ಮಲೈಕಾ ಅರೋರಾ ಪ್ರೆಗ್ನೆಂಟ್ ಎಂದು ಸುದ್ದಿ ಹಬ್ಬಿಸಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ಜುನ್ ಕಪೂರ್

ಇವರು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಕೆಲ ದಿನಗಳ ಕಾಲ ಈ ವದಂತಿ ಚಾಲ್ತಿಯಲ್ಲಿತ್ತು. ಈಗ ಈ ಜೋಡಿ ಮಗುವಿನ ನಿರೀಕ್ಷೆಯಲ್ಲಿದೆ ಎಂದು ಸುದ್ದಿ ಹಬ್ಬಿಸಲಾಯಿತು.

ಮಲೈಕಾ ಅರೋರಾ ಪ್ರೆಗ್ನೆಂಟ್ ಎಂದು ಸುದ್ದಿ ಹಬ್ಬಿಸಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ಜುನ್ ಕಪೂರ್
ಮಲೈಕಾ-ಅರ್ಜುನ್ ಕಪೂರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 01, 2022 | 11:10 AM

ನಟಿ ಮಲೈಕಾ ಅರೋರಾ (Malaika Arora) ಹಾಗೂ ನಟ ಅರ್ಜುನ್ ಕಪೂರ್ ಅವರ ಲವ್​ಸ್ಟೋರಿ ಸೀಕ್ರೆಟ್ ಆಗಿ ಉಳಿದುಕೊಂಡಿಲ್ಲ. ಇವರಿಬ್ಬರೂ ಡೇಟಿಂಗ್ ಮಾಡೋಕೆ ಆರಂಭಿಸಿ ಹಲವು ವರ್ಷಗಳೇ ಕಳೆದಿವೆ. ಈ ಜೋಡಿ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದೂ ಇದೆ. ಇವರ ಬಗ್ಗೆ ಹುಟ್ಟಿಕೊಂಡಿರುವ ವದಂತಿಗಳು ಒಂದೆರಡಲ್ಲ. ಆದರೆ, ಯಾವ ವದಂತಿಗೂ ಈ ಜೋಡಿ ಉತ್ತರಿಸುವ ಗೋಜಿಗೆ ಹೋಗಿರಲಿಲ್ಲ. ಆದರೆ, ಇತ್ತೀಚೆಗೆ ಇಂಗ್ಲಿಷ್ ವೆಬ್​ಸೈಟ್ ಒಂದು ಮಲೈಕಾ ಅರೋರಾ ಪ್ರೆಗ್ನೆಂಟ್ ಎನ್ನುವ ಸುದ್ದಿ ಹಬ್ಬಿಸಿತ್ತು. ಇದಕ್ಕೆ ಅರ್ಜುನ್ ಕಪೂರ್ (Arjun Kapoor) ಖಡಕ್ ಆಗಿಯೇ ಉತ್ತರ ನೀಡಿದ್ದಾರೆ.

ಅರ್ಜುನ್ ಕಪೂರ್ ಅವರ ವಯಸ್ಸು 37 ಹಾಗೂ ಮಲೈಕಾ ವಯಸ್ಸು 49. ಇಬ್ಬರ ಮಧ್ಯೆ 12 ವರ್ಷಗಳ ವಯಸ್ಸಿನ ಅಂತರ ಇದೆ. ಆದರೆ, ಇವರ ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗಿಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಇವರು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಕೆಲ ದಿನಗಳ ಕಾಲ ಈ ವದಂತಿ ಚಾಲ್ತಿಯಲ್ಲಿತ್ತು. ಈಗ ಈ ಜೋಡಿ ಮಗುವಿನ ನಿರೀಕ್ಷೆಯಲ್ಲಿದೆ ಎಂದು ಸುದ್ದಿ ಹಬ್ಬಿಸಲಾಯಿತು.

ಸೆಲೆಬ್ರಿಟಿಗಳ ವಲಯದಲ್ಲಿ ಮದುವೆ ಆಗದೆ ಮಗು ಪಡೆಯೋದು ತುಂಬಾನೇ ಕಾಮನ್. ಇದಕ್ಕೆ ಸಮಾಜ ಏನು ಹೇಳುತ್ತದೆ ಎಂಬ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಳ್ಳುವುದೇ ಇಲ್ಲ. ಅದೇ ರೀತಿ ಅರ್ಜುನ್ ಕಪೂರ್ ಹಾಗೂ ಮಲೈಕಾ ಮದುವೆ ಆಗದೆ ಮಗು ಪಡೆಯಲು ಚಿಂತನೆ ನಡೆಸಿದ್ದಾರೆ, ಶೀಘ್ರವೇ ಮಲೈಕಾ ತಾಯಿ ಆಗಲಿದ್ದಾರೆ ಎಂದು ವರದಿ ಮಾಡಲಾಗಿತ್ತು.

ಇದನ್ನೂ ಓದಿ
Image
ಒಳ ಉಡುಪು ಹಾಕದೆ ರಸ್ತೆಗಿಳಿದ ಪೂನಂ ಪಾಂಡೆ; ಪ್ರದರ್ಶನವಾಯ್ತು ಖಾಸಗಿ ಅಂಗ
Image
ಮಲೈಕಾ- ಅರ್ಜುನ್ ಮದುವೆಯ ಬಗ್ಗೆ ಜೋರಾಯ್ತು ಗಾಸಿಪ್; ರೂಮರ್​ಗಳಿಗೆ ನಟ ನೀಡಿದ ಉತ್ತರವೇನು?
Image
‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
Image
Malaika Arora: ಬ್ರೇಕಪ್ ಮಾಡಿಕೊಂಡ್ರಾ ಮಲೈಕಾ- ಅರ್ಜುನ್? ವೈರಲ್ ಆಗಿರೋ ಈ ಸುದ್ದಿಯ ಅಸಲಿಯತ್ತು ಇಲ್ಲಿದೆ

ಈ ಸುದ್ದಿಯ ಸ್ಕ್ರೀನ್​ಶಾಟ್​​ ಅನ್ನು ಅರ್ಜುನ್ ಕಪೂರ್ ಅವರು ಇನ್​​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಸುದ್ದಿ ಸಂಸ್ಥೆ ಹಾಗೂ ಸುದ್ದಿ ಬರೆದವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಷ್ಟೇ ಅಲ್ಲ, ‘ಜೀವಗಳ ಜತೆ ಆಟ ಆಡಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅರ್ಜುನ್ ಕಪೂರ್​ಗಿಂತ 12 ವರ್ಷ ದೊಡ್ಡವರು ಮಲೈಕಾ; ನಟಿಯ ವಿಚ್ಛೇದನಕ್ಕೆ ಕಾರಣವಾಗಿದ್ದು ಅಫೇರ್?

ಅರ್ಜುನ್ ಕಪೂರ್ ಅವರ ವೃತ್ತಿ ಜೀವನದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಿಗದೇ ಎಷ್ಟೋ ವರ್ಷಗಳೇ ಕಳೆದು ಹೋಗಿವೆ. ಅವರು ಇತ್ತೀಚೆಗೆ ಸಿನಿಮಾಗಿಂತ ಮಲೈಕಾ ಜತೆಗಿನ ರಿಲೇಶನ್​ಶಿಪ್ ವಿಚಾರಕ್ಕೆ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಈ ವಿಚಾರ ಅವರ ವೃತ್ತಿ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ