AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಾಡಲಿರುವ ಅರಿಜಿತ್ ಸಿಂಗ್, ನಿವೃತ್ತಿ ನಿರ್ಧಾರ ಮುರಿದಿದ್ದೇಕೆ?

Arijit Singh song: ಗಾಯಕ ಅರಿಜಿತ್ ಸಿಂಗ್ ಅವರು ಅಚಾನಕ್ಕಾಗಿ ಗಾಯನಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಾಡುವುದಿಲ್ಲ ಎಂದಿದ್ದರು. ಸ್ಟಾರ್ ನಟ ಆಮಿರ್ ಖಾನ್ ಸೇರಿ ಇನ್ನೂ ಹಲವರು ಅವರ ಮನವೊಲಿಸಲು ಯತ್ನಿಸಿದರಾದರೂ ಸಫಲರಾಗಿರಲಿಲ್ಲ. ಆದರೆ ಇದೀಗ ಅರಿಜಿತ್ ಸಿಂಗ್ ತಮ್ಮ ನಿವೃತ್ತಿಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೆ ಹಾಡಲಿರುವ ಅರಿಜಿತ್ ಸಿಂಗ್, ನಿವೃತ್ತಿ ನಿರ್ಧಾರ ಮುರಿದಿದ್ದೇಕೆ?
Arijit Singh
ಮಂಜುನಾಥ ಸಿ.
|

Updated on: Jul 21, 2026 | 11:03 AM

Share

ಅರಿಜಿತ್ ಸಿಂಗ್ (Arijit Singh) ಭಾರತದ ಸೂಪರ್ ಸ್ಟಾರ್ ಗಾಯಕ. ಅವರಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಗಾಯಕ ಪ್ರಸ್ತುತ ಭಾರತದಲ್ಲಿಲ್ಲ. ಹಲವಾರು ಅದ್ಭುತ ಹಾಡುಗಳಿಗೆ ಧ್ವನಿ ನೀಡಿರುವ ಅರಿಜಿತ್, ಸಾವಿರಾರು ಹಿಟ್​​ ಹಾಡುಗಳನ್ನು ಹಾಡಿದ್ದಾರೆ. ಆದರೆ ಕೆಲ ತಿಂಗಳ ಹಿಂದೆ ಅರಿಜಿತ್ ಸಿಂಗ್ ಅವರು ಅಚಾನಕ್ಕಾಗಿ ಗಾಯನಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಾಡುವುದಿಲ್ಲ ಎಂದಿದ್ದರು. ಸ್ಟಾರ್ ನಟ ಆಮಿರ್ ಖಾನ್ ಸೇರಿ ಇನ್ನೂ ಹಲವರು ಅವರ ಮನವೊಲಿಸಲು ಯತ್ನಿಸಿದರಾದರೂ ಸಫಲರಾಗಿರಲಿಲ್ಲ. ಆದರೆ ಇದೀಗ ಅರಿಜಿತ್ ಸಿಂಗ್ ತಮ್ಮ ನಿವೃತ್ತಿಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

‘ಆವಾರಾಪನ್ 2’ ಸಿನಿಮಾಕ್ಕಾಗಿ ಅರಿಜಿತ್ ಸಿಂಗ್ ತಮ್ಮ ನಿವೃತ್ತಿ ಮುರಿದಿದ್ದಾರೆ ಎನ್ನಲಾಗುತ್ತಿದೆ. 2007 ರಲ್ಲಿ ಬಿಡುಗಡೆ ಆಗಿದ್ದ ಇಮ್ರಾನ್ ಹಶ್ಮಿ ನಟನೆಯ ‘ಆವಾರಾಪನ್’ ಸಿನಿಮಾದ ಎರಡನೇ ಭಾಗ ಇದೀಗ ನಿರ್ಮಾಣವಾಗಿದೆ. 2007ರ ‘ಆವಾರಾಪನ್’ ಸಿನಿಮಾದ ಹಾಡುಗಳು ದೊಡ್ಡ ಹಿಟ್ ಆಗಿದ್ದವು. ಇದೀಗ ‘ಆವಾರಾಪನ್ 2’ ಸಿನಿಮಾದ ಹಾಡುಗಳ ಮೇಲೆ ವಿಶೇಷ ಕಾಳಜಿಯನ್ನು ವಹಿಸಲಾಗಿದ್ದು, ಇದೇ ಕಾರಣಕ್ಕೆ ಅರಿಜಿತ್ ಸಿಂಗ್ ಅವರಿಂದಲೇ ಹಾಡು ಹಾಡಿಸಲಾಗಿದೆ.

ಇದನ್ನೂ ಓದಿ:ಅರಿಜಿತ್ ಸಿಂಗ್ ನಿವೃತ್ತಿ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಶ್ರೇಯಾ ಘೋಷಾಲ್

ಅರಿಜಿತ್ ಸಿಂಗ್ ಹಾಡಿರುವ ‘ಆವಾರಾಪನ್ 2’ ಸಿನಿಮಾದ ಹಾಡು ಇಂದು ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೆ ಮುಂಚೆಯೇ ಹಾಡು ಸೂಪರ್ ಹಿಟ್ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸಿನಿಮಾಕ್ಕೆ ಅಮಾಲ್ ಮಲ್ಲಿಕ್ ಸಂಗೀತ ನೀಡಿದ್ದು, ಕೆಲವು ಮಧುರವಾದ ಹಾಡುಗಳನ್ನು ಸಿನಿಮಾಕ್ಕಾಗಿ ಮಾಡಿದ್ದಾರೆ. ಅದರಲ್ಲಿ ಒಂದು ಹಾಡನ್ನು ಅರಿಜಿತ್ ಸಿಂಗ್ ಹಾಡಿದ್ದಾರೆ.

‘ಆವಾರಾಪನ್ 2’ ಸಿನಿಮಾನಲ್ಲಿ ಇಮ್ರಾನ್ ಹಶ್ಮಿ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 2007 ರ ‘ಆವಾರಾಪನ್’ ಸಿನಿಮಾದ ಮ್ಯಾಜಿಕ್ ಅನ್ನೇ ಪುನರ್ಸೃಷ್ಟಿಸಲು ಚಿತ್ರತಂಡ ಯತ್ನಿಸುತ್ತಿದೆ. ‘ಆವಾರಾಪನ್’ ಸಿನಿಮಾದ ಹಾಡುಗಳಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ಇದೀಗ ಅದೇ ಮ್ಯಾಜಿಕ್ ಅನ್ನು ‘ಆವಾರಾಪನ್ 2’ ಸಿನಿಮಾ ಮಾಡುತ್ತದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ