AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ

ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2018ರ 'ಜೀರೋ' ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತಮ್ಮ ಇಬ್ಬರು ಮಕ್ಕಳಾದ ವಮಿಕಾ ಮತ್ತು ಅಕಾಯ್ ಪಾಲನೆಯಲ್ಲಿ ತೊಡಗಿಸಿಕೊಂಡಿರುವ ಅವರು, ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಈ ಹಿಂದೆ ನೀಡಿದ್ದ ಹೇಳಿಕೆಯಂತೆ, ಮದುವೆ-ಮಕ್ಕಳ ನಂತರ ಸಂಸಾರಕ್ಕೆ ಗಮನ ನೀಡುತ್ತಿದ್ದಾರೆ. ಅವರ 'ಚಕ್ದಾ ಎಕ್ಸ್‌ಪ್ರೆಸ್' ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ
ವಿರಾಟ್- ಅನುಷ್ಕಾ ಶರ್ಮ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 14, 2026 | 7:55 AM

Share

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ ತಮ್ಮ ಕುಟುಂಬದ ಕಡೆಗೆ ಗಮನ ಹರಿಸುತ್ತಿದ್ದಾರೆ. ಈ ಹಿಂದೆ ಸಿಮಿ ಗರೆವಾಲ್ ಅವರ ಶೋನಲ್ಲಿ ಮಾತನಾಡಿದ್ದ ಅನುಷ್ಕಾ, ‘ಮದುವೆ ಮತ್ತು ಮಕ್ಕಳು ಆದ ಮೇಲೆ ಕೆಲಸ ಮಾಡುವುದಕ್ಕಿಂತ ಸಂಸಾರಕ್ಕೆ ಹೆಚ್ಚು ಒತ್ತು ನೀಡಲು ಬಯಸುತ್ತೇನೆ’ ಎಂದು ಹೇಳಿದ್ದರು. ಅದರಂತೆಯೇ ಈಗ ಅವರು ಸಿನಿಮಾಗಿಂತ ಹೆಚ್ಚಾಗಿ ಮಕ್ಕಳ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶರ್ಮಾಗೆ ಬರ್ತ್​​​​ಡೇ; ನಟಿಯ ಬಳಿ ಇರೋದು ಒಂದೇ ಬೇಡಿಕೆ 

ಮೂಲಗಳ ಪ್ರಕಾರ, ವಿರಾಟ್ ಮತ್ತು ಅನುಷ್ಕಾ ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿನ ಅತಿಯಾದ ಮಾಧ್ಯಮಗಳ ಗಮನದಿಂದ ದೂರ ಉಳಿದು, ತಮ್ಮ ಮಕ್ಕಳನ್ನು ಸಾಮಾನ್ಯರಂತೆ ಬೆಳೆಸುವ ಉದ್ದೇಶದಿಂದ ಅವರು ವಿದೇಶದಲ್ಲಿ ಸೆಟಲ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪತಿ ವಿರಾಟ್ ಕೊಹ್ಲಿ ಅವರ ವೃತ್ತಿಜೀವನಕ್ಕೆ ಅನುಷ್ಕಾ ಸದಾ ಬೆನ್ನೆಲುಬಾಗಿ ನಿಲ್ಲುತ್ತಾರೆ. ಐಪಿಎಲ್ ಪಂದ್ಯಗಳ ಸಮಯದಲ್ಲಿ ಅವರು ಮೈದಾನಕ್ಕೆ ಆಗಮಿಸಿ ಕೊಹ್ಲಿಯನ್ನು ಹುರಿದುಂಬಿಸುವುದನ್ನು ನಾವು ಇಂದಿಗೂ ಕಾಣಬಹುದು.

ಚಕ್ದಾ ಎಕ್ಸ್‌ಪ್ರೆಸ್ ಬಿಡುಗಡೆ ಯಾವಾಗ?

ಅನುಷ್ಕಾ ನಟಿಸಿರುವ ಜೂಲನ್ ಗೋಸ್ವಾಮಿ ಅವರ ಬಯೋಪಿಕ್ ‘ಚಕ್ದಾ ಎಕ್ಸ್‌ಪ್ರೆಸ್’ ಚಿತ್ರೀಕರಣ 2022ರಲ್ಲೇ ಪೂರ್ಣಗೊಂಡಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ನಿರ್ಮಾಣದ ಗುಣಮಟ್ಟ ಅಥವಾ ಬಜೆಟ್ ಕಾರಣಗಳಿಂದಾಗಿ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ