AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ಗೆ ಕೊನೆಗೂ ಸಿಕ್ತು ಜಾಮೀನು; ಶಾರುಖ್​ ಕುಟುಂಬಕ್ಕೆ ರಿಲೀಫ್​

ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ ಎಂದು ಆರ್ಯನ್​ ಖಾನ್​ ವಾದ ಮಂಡಿಸಿದರು.

ಆರ್ಯನ್​ ಖಾನ್​ಗೆ ಕೊನೆಗೂ ಸಿಕ್ತು ಜಾಮೀನು; ಶಾರುಖ್​ ಕುಟುಂಬಕ್ಕೆ ರಿಲೀಫ್​
ಆರ್ಯನ್​ ಖಾನ್​
TV9 Web
| Edited By: |

Updated on:Oct 28, 2021 | 5:04 PM

Share

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ. ಆರ್ಯನ್​ಗೆ ಜಾಮೀನು ನೀಡಿದ್ದು ಏಕೆ ಎನ್ನುವ ಕಾರಣವನ್ನು ಕೋರ್ಟ್​ ಶುಕ್ರವಾರ ವಿವರಿಸಲಿದೆ. ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. 

ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್​ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ‘ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ಬಗ್ಗೆ ಆರ್ಯನ್‌ಗೆ ಮಾಹಿತಿಯಿತ್ತು. ಆರ್ಯನ್ ವಾಟ್ಸಾಪ್ ಚಾಟ್‌ನಿಂದ ವಾಣಿಜ್ಯ ಉದ್ದೇಶಕ್ಕೆ ಡ್ರಗ್ಸ್​​ ಇಟ್ಟುಕೊಂಡಿದ್ದರು ಎಂಬುದು ಪತ್ತೆ ಆಗಿದೆ. ಕ್ರೂಸ್‌ನಲ್ಲಿ ಹಲವು ಮಾದರಿಯ ಡ್ರಗ್ಸ್ ಪತ್ತೆಯಾಗಿದೆ. ಇದು ನರಹತ್ಯೆಗಿಂತ ಘೋರ ಅಪರಾಧವಾಗಿದೆ’ ಎಂದು ವಾದಿಸಿದರು ಅವರು.

‘ಅರ್ಬಾಜ್ ಡ್ರಗ್ಸ್ ತರುತ್ತಿರುವುದು ಆರ್ಯನ್‌ಗೆ ಗೊತ್ತಿತ್ತು. ಪ್ರಯಾಣ ವೇಳೆ ಇವರು ಡ್ರಗ್ಸ್ ಸೇವಿಸಲು ಪ್ಲಾನ್ ಮಾಡಿದ್ದರು. ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಜಾಮೀನು ಕೊಡಬೇಕೆಂದಿಲ್ಲ. ಮೇಲ್ನೋಟಕ್ಕೆ ಪ್ರಕರಣ ಕಂಡುಬಂದರೂ ನಿರಾಕರಿಸಬಹುದು. ಆರ್ಯನ್, ಅರ್ಬಾಜ್ ಮರ್ಚೆಂಟ್ ಬಾಲ್ಯದ ಸ್ನೇಹಿತರು. ಇಬ್ಬರೂ ಒಟ್ಟಿಗೆ ತೆರಳುತ್ತಿದ್ರು, ಒಂದೇ ಕೊಠಡಿಯಲ್ಲಿರುತ್ತಿದ್ದರು. ಡ್ರಗ್ಸ್ ಸೇವನೆ ಬಗ್ಗೆ ಪರೀಕ್ಷೆ ಮಾಡಿಲ್ಲವೆಂದು ಹೇಳುತ್ತಿದ್ದಾರೆ. ಅವರು ಡ್ರಗ್ಸ್ ಸೇವಿಸಿಲ್ಲ ಅಂದ್ರೆ ಪರೀಕ್ಷೆ ನಡೆಸುವುದು ಏಕೆ? ಆರೋಪಿಗಳ ಬಳಿ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿತ್ತು’ ಎಂದು ಅನಿಲ್ ಸಿಂಗ್ ವಾದ ಮಂಡಿಸಿದರು.

ಆರ್ಯನ್ ಪರ ವಾದ ಮಂಡನೆ ಮಾಡಿದ ವಕೀಲ ಮುಕುಲ್‌ ರೋಹ್ಟಗಿ. ‘ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ.  ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಯಾವ ಕಾರಣಕ್ಕೆ ಬಂಧನವೆಂದು ತಿಳಿದುಕೊಳ್ಳುವ ಹಕ್ಕಿದೆ. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ’ ಎಂದು ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು.

ಇದನ್ನೂ ಓದಿ:  Hrithik Roshan on Aryan Khan Case: ಆರ್ಯನ್ ಪರ ಮತ್ತೊಮ್ಮೆ ಬ್ಯಾಟ್ ಬೀಸಿದ ಹೃತಿಕ್; ಈ ಬಾರಿ ಹೇಳಿದ್ದೇನು?

Published On - 4:44 pm, Thu, 28 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ