅನುಷ್ಕಾ ವಿರಾಟ್
Follow us
ರಾಜೇಶ್ ದುಗ್ಗುಮನೆ
|

Updated on: Nov 10, 2023 | 10:42 AM

ಅನುಷ್ಕಾ ಶರ್ಮಾ (Anushka Sharma) ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಕೆಲ ತಿಂಗಳಿಂದ ಕೇಳಿ ಬರುತ್ತಲೇ ಇದೆ. ಈ ಬಗ್ಗೆ ಅನುಷ್ಕಾ ಶರ್ಮಾ ಆಗಲೀ, ವಿರಾಟ್ ಕೊಹ್ಲಿ ಆಗಲಿ ಸ್ಪಷ್ಟನೆ ನೀಡಿಲ್ಲ. ಆದಾಗ್ಯೂ ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ ಆಗುತ್ತಲೇ ಇದೆ. ಸದ್ಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಕಾಣಿಸಿದೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಇತ್ತೀಚೆಗೆ ಆಸ್ಪತ್ರೆ ಒಂದಕ್ಕೆ ಭೇಟಿ ನೀಡಿದ್ದರು. ಇದು ಪ್ರೆಗ್ನೆನ್ಸಿಗೆ ಸಂಬಂಧಿಸಿದ ಆಸ್ಪತ್ರೆ. ಈ ಕಾರಣದಿಂದಲೇ ಅವರು ಪ್ರೆಗ್ನೆಂಟ್ ಎನ್ನುವ ಸುದ್ದಿ ಹರಿದಾಡಿತ್ತು. ಇದರ ಜೊತೆಗೆ ಅನುಷ್ಕಾ ಶರ್ಮಾ ಅವರು ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ, ಅವರು ಪ್ರೆಗ್ನೆಂಟ್ ಎಂದು ಎಲ್ಲರೂ ಊಹಿಸಿದರು. ಈಗ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರ ಬೇಬಿಬಂಪ್ ಎಲ್ಲರ ಕಣ್ಣು ಕುಕ್ಕಿದೆ.

ಭಾನುವಾರ (ನವೆಂಬರ್ 12) ಭಾರತ ಹಾಗೂ ನೆದರ್​ಲ್ಯಾಂಡ್ ಮ್ಯಾಚ್ ಬೆಂಗಳೂರಿನಲ್ಲಿ ಇದೆ. ಇದಕ್ಕಾಗಿ ಭಾರತ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನ ಹೋಟೆಲ್​ ಒಂದರಲ್ಲಿ ವಿರಾಟ್ ಉಳಿದುಕೊಂಡಿದ್ದಾರೆ. ಹೋಟೆಲ್​ನಲ್ಲಿ ವಿರಾಟ್ ಹಾಗೂ ಅನುಷ್ಕಾ ಕೈ ಕೈ ಹಿಡಿದು ಸಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ.

‘ಎರಡನೇ ವಿರಾಟ್ ಆಗಮಿಸುತ್ತಿದ್ದಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಪ್ರೆಗ್ನೆಂಟ್ ಹೌದು, ಘೋಷಣೆ ಯಾವಾಗ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ವಿರಾಟ್-ಅನುಷ್ಕಾ ಕಡೆಯಿಂದ ಗುಡ್​ನ್ಯೂಸ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರೆಗ್ನೆನ್ಸಿ ಸುದ್ದಿ ಬೆನ್ನಲ್ಲೇ ಬೇಬಿಬಂಪ್ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ 

ಅನುಷ್ಕಾ ಶರ್ಮಾ ಹಾಗೂ ವಿರಾಟ್​ಗೆ ವಮಿಕಾ ಹೆಸರಿನ ಮಗಳಿದ್ದಾಳೆ. 2018ರಲ್ಲಿ ರಿಲೀಸ್ ಆದ ‘ಜೀರೋ’ ಚಿತ್ರವೇ ಕೊನೆ. ಇದಾದ ಬಳಿಕ ಅವರು ಸಿನಿಮಾ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ. ‘ಚಕ್ದಾ ಎಕ್ಸ್​ಪ್ರೆಸ್’ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಕೆಲಸಗಳು ವಿಳಂಬ ಆಗುತ್ತಲೇ ಇವೆ. ಈಗ ಅನುಷ್ಕಾ ಅವರು ಈ ಚಿತ್ರದ ಕೆಲಸ ಪೂರ್ಣಗೊಳಿಸಿದ್ದಾರಾ ಅಥವಾ ಸಿನಿಮಾ ಮತ್ತಷ್ಟು ವಿಳಂಬ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ