ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಬಾಂಬೆ ಹೈಕೋರ್ಟ್

ಅಕ್ಟೋಬರ್ 3ರಂದು ಮೂವರನ್ನು ಬಂಧಿಸಲಾಗಿದೆ. ಸಣ್ಣ ಪ್ರಮಾಣದ ಡ್ರಗ್ಸ್ ಪತ್ತೆ, ಸೇವನೆ ಬಗ್ಗೆ ಆರೋಪ ಇದೆ ಎಂದು ಕೋರ್ಟ್‌ನಲ್ಲಿ ಅರ್ಬಾಜ್ ಪರ ವಕೀಲ ಅಮಿತ್ ದೇಸಾಯಿ ವಾದಮಂಡನೆ ಮಾಡಿದ್ದಾರೆ

ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಬಾಂಬೆ ಹೈಕೋರ್ಟ್
ಆರ್ಯನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 27, 2021 | 5:39 PM

ಕ್ರೂಸ್‌ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ಇನ್ನೂ ಅಂತ್ಯವಾಗಿಲ್ಲ. ಆರ್ಯನ್​ ಖಾನ್​ ಬಂಧನಕ್ಕೆ ಒಳಗಾಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಈ ಮಧ್ಯೆ ಇಂದು ಆರ್ಯನ್​ ಖಾನ್​,  ಅರ್ಬಾಜ್ ಮರ್ಚೆಂಟ್, ಮುನ್‌ಮುನ್ ಧಮೇಚಾ ಜಾಮೀನು ಅರ್ಜಿ ವಿಚಾರಣೆ ಬಾಂಬೆ ಹೈಕೋರ್ಟ್‌ನಲ್ಲಿ ನಡೆದಿದೆ. ದೀರ್ಘ ವಿಚಾರಣೆ ನಂತರ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ (ಅಕ್ಟೋಬರ್​ 28) ಮುಂದೂಡಲಾಗಿದೆ. 

ಆರ್ಯನ್ ಪರ ವಕೀಲ ಮುಕುಲ್‌ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ.  ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಯಾವ ಕಾರಣಕ್ಕೆ ಬಂಧನವೆಂದು ತಿಳಿದುಕೊಳ್ಳುವ ಹಕ್ಕಿದೆ. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ’ ಎಂದು ಮುಕುಲ್‌ ರೋಹ್ಟಗಿ ವಾದ ಮಂಡನೆ ಮಾಡಿದರು.

ಕೋರ್ಟ್‌ನಲ್ಲಿ ಅರ್ಬಾಜ್ ಪರ ವಕೀಲ ಅಮಿತ್ ದೇಸಾಯಿ ವಾದಮಂಡನೆ ಮಾಡಿದ್ದಾರೆ. ‘ಅಕ್ಟೋಬರ್ 3ರಂದು ಮೂವರನ್ನು ಬಂಧಿಸಲಾಗಿದೆ. ಸಣ್ಣ ಪ್ರಮಾಣದ ಡ್ರಗ್ಸ್ ಪತ್ತೆ, ಸೇವನೆ ಬಗ್ಗೆ ಆರೋಪ ಇದೆ. ಇದು 1 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣ. ಆದ್ರೆ 41ಎ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಅಕ್ಟೋಬರ್ 3ರಂದು ಮೂವರ ಬಂಧನ ಕಾನೂನುಬಾಹಿರ’ ಎಂದು ವಕೀಲರು ವಾದ ಮಂಡಿಸಿದರು.

‘ಅರ್ಬಾಜ್ ಮರ್ಚೆಂಟ್ ಚರಸ್ ಸೇವಿಸಿದ್ದು ನಿಜ. ಜಾಮೀನು ಅರ್ಜಿ ವಿಚಾರಣೆ ವೇಳೆ ಅರ್ಬಾಜ್ ತಪ್ಪೊಪ್ಪಿಗೆ ಆಗಿದೆ. ಆದರೆ, ಅರ್ಬಾಜ್ ಡ್ರಗ್ಸ್‌ ಮಾರಾಟ, ಸಾಗಾಣಿಕೆ ಮಾಡಿಲ್ಲ. ಸೇವನೆ ಮಾಡುವ ಉದ್ದೇಶದಿಂದಲೇ ಚರಸ್ ಸಾಗಿಸಿದ್ದರು. ಅರ್ಬಾಜ್ ವಿರುದ್ಧವೂ ಪಿತೂರಿ ಆರೋಪ ಮಾಡಲಾಗಿದೆ. ಪಿತೂರಿ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಬಂಧಿತ ಆರೋಪಿಗಳು ಪರಸ್ಪರ ಸಂಪರ್ಕದಲ್ಲಿ ಇರಲಿಲ್ಲ. ಅರ್ಬಾಜ್ ಮರ್ಚೆಂಟ್‌ಗೆ ಈವರೆಗೆ ಬ್ಲಡ್‌ ಟೆಸ್ಟ್‌ ಮಾಡಿಸಿಲ್ಲ. ಪ್ರಕರಣವನ್ನು ಬಿಡಿಯಾಗಿಯೇ ನೋಡಬೇಕು’ ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

Published On - 5:32 pm, Wed, 27 October 21

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ