AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್ ಖಾನ್ ವಕೀಲರು ಮತ್ತೆ ಬದಲು; ಇಂದು ಮುಂಬೈ ಹೈಕೋರ್ಟ್​​ನಲ್ಲಿ ಜಾಮೀನು ಅರ್ಜಿಯ ವಿಚಾರಣೆ

Aryan Khan Bail: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ. ಆರ್ಯನ್ ಪರ ವಕೀಲರು ಮತ್ತೆ ಬದಲಾಗಿದ್ದಾರೆ.

Aryan Khan: ಆರ್ಯನ್ ಖಾನ್ ವಕೀಲರು ಮತ್ತೆ ಬದಲು; ಇಂದು ಮುಂಬೈ ಹೈಕೋರ್ಟ್​​ನಲ್ಲಿ ಜಾಮೀನು ಅರ್ಜಿಯ ವಿಚಾರಣೆ
ಆರ್ಯನ್ ಖಾನ್
TV9 Web
| Edited By: |

Updated on: Oct 26, 2021 | 11:46 AM

Share

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರ ಜಾಮೀನು ಅರ್ಜಿಯನ್ನು ಮುಂಬೈ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಕ್ರೂಸ್ ಶಿಪ್ ಒಂದರಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಮೊದಲು ವಿಶೇಷ ನ್ಯಾಯಾಲಯದಲ್ಲಿ ಆರ್ಯನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ಆದರೆ ನ್ಯಾಯಾಲಯವು ಜಾಮೀನನ್ನು ನಿರಾಕರಿಸಿತ್ತು. ಜೊತೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿತ್ತು. ಇಂದು ನಡೆಯಲಿರುವ ವಿಚಾರಣೆಯಲ್ಲಿ ಖ್ಯಾತ ವಕೀಲ ಮುಕುಲ್ ರೋಹಟಗಿ (Mukul Rohatagi) ಆರ್ಯನ್ ಪರ ವಾದ ಮಂಡಿಸಲಿದ್ದಾರೆ. ಅವರು ಆರ್ಯನ್ ಪರ ಜಾಮೀನಿಗಾಗಿ ವಾದ ಮಂಡಿಸುತ್ತಿರುವ ಮೂರನೇ ವಕೀಲರಾಗಿದ್ದಾರೆ.

ಭಾರತದ ಮಾಜಿ ಅಟಾರ್ನಿ ಜನರಲ್ ಆಗಿರುವ ಮುಕುಲ್ ರೋಹಟಗಿ ಆರ್ಯನ್ ಪರ ವಾದ ಮಂಡಿಸುತ್ತಿದ್ದಾರೆ. ಅಕ್ಟೋಬರ್ 2ರಂದು ಬಂಧನಕ್ಕೊಳಗಾಗಿದ್ದ ಆರ್ಯನ್, ಕೆಲ ಕಾಲ ಎನ್​ಸಿಬಿ ವಶದಲ್ಲಿದ್ದರು. ಅಕ್ಟೋಬರ್ 8ರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಸ್ತುತ ಅಕ್ಟೋಬರ್ 30ರವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಈ ಹಿಂದೆ ಎರಡು ಬಾರಿ ಆರ್ಯನ್ ಖಾನ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಮೊದಲ ಬಾರಿಗೆ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಹಲವರಿಗೆ ಜಾಮೀನು ಕೊಡಿಸಿದ್ದ ಖ್ಯಾತ ವಕೀಲ ಸತೀಶ್ ಮಾನೆಶಿಂಧೆ ಆರ್ಯನ್ ಪರ ವಾದ ಮಂಡಿಸಿದ್ದರು. ಆದರೆ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸರಿಯಾಗಿ ನಿರ್ವಹಿಸಿಲ್ಲ ಎಂದು ನ್ಯಾಯಾಲಯ ಜಾಮೀನು ತಿರಸ್ಕರಿಸಿತ್ತು. ನಂತರ ಸಲ್ಮಾನ್ ಖಾನ್​ಗೆ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಜಾಮೀನು ಕೊಡಿಸಿದ್ದ ಖ್ಯಾತ ವಕೀಲ ಅಮಿತ್ ದೇಸಾಯಿ ವಾದ ಮಂಡಿಸಿದ್ದರು.

ಆ ಸಮಯದಲ್ಲಿ ಎನ್​ಸಿಬಿ ಜಾಮೀನು ನೀಡಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ಪ್ರತಿವಾದ ಮಂಡಿಸಿತ್ತು. ನ್ಯಾಯಾಲಯವು ಅಂತಿಮವಾಗಿ ಆರ್ಯನ್​ಗೆ ಜಾಮೀನನ್ನು ನಿರಾಕರಿಸಿತ್ತು. ವಕೀಲರು ಹೈಕೋರ್ಟ್​ಗೆ ಮೊರೆ ಹೋಗಲು ತೀರ್ಮಾನಿಸಿದ್ದರು. ಅದರಂತೆ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಖ್ಯಾತ ವಕೀಲ ಮುಕುಲ್ ರೋಹಟಗಿ ವಾದ ಮಾಡುತ್ತಿರುವುದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ:

ರವಿಚಂದ್ರನ್​ ಪುತ್ರರ ಬಗ್ಗೆ ಕಾಕ್ರೋಚ್​ ಸುಧಿ ವಿಶೇಷ ಮಾತು; ‘ಕನಸುಗಾರ’ ನೆನಪಿಸಿದ ಮನು-ವಿಕ್ರಮ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್