AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

ಶಿವಸೇನಾ ಮುಖಂಡ ಕಿಶೋರ್​ ತಿವಾರಿ ಅವರು ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಆರೋಪ ಹೊರಿಸಿದ್ದಾರೆ. ಆರ್ಯನ್​ ಖಾನ್​ ಮುಂತಾದ ಸೆಲೆಬ್ರಿಟಿಗಳ ಮೇಲೆ ಪದೇಪದೇ ದಾಳಿ ನಡೆಯಲು ಸಮೀರ್ ವಾಂಖೆಡೆಯ ವೈಯಕ್ತಿಕ ದ್ವೇಷವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ
ಆರ್ಯನ್ ಖಾನ್​, ಸಮೀರ್​ ವಾಂಖೆಡೆ
TV9 Web
| Edited By: |

Updated on: Oct 19, 2021 | 1:58 PM

Share

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪದ ಮೇಲೆ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಲೇ ಇದೆ. ಕೆಲವರು ಎನ್​ಸಿಬಿ ಅಧಿಕಾರಿಗಳ ಪರ ಮಾತನಾಡುತ್ತಿದ್ದರೆ, ಇನ್ನೂ ಕೆಲವರು ಆರ್ಯನ್​ ಖಾನ್​ಗೆ ಬೆಂಬಲ ಸೂಚಿಸುತ್ತಿದ್ದಾರೆ. ಸ್ಟಾರ್​ ಪುತ್ರನನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಕೆಲವರು ಆರೋಪ ಹೊರಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ದ್ವೇಷಕ್ಕಾಗಿ ಅವರು ಬಾಲಿವುಡ್​ ಸೆಲೆಬ್ರಿಟಿಗಳನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಶಿವಸೇನಾ ಮುಂಖಡ ಕಿಶೋರ್​ ತಿವಾರಿ ಆರೋಪಿಸಿದ್ದಾರೆ.

ಆರ್ಯನ್​ ಖಾನ್​ ಬಂಧನಕ್ಕೆ ಸಂಬಂಧಿಸಿದಂತೆ ಎನ್​ಸಿಬಿ ಅಧಿಕಾರಿಗಳ ಕಾರ್ಯದಲ್ಲಿ ಸುಪ್ರೀಂ ಕೋರ್ಟ್​ ಮಧ್ಯ ಪ್ರವೇಶಿಸಬೇಕು ಎಂದು ಕಿಶೋರ್​ ತಿವಾರಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರದ ಒತ್ತಡದಿಂದ ಎನ್​ಸಿಬಿ ಅಧಿಕಾರಿಗಳು ಆರ್ಯನ್​ ಖಾನ್​ ಅವರನ್ನು ಬಂಧಿಸಿದ್ದಾರೆ ಎಂದು ಶಿವಸೇನಾ ಮತ್ತು ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಆರೋಪಿಸುತ್ತಿದೆ.

ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಿಶೋರ್​ ತಿವಾರಿ ಅವರು ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಕೆಲವು ಆರೋಪಗಳನ್ನು ಹೊರಿಸಿದ್ದಾರೆ. ಸಮೀರ್​ ವಾಂಖೆಡೆ ಪತ್ನಿ ಕ್ರಾಂತಿ ಕೇದ್ಕರ್​ ಅವರು ಬಾಲಿವುಡ್​ನಲ್ಲಿ ಮಿಂಚಬೇಕು ಎಂದುಕೊಂಡಿದ್ದರು. ಆದರೆ ಯಶಸ್ವಿ ಆಗಲಿಲ್ಲ. ಆ ಸೇಡಿಗಾಗಿ ಅವರು ಬಾಲಿವುಡ್​ ಸೆಲೆಬ್ರಿಟಿಗಳ ಮೇಲೆ ಪದೇಪದೇ ದಾಳಿ ಮಾಡುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ನಡೆದ ಡ್ರಗ್ಸ್​ ದಾಳಿಗೆ ಈ ದ್ವೇಷವೇ ಕಾರಣ ಎಂಬುದು ಕಿಶೋರ್​ ತಿವಾರಿ ಆರೋಪ.

ಈ ಹಿಂದೆ ಗಾಯಕ ವಿಶಾಲ್​ ದದ್ಲಾನಿ ಅವರು ಕೂಡ ಎನ್​ಸಿಬಿ ಅಧಿಕಾರಿಗಳ ವಿರುದ್ಧ ಮಾತನಾಡಿದ್ದರು. ‘ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ತಾಲಿಬಾನಿ ಡ್ರಗ್ಸ್​ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್​ ಖಾನ್​ ಮತ್ತು ಅವರ ಕುಟುಂಬವನ್ನು ಟಾರ್ಗೆಟ್​ ಮಾಡಲಾಗಿದೆ’ ಎಂದು ವಿಶಾಲ್​ ದದ್ಲಾನಿ ನೇರವಾಗಿ ಆರೋಪ ಮಾಡಿದ್ದರು. ಶಾರುಖ್​ ಖಾನ್​ ಜೊತೆ ಕೆಲಸ ಮಾಡಿದ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಈಗ ಅವರ ಪರ ನಿಂತಿದ್ದಾರೆ. ಫರ್ಹಾ ಖಾನ್​, ಶೇಖರ್​ ಸುಮನ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು