ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ

ಇತ್ತೀಚೆಗೆ ಅನುಷ್ಕಾ ಜಿಮ್​ನಲ್ಲಿ ಸಮಯ ಕಳೆಯುತ್ತಿರುವ ಬಗ್ಗೆ ಪೋಸ್ಟ್​ ಮಾಡಿದ್ದರು. ಅವರು ಮೊದಲಿನ ಫಿಟ್​ನೆಸ್​ಗೆ ಬರೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ
ಅನುಷ್ಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 01, 2022 | 8:42 AM

2018ರಲ್ಲಿ ತೆರೆಗೆ ಬಂದ ಶಾರುಖ್​ ಖಾನ್ (Shah Rukh Khan)​ ನಟನೆಯ ‘ಜೀರೋ’ (Zero) ಚಿತ್ರ ಮಕಾಡೆ ಮಲಗಿತ್ತು. ಈ ಚಿತ್ರದ ಸೋಲಿನಿಂದ ಶಾರುಖ್​ ಖಾನ್ ತುಂಬಾನೇ ಬೇಸರಗೊಂಡಿದ್ದರು. ಆ ಬಳಿಕ ಅವರು ಎರಡು ವರ್ಷ ಯಾವುದೇ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ (Anushka Sharma) ಕೂಡ ನಟಿಸಿದ್ದರು. ಅವರು ಕೂಡ ನಟನೆಯಿಂದ ಅಂತರ ಕಾಯ್ದುಕೊಂಡರು. ಈ ಚಿತ್ರ ಬಂದು 3 ವರ್ಷ ಕಳೆದಿದೆ. ಅನುಷ್ಕಾ ಹೊಸ ಸಿನಿಮಾದ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಸುದ್ದಿ ಎಂದರೆ, ಅನುಷ್ಕಾ ಒಟ್ಟೊಟ್ಟಿಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ನಾಯಕ ವಿರಾಟ್​ ಕೊಹ್ಲಿಯನ್ನು ಮದುವೆ ಆದ ನಂತರದಲ್ಲಿ ಅನುಷ್ಕಾ ಕುಟುಂಬದಲ್ಲಿ ಹೆಚ್ಚು ಬ್ಯುಸಿ ಆದರು. ಮಗಳು ವಮಿಕಾ ಜನಿಸಿದ ಬಳಿಕ ಅವಳ ಆರೈಕೆಯಲ್ಲಿ ಅನುಷ್ಕಾ ತೊಡಗಿಕೊಂಡಿದ್ದಾರೆ. ಹಾಗಂತ ಅವರು ಚಿತ್ರರಂಗದಿಂದ ದೂರ ಉಳಿದಿಲ್ಲ. ಕೆಲ ಸಿನಿಮಾಗಳನ್ನು ಹಾಗೂ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಿನಿಮಾ ನಿರ್ಮಾಣದತ್ತ ಅವರ ಗಮನ ಹೆಚ್ಚಿದೆ. ಅನುಷ್ಕಾ ಆ್ಯಕ್ಟಿಂಗ್​ಗೆ ಮರಳಬೇಕು ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ.

ಇತ್ತೀಚೆಗೆ ಅನುಷ್ಕಾ ಜಿಮ್​ನಲ್ಲಿ ಸಮಯ ಕಳೆಯುತ್ತಿರುವ ಬಗ್ಗೆ ಪೋಸ್ಟ್​ ಮಾಡಿದ್ದರು. ಅವರು ಮೊದಲಿನ ಫಿಟ್​ನೆಸ್​ಗೆ ಬರೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಹೊಸ ವರ್ಷಕ್ಕೆ ಅವರ ಬಗ್ಗೆ ಹೊಸ ಅಪ್​ಡೇಟ್​ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಮೂಲಗಳ ಪ್ರಕಾರ ಅನುಷ್ಕಾ ಮೂರು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಒಂದು ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆದರೆ, ಉಳಿದ ಎರಡು ಚಿತ್ರಗಳು ದೊಡ್ಡ ಪರದೆಯಮೇಲೆ ಬಿಡುಗಡೆ ಆಗಲಿವೆ ಎನ್ನಲಾಗುತ್ತಿದೆ. ಅನುಷ್ಕಾ ಯಾರ ಜತೆ ನಟಿಸಲಿದ್ದಾರೆ, ಅವರ ಕಂಬ್ಯಾಕ್​ ಪ್ರಾಜೆಕ್ಟ್​ ಹೇಗಿರಲಿದೆ ಎನ್ನುವ ಕೂತೂಹಲಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಸದ್ಯ, ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟೆಸ್ಟ್​ ಸರಣಿ ನಡೆಯುತ್ತಿದೆ. ವಿರಾಟ್ ಜತೆ ಅವರು ಕೂಡ ಅಲ್ಲಿಗೆ ತೆರಳಿದ್ದಾರೆ. ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಮೊದಲ ಟೆಸ್ಟ್​ ಅನ್ನು ಗೆದ್ದಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಬೆಂಗಳೂರು ಪ್ರೀ ರಿಲೀಸ್​ ಇವೆಂಟ್​ನಲ್ಲಿ ದಿಗ್ಗಜರು; ಸ್ಥಳ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ

ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

Published On - 8:39 am, Sat, 1 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ