‘ಬಿಗ್ ಬಾಸ್’ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ  

ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

‘ಬಿಗ್ ಬಾಸ್’ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ  
ನಿತಿನ್ ದೇಸಾಯಿ
Follow us
ರಾಜೇಶ್ ದುಗ್ಗುಮನೆ
|

Updated on: Aug 02, 2023 | 11:31 AM

ಬಾಲಿವುಡ್​ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ (Nitin Desai) ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎನ್​ಡಿ ಸ್ಟುಡಿಯೋದಲ್ಲಿ ಬಿಗ್ ಬಾಸ್ (Bigg Boss) ವೀಕೆಂಡ್ ಎಪಿಸೋಡ್ ಶೂಟ್​ ಮಾಡಲಾಗುತ್ತಿತ್ತು. ಆಗಸ್ಟ್ 9ರಂದು ಅವರು ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ಅದಕ್ಕೂ ಮೊದಲೇ ಅವರು ಪ್ರಾಣ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ಪೊಲೀಸರು ಇಲ್ಲಿಗೆ ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ನಿತಿನ್ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.

ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ನಿತಿನ್ ದೇಸಾಯಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ನಿತಿನ್ ದೇಸಾಯಿ ಅವರು ಬಾಲಿವುಡ್​ನಲ್ಲಿ ಖ್ಯಾತ ಕಲಾ ನಿರ್ದೇಶಕರಾಗಿದ್ದರು. ಅವರು ನಾಲ್ಕು ರಾಷ್ಟ್ರಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಅವರು ನಿರ್ಮಾಣ ಮಾಡುತ್ತಿದ್ದ ಅದ್ದೂರಿ ಸೆಟ್​​ಗಳನ್ನು ನೋಡಿ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದರು. ಹಲವು ಸಿನಿಮಾ ಯಶಸ್ಸಿಗೆ ಇವರು ಹಾಕುತ್ತಿದ್ದ ಸೆಟ್​ಗಳು ಕೂಡ ಕಾರಣ ಆಗಿದ್ದವು.

‘ಹಮ್​ ದಿಲ್​ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು. ಸಂಜಯ್ ಲೀಲಾ ಬನ್ಸಾಲಿ, ವಿಧು ವಿನೋದ್ ಚೋಪ್ರಾ, ರಾಜ್​ಕುಮಾರ್ ಹಿರಾನಿ ಮೊದಲಾದ ಖ್ಯಾತ ನಾಮರ ಜೊತೆ ನಿತಿನ್ ಕೆಲಸ ಮಾಡಿದ್ದರು. ‘ಇದು ನಿಜಕ್ಕೂ ಶಾಕಿಂಗ್​. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ನಿತಿನ್ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ನಾಯಿಯಂತೆ ಎಳೆದು ಹಾಕಿದರು, ಎಲ್ಲರ ಮುಂದೆ ಅವಮಾನಿಸಿದರು: ಸಲ್ಮಾನ್ ಖಾನ್ ಬಾಡಿಗಾರ್ಡ್​ಗಳ ವಿರುದ್ಧ ನಟಿ ಆರೋಪ

ನಿತಿನ್ ದೇಸಾಯಿ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಹಲವು ಸಿನಿಮಾಗಳನ್ನು ಶೂಟ್ ಮಾಡಲಾಗಿದೆ. ಸಲ್ಮಾನ್ ಖಾನ್ ಅವರು ಹೋಸ್ಟ್​ ಮಾಡುವ ‘ಬಿಗ್ ಬಾಸ್’ನ ವೀಕೆಂಡ್ ಎಪಿಸೋಡ್​ನ ಈ ಮೊದಲು ಇಲ್ಲಿಯೇ ಶೂಟ್ ಮಾಡಲಾಗುತ್ತಿತ್ತು. ನಿತಿನ್ ಅವರು ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್