Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ನಿರ್ಧಾರ ಬದಲಾಗಿಲ್ಲ’; ಮಗಳ ವೈರಲ್​ ವಿಡಿಯೋ ಬಗ್ಗೆ ಅನುಷ್ಕಾ ಶರ್ಮಾ, ವಿರಾಟ್​ ಕೊಹ್ಲಿ ಪ್ರತಿಕ್ರಿಯೆ

Vamika, Vamika Video: ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಪುತ್ರಿ ವಮಿಕಾಳ ಮುಖ ಮೊದಲ ಬಾರಿಗೆ ಪರಿಚಯ ಆಗಿದೆ. ವೈರಲ್​ ಆಗಿರುವ ವಿಡಿಯೋ ಕುರಿತು ಈ ಸೆಲೆಬ್ರಿಟಿ ದಂಪತಿ ಪ್ರತಿಕ್ರಿಯೆ ನೀಡಿದ್ದಾರೆ.

‘ನಮ್ಮ ನಿರ್ಧಾರ ಬದಲಾಗಿಲ್ಲ’; ಮಗಳ ವೈರಲ್​ ವಿಡಿಯೋ ಬಗ್ಗೆ ಅನುಷ್ಕಾ ಶರ್ಮಾ, ವಿರಾಟ್​ ಕೊಹ್ಲಿ ಪ್ರತಿಕ್ರಿಯೆ
ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ, ವಮಿಕಾ
Follow us
TV9 Web
| Updated By: ಮದನ್​ ಕುಮಾರ್​

Updated on: Jan 24, 2022 | 12:43 PM

ಮಗಳು ವಮಿಕಾ (Vamika) ವಿಚಾರದಲ್ಲಿ ಅನುಷ್ಕಾ ಶರ್ಮಾ (Anushka Sharma) ಮತ್ತು ವಿರಾಟ್​ ಕೊಹ್ಲಿ (Virat Kohli) ಅವರು ತುಂಬ ಖಾಸಗಿತನ ಬಯಸುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿಗೆ ಹೆಣ್ಣು ಮಗು ಜನಿಸಿ ಒಂದು ವರ್ಷ ಕಳೆದಿದೆ. ಈವರೆಗೂ ತಮ್ಮ ಪುತ್ರಿಯ ಮುಖವನ್ನು ಜಗತ್ತಿಗೆ ತೋರಿಸಿರಲಿಲ್ಲ. ಆದರೆ ನಿನ್ನೆ (ಜ.23) ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ಮೂರನೇ ಪಂದ್ಯದ ವೇಳೆ ಒಂದು ಅಚಾತುರ್ಯ ನಡೆದು ಹೋಯಿತು. ಮಗಳ ಜೊತೆ ಅನುಷ್ಕಾ ಶರ್ಮಾ ಮ್ಯಾಚ್​ ನೋಡುತ್ತಿರುವ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಯಿತು. ಸ್ಟಾರ್​ ಸ್ಪೋರ್ಟ್ಸ್​ ವಾಹಿನಿ ಮೂಲಕ ವಿಶ್ವಾದ್ಯಂತ ಆ ದೃಶ್ಯ ಪ್ರಸಾರ ಆಯಿತು. ಆ ಮೂಲಕ ಅನುಷ್ಕಾ ಶರ್ಮಾ-ವಿರಾಟ್​ ಕೊಹ್ಲಿ ಮಗಳ ಮುಖವನ್ನು ಇಡೀ ಜಗತ್ತಿಗೆ ತೋರಿಸಲಾಯಿತು. ಈ ಕುರಿತಂತೆ ಸ್ಟಾರ್​ ದಂಪತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ನಮಗೆ ಗೊತ್ತಿಲ್ಲದಂತೆಯೇ ವಿಡಿಯೋ ಚಿತ್ರಿಸಲಾಯಿತು’ ಎಂದು ಅವರು ಹೇಳಿದ್ದಾರೆ. ಆದರೂ ಕೂಡ ಮಗಳ ಮುಖ ತೋರಿಸಬಾರದು ಎಂಬ ತಮ್ಮ ನಿರ್ಧಾರ ಈಗಲೂ ಬದಲಾಗಿಲ್ಲ ಎಂದು ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಹೇಳಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ದಂಪತಿ ಹೇಳಿಕೆ ನೀಡಿದ್ದಾರೆ. ತಮ್ಮ ಅರಿವಿಗೆ ಬಾರದಂತೆಯೇ ಮಗಳು ವಮಿಕಾಳ ಮುಖವನ್ನು ತೋರಿಸಲಾಗಿರುವ ಬಗ್ಗೆ ಅವರಿಗೆ ಬೇಸರ ಇದೆ. ಮಗಳು ದೊಡ್ಡವಳಾಗುವವರೆಗೂ ಆಕೆಯನ್ನು ಜಗತ್ತಿಗೆ ಪರಿಚಯಿಸಬಾರದು ಎಂಬ ಈ ದಂಪತಿಯ ನಿರ್ಧಾರವನ್ನು ಜಗತ್ತಿನಾದ್ಯಂತ ಬಹುತೇಕ ಮಾಧ್ಯಮಗಳು ಗೌರವಿಸಿವೆ. ಆ ಕುರಿತು ಕೂಡ ಅನುಷ್ಕಾ ಶರ್ಮಾ-ವಿರಾಟ್​ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಎಲ್ಲರಿಗೂ ಹಾಯ್​.. ನಿನ್ನೆ ಸ್ಟೇಡಿಯಂನಲ್ಲಿ ನಮ್ಮ ಮಗಳ ಪೋಟೋವನ್ನು ಸೆರೆಹಿಡಿಯಲಾಯಿತು ಮತ್ತು ಅದನ್ನು ವೈರಲ್​ ಮಾಡಲಾಗಿದೆ ಎಂಬುದು ನಮಗೆ ತಿಳಿದುಬಂದಿದೆ. ನಮಗೆ ಗೊತ್ತಿಲ್ಲದಂತೆಯೇ ಅದನ್ನು ಚಿತ್ರಿಸಲಾಗಿದೆ. ನಮ್ಮನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುತ್ತಿದೆ ಎಂಬುದು ನಮಗೆ ತಿಳಿದಿರಲಿಲ್ಲ. ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ ಮತ್ತು ಮನವಿ ಮೊದಲಿನಂತೆಯೇ ಇರಲಿದೆ. ವಮಿಕಾಳ ಫೋಟೋ ಕ್ಲಿಕ್​ ಮಾಡದಿದ್ದರೆ, ಪ್ರಕಟ ಮಾಡದಿದ್ದರೆ ಅದಕ್ಕಾಗಿ ಧನ್ಯವಾದಗಳು’ ಎಂದು ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಿಳಿಸಿದ್ದಾರೆ.

ಮಗಳ ಮುಖವನ್ನು ಜಗತ್ತಿಗೆ ತೋರಿಸಲು ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಅವರಿಗೆ ಇಷ್ಟ ಇಲ್ಲ. ಅದನ್ನು ಅವರು ಕಳೆದ ವರ್ಷ ಜನವರಿಯಲ್ಲೇ ಸ್ಪಷ್ಟಪಡಿಸಿದ್ದರು. ಮಗು ಜನಿಸಿದ ಕೆಲವೇ ದಿನಗಳಲ್ಲಿ ಅವರು ತಮ್ಮ ಈ ನಿರ್ಧಾರವನ್ನು ತಿಳಿಸಿದ್ದರು. ಅನುಷ್ಕಾ ಶರ್ಮಾ, ವಿರಾಟ್​ ಕೊಹ್ಲಿ ಹೋದಲ್ಲಿ-ಬಂದಲ್ಲಿ ಪಾಪರಾಜಿ ಕ್ಯಾಮೆರಾಗಳು ಅವರನ್ನು ಮುತ್ತಿಕೊಳ್ಳುತ್ತವೆ. ಆದರೆ ಮಗಳ ಫೋಟೋ ಅಥವಾ ವಿಡಿಯೋವನ್ನು ಸೆರೆ ಹಿಡಿಯಬಾರದು ಎಂದು ಈ ದಂಪತಿ ಮಾಡಿಕೊಂಡ ಮನವಿಗೆ ಎಲ್ಲರೂ ಬೆಲೆ ನೀಡಿದ್ದರು. ಆದರೆ ಸ್ಟಾರ್​ ಸ್ಪೋರ್ಟ್ಸ್​ ವಾಹಿನಿ ಕಡೆಯಿಂದ ವಮಿಕಾಳ ವಿಡಿಯೋ ಮೊದಲ ಬಾರಿಗೆ ಪ್ರಸಾರ ಆಗಿದೆ.

ಮಗಳ ಆರೈಕೆಯ ಕಡೆಗೆ ಅನುಷ್ಕಾ ಶರ್ಮಾ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಹೊಸ ಸಿನಿಮಾ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಂಸಾರಕ್ಕಾಗಿ ಅವರು ಹೆಚ್ಚಿನ ಸಮಯ ಮೀಸಲಿಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾ ನಂತರ ಅವರು ಬೇರೆ ಯಾವುದೇ ಚಿತ್ರದಲ್ಲೂ ಅಭಿನಯಿಸಿಲ್ಲ. ನಟನೆಯಿಂದ ದೂರ ಉಳಿದುಕೊಂಡಿದ್ದರೂ ಕೂಡ ಅವರು ಸಿನಿಮಾ ಮತ್ತು ವೆಬ್​ ಸಿರೀಸ್​ ನಿರ್ಮಾಣದ ಮೇಲೆ ಆಸಕ್ತಿ ಹೊಂದಿದ್ದಾರೆ. 2020ರಲ್ಲಿ ‘ಪಾತಾಳ್​ ಲೋಕ್​’ ವೆಬ್​ ಸರಣಿಯನ್ನು ನಿರ್ಮಾಣ ಮಾಡುವ ಮೂಲಕ ಅವರು ಭರ್ಜರಿ ಗೆಲುವು ಪಡೆದರು.

ಇದನ್ನೂ ಓದಿ:

ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

ಅನುಷ್ಕಾ ಶರ್ಮಾ ಚಿತ್ರರಂಗ ತೊರೆಯುತ್ತಾರಾ? ಅವರು ಒಪ್ಪಿಕೊಂಡ ಸಿನಿಮಾ ಬಗ್ಗೆ ಕೇಳಿ ಬರ್ತಿದೆ ಹೊಸ ಅಪ್​ಡೇಟ್​

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?