AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ

‘ರೋಹಿತ್ ಶೆಟ್ಟಿ ನಿರ್ದೇಶನದ ‘ಸಿಂಗಂ 3’ ಚಿತ್ರದಲ್ಲಿ ಅರ್ಜುನ್ ಕಪೂರ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ
ಅರ್ಜುನ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 14, 2024 | 10:51 AM

Share

‘ಸಿಂಗಂ 3’ ಸಿನಿಮಾ (Singham Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ರೋಹಿತ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಕಪೂರ್ ಅವರು ವಿಲನ್ ಪಾತ್ರ ಮಾಡುತ್ತಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈ ವಿಚಾರ ಈಗ ಅಧಿಕೃತ ಆಗಿದೆ. ರೋಹಿತ್ ಶೆಟ್ಟಿ ಅವರು ಈಗ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಲುಕ್ ಗಮನ ಸೆಳೆದಿದೆ.

ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅವರ ನಿರ್ದೇಶನದ ಯಶಸ್ವಿ ಸರಣಿ ‘ಸಿಂಗಂ’ಗೆ ಮೂರನೇ ಪಾರ್ಟ್ ಬರುತ್ತಿದೆ. ಈ ಚಿತ್ರದಲ್ಲಿ ಅರ್ಜುನ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ನಗುತ್ತಿದ್ದಾರೆ. ಅವರ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರೋಹಿತ್ ಶೆಟ್ಟಿ ಪೋಸ್ಟ್

‘ವ್ಯಕ್ತಿ ತಪ್ಪು ಮಾಡುತ್ತಾನೆ ಮತ್ತು ಆತನಿಗೆ ಶಿಕ್ಷೆಯೂ ಆಗುತ್ತದೆ. ಆದರೆ, ಈಗ ಬರುತ್ತಿರುವ ವ್ಯಕ್ತಿ ಶೈತಾನ್’ ಎಂದು ಬರೆದುಕೊಂಡಿದ್ದಾರೆ ರೋಹಿತ್. ಈ ಪೋಸ್ಟರ್​ನ ಅರ್ಜುನ್ ಕಪೂರ್ ಕೂಡ ಶೇರ್ ಮಾಡಿಕೊಂಡಿದ್ದು, ‘ಸಿಂಗಂ ಕಾ ವಿಲನ್’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ವಿಲನ್ ಅವತಾರ ತಾಳುತ್ತಿದ್ದಾರೆ. ಈ ರೀತಿಯಲ್ಲಿ ಅವರು ಫ್ಯಾನ್ಸ್​ಗೆ ಇಷ್ಟವಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ರಣವೀರ್ ಸಿಂಗ್, ಅರ್ಜುನ್ ಕಪೂರ್ ಜೊತೆಗೆ ದೀಪಿಕಾ ಪಡುಕೋಣೆ ಟೈಗರ್​ ಶ್ರಾಫ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಈ ವರ್ಷ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಅದೇ ದಿನ ತೆಲುಗಿನ ‘ಪುಷ್ಪ 2’ ಚಿತ್ರ ಕೂಡ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ