2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ

ಸದ್ಯಕ್ಕೆ ಅನುಷ್ಕಾ ಶರ್ಮಾ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. ಈಗ ಅವರ ಹೊಸ ಜಾಹೀರಾತೊಂದು ಪ್ರಸಾರ ಆಗುತ್ತಿದೆ. ಅದರಿಂದಾಗಿ ಪ್ರೆಗ್ನೆನ್ಸಿ ಗಾಸಿಪ್​ಗೆ ಮತ್ತೆ ಜೀವ ಬಂದಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ
ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ
Follow us
TV9 Web
| Updated By: ಮದನ್​ ಕುಮಾರ್​

Updated on: Dec 19, 2023 | 2:52 PM

ನಟಿ ಅನುಷ್ಕಾ ಶರ್ಮಾ (Anushka Sharma) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ವದಂತಿ ಇತ್ತೀಚೆಗೆ ಜೋರಾಗಿದೆ. ಆದರೆ ಈ ಬಗ್ಗೆ ಅನುಷ್ಕಾ ಅವರಾಗಲಿ ಅಥವಾ ಅವರ ಪತಿ ವಿರಾಟ್​ ಕೊಹ್ಲಿ (Virat Kohli) ಅವರಾಗಲಿ ಏನನ್ನೂ ಬಹಿರಂಗಪಡಿಸಿಲ್ಲ. ಹಾಗಿದ್ದರೂ ಕೂಡ ವದಂತಿ ಬಲವಾಗಿ ಹಬ್ಬಿದೆ. ಅದಕ್ಕೆ ಪೂರಕ ಎಂಬಂತೆ ಈಗೊಂದು ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಬಳಿಕ ‘ಅನುಷ್ಕಾ ಶರ್ಮಾ 2ನೇ ಬಾರಿ ಪ್ರೆಗ್ನೆಂಟ್​ ಆಗಿರುವುದು ಖಚಿತ’ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಆದಷ್ಟು ಬೇಗ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಗುಡ್​ ನ್ಯೂಡ್​ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಜೊತೆಯಾಗಿ ನಿಂತಿರುವ ಫೋಟೋ ವೈರಲ್​ ಆಗಿತ್ತು. ಅದರಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್​ ಕಾಣಿಸುತ್ತಿತ್ತು. ಆದರೆ ಅದು ಹಳೇ ಫೋಟೋ ಎಂಬುದು ನಂತರ ತಿಳಿಯಿತು. ಈಗ ಅನುಷ್ಕಾ ಶರ್ಮಾ ಅವರ ಹೊಸ ಜಾಹೀರಾತು ಪ್ರಸಾರ ಆಗುತ್ತಿದೆ. ಅದರಿಂದಾಗಿ ಪ್ರೆಗ್ನೆನ್ಸಿ ಗಾಸಿಪ್​ಗೆ ಮತ್ತೆ ಜೀವ ಬಂದಂತೆ ಆಗಿದೆ.

ಪ್ರೆಗ್ನೆನ್ಸಿ ಟೆಸ್ಟ್​ ಮಾಡುವ ಕಿಟ್​ನ ಜಾಹೀರಾತಿನಲ್ಲಿ ಅನುಷ್ಕಾ ಶರ್ಮಾ ನಟಿಸಿದ್ದಾರೆ. ಅವರು ಎರಡನೇ ಬಾರಿ ಪ್ರೆಗ್ನೆಂಟ್​ ಆಗಿರುವುದರಿಂದಲೇ ಈ ಜಾಹೀರಾತಿನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬುದು ಕೆಲವರ ವಾದ. ಈ ಜಾಹೀರಾತಿನ ಮೂಲಕ ಅವರು ಪ್ರೆಗ್ನೆನ್ಸಿ ಸುದ್ದಿಯನ್ನು ನೀಡಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಇದಕ್ಕೆ ಸ್ವತಃ ಅನುಷ್ಕಾ ಶರ್ಮಾ ಸ್ಪಷ್ಟನೆ ನೀಡಬೇಕಷ್ಟೇ.

ಇದನ್ನೂ ಓದಿ: ಪ್ರೆಗ್ನೆಂಟ್ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದ ನಟಿಯರು ಇವರೇ ನೋಡಿ..

2017ರಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಮದುವೆ ನಡೆಯಿತು. 2021ರ ಜನವರಿಯಲ್ಲಿ ಹೆಣ್ಣು ಮಗುವಿಗೆ ಅನುಷ್ಕಾ ಅವರು ಜನ್ಮ ನೀಡಿದರು. ಸದ್ಯಕ್ಕೆ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. 2ನೇ ಬಾರಿ ಪ್ರೆಗ್ನೆಂಟ್​ ಆಗಿರುವ ಕಾರಣದಿಂದಲೇ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬುದು ನೆಟ್ಟಿಗರ ವಾದ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು