ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್? ಗಾಯಕನ ದೊಡ್ಡ ಹೆಜ್ಜೆ

ಅರಿಜಿತ್ ಸಿಂಗ್ ಗಾಯನಕ್ಕೆ ವಿದಾಯ ಹೇಳಿದ ನಂತರ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದು ಗಾಯನ ಲೋಕಕ್ಕೆ ಅಚ್ಚರಿ ತಂದಿದೆ. ತಮ್ಮ ಹುಟ್ಟೂರು ಮುರ್ಷಿದಾಬಾದ್‌ಗಾಗಿ ಸಾಮಾಜಿಕ ಕೆಲಸಗಳನ್ನು ಮಾಡಿರುವ ಅರಿಜಿತ್, ಈಗ ರಾಜಕೀಯದ ಮೂಲಕ ಮತ್ತಷ್ಟು ಜನ ಸೇವೆ ಮಾಡುವ ಕನಸು ಕಂಡಿದ್ದಾರೆ.

ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್? ಗಾಯಕನ ದೊಡ್ಡ ಹೆಜ್ಜೆ
ಅರಿಜಿತ್

Updated on: Jan 30, 2026 | 7:01 AM

ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಇತ್ತೀಚೆಗೆ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ಅವರು ಗಾಯನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು. ಇದು ಅಚ್ಚರಿ ಮೂಡಿಸಿತ್ತು. ಈಗ ಅರಿಜಿತ್ ಸಿಂಗ್ ಅವರು ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಅವರು ರಾಜಕೀಯ ಪಕ್ಷ ಸ್ಥಾಪಿಸಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಎದುರಿಸಲಿದ್ದಾರಂತೆ. ಈ ವರದಿ ಅನೇಕರಿಗೆ ಅಚ್ಚರಿ ತರಿಸಿದೆ.

ಅರಿಜಿತ್ ಸಿಂಗ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಎನ್​​ಡಿಟಿವಿ ವರದಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಆದರೆ, ಇದರಲ್ಲಿ ಸ್ಪರ್ಧಿಸುವ ಆಲೋಚನೆ ಅರಿಜಿತ್ ಸಿಂಗ್ ಅವರಿಗೆ ಇಲ್ಲ. ಒಂದು ಪಕ್ಷ ಕಟ್ಟಿ ಬೆಳೆಸಬೇಕು, ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಅದಕ್ಕೆ ಸಾಕಷ್ಟು ಸಿದ್ಧತೆ ಬೇಕು. ಈ ಸಿದ್ಧತೆಯನ್ನು ಮಾಡಿಕೊಳ್ಳುವ ಆಲೋಚನೆಯಲ್ಲಿ ಅರಿಜಿತ್ ಸಿಂಗ್ ಇದ್ದಾರೆ.

ಸಾಮಾನ್ಯವಾಗಿ ನಟ-ನಟಿಯರು ರಾಜಕೀಯ ಪಕ್ಷ ಸ್ಥಾಪಿಸಿ ಚುನಾವಣೆಗೆ ಸ್ಪರ್ಧಿಸಿದ ಉದಾಹರಣೆ ಇದೆ. ಅದೇ ರೀತಿ ಕೆಲವು ಗಾಯಕರು ಒಂದು ಪಕ್ಷದ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದಿದೆ. ಆದರೆ, ಗಾಯಕನೋರ್ವ ಪಕ್ಷ ಸ್ಥಾಪಿಸುವ ಆಲೋಚನೆ ಮಾಡಿದ್ದು ಕಡಿಮೆ. ಈಗ ಅಂತಹ ಅಪರೂಪದ ಕೆಲಸಕ್ಕೆ ಅರಿಜಿತ್ ಸಿಂಗ್ ಕೈ ಹಾಕಿದ್ದಾರೆ.

ಇದನ್ನೂ ಓದಿ: 38ನೇ ವಯಸ್ಸಿಗೆ ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್​ರ ಮುಂದಿನ ಯೋಜನೆ ಏನು?

ಅರಿಜಿತ್ ಸಿಂಗ್ ಕೇವಲ ಗಾಯಕ ಮಾತ್ರ ಅಲ್ಲ. ಅವರು ಒಳ್ಳೆಯ ಮನಸ್ಸನ್ನು ಹೊಂದಿದ್ದಾರೆ. ಸಾಮಾಜಿಕ ಕೆಲಸಗಳನ್ನು ಮಾಡುತ್ತಾರೆ. ಅರಿಜಿತ್ ಸಿಂಗ್ ಪಶ್ಚಿಮ ಬಂಗಾಳದ ಮುರ್ಷಿದಾ ಬಾದ್​ನವರು. ಅವರು ಹುಟ್ಟೂರಿಗೆ ಏನನ್ನಾದರೂ ಮಾಡಬೇಕು ಎಂದು ಕನಸು ಕಂಡವರು. ಒಂದು ಹೊತ್ತಿನ ಊಟಕ್ಕೂ ಕಷ್ಟಪಡುವ ಜನರಿಗಾಗಿ ಅವರು ಇಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದು, 40 ರೂಪಾಯಿಗೆ ಊಟ ನೀಡುವ ಕೆಲಸ ಮಾಡುತ್ತಿದ್ದಾರೆ. ಈಗ ಅವರು ರಾಜಕೀಯದ ಮೂಲಕ ತಮ್ಮ ಕೆಲಸ ಮುಂದುವರಿಸೋ ಆಲೋಚನೆಯಲ್ಲಿ ಇದ್ದಾರೆ. ಈ ಕಾರಣದಿಂದಲೇ ಅವರು ಸಂಗೀತ ಜಗತ್ತನ್ನು ತೊರೆದಿರಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 7:01 am, Fri, 30 January 26

ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us