ಭಾರತೀಯ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿರುವ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಹಾಗೂ ಸಿಂಗರ್ ಎ.ಆರ್. ರೆಹಮಾನ್ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಪತ್ನಿ ಸೈರಾ ಭಾನು ಜೊತೆಗಿನ ದಾಂಪತ್ಯಕ್ಕೆ ಅವರು ಅಂತ್ಯ ಹಾಡಿದ್ದಾರೆ. ಎ.ಆರ್. ರೆಹಮಾನ್ ಹಾಗೂ ಸೈರಾ ಭಾನು ಅವರು 29 ವರ್ಷಗಳ ಕಾಲ ಸಂಸಾರ ನಡೆಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಮಧ್ಯೆ ವೈಮನಸ್ಸು ಮೂಡಿತ್ತು. ವಿಚ್ಛೇದನದ ವಿಚಾರವನ್ನು ಸೈರಾ ಭಾನು ಅವರು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
1995ರಲ್ಲಿ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ವಿವಾಹ ಆಗಿದ್ದರು. ಅವರದ್ದು ಅರೇಂಜ್ ಮ್ಯಾರೇಜ್. ಸಿನಿಮಾದಲ್ಲಿ ಬ್ಯುಸಿ ಆಗಿದ್ದ ರೆಹಮಾನ್ ಅವರಿಗೆ ಹುಡುಗಿ ನೋಡುವಷ್ಟು ಸಮಯ ಇರಲಿಲ್ಲ. ಹಾಗಾಗಿ ತಾಯಿ ನೋಡಿದ ಹುಡುಗಿಯನ್ನು ಅವರು ಮದುವೆ ಆಗಿದ್ದರು. ಆಗ ಅವರಿಗೆ 29 ವರ್ಷ ವಯಸ್ಸಾಗಿತ್ತು. ರೆಹಮಾನ್ ಮತ್ತು ಸೈರಾ ಬಾನು ಜೋಡಿಗೆ ಮೂವರು ಮಕ್ಕಳು ಇದ್ದಾರೆ.
#BREAKING : #ARRahman and his wife are separating after 29 years of marriage.. pic.twitter.com/QbTLzbhaMT
— Ramesh Bala (@rameshlaus) November 19, 2024
ಬಹುತೇಕ ಮೂರು ದಶಕಗಳ ಕಾಲ ಹೊಂದಾಣಿಕೆಯಿಂದ ಸಂಸಾರ ಮಾಡಿದ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ಹೀಗೆ ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ‘ಸಂಬಂಧದಲ್ಲಿನ ಭಾವನಾತ್ಮಕವಾಗಿ ಸಂಕಟದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಇಬ್ಬರ ನಡುವೆ ದೊಡ್ಡ ಅಂತರ ಸೃಷ್ಟಿ ಆಗಿದೆ’ ಎಂದು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸೈರಾ ಬಾನು ತಿಳಿಸಿದ್ದಾರೆ.
ಇದನ್ನೂ ಓದಿ: 1 ಸಾಂಗ್ ಹಾಡಲು 3 ಕೋಟಿ ರೂಪಾಯಿ ಸಂಬಳ ಪಡೆಯುವ ಎ.ಆರ್. ರೆಹಮಾನ್
ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ಗಾಯಕನಾಗಿಯೂ ಎ.ಆರ್. ರೆಹಮಾನ್ ಅವರಿಗೆ ಬೇಡಿಕೆ ಇದೆ. ತಮಿಳು, ತೆಲುಗು, ಹಿಂದಿ ಮುಂತಾದ ಭಾಷೆಯ ಸಿನಿಮಾಗಳಿಗೆ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ಪಡೆದಿರುವ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಒಂದು ಸಾಂಗ್ ಹಾಡಲು ಅವರು ಬರೋಬ್ಬರಿ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಹಾಗಿದ್ದರೂ ಕೂಡ ಅವರು ಎಲ್ಲ ಹಾಡುಗಳನ್ನು ಒಪ್ಪಿಕೊಳ್ಳುವುದಿಲ್ಲ. ಗಾಯನಕ್ಕಿಂತಲೂ ಸಂಗೀತ ನಿರ್ದೇಶನದಲ್ಲಿ ಅವರು ಹೆಚ್ಚು ತೊಡಗಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:27 pm, Tue, 19 November 24