Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Aryan Khan Case: ಜೈಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಖಾನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ
ಆರ್ಯನ್​ ಖಾನ್​, ಶಾರುಖ್​ ಖಾನ್​
Follow us
| Updated By: ಮದನ್​ ಕುಮಾರ್​

Updated on: Oct 19, 2021 | 8:13 AM

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪದ ಮೇಲೆ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೈಲು ಸೇರಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಮುಂಬೈನ ಆರ್ಥರ್​ ರೋಡ್​ ಜೈಲಿನಲ್ಲಿ ಇರುವ ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುತ್ತಿಲ್ಲ. ಈ ನಡುವೆ ಹೊಸ ಸುದ್ದಿಯೊಂದು ಕೇಳಿಬಂದಿದೆ. ಜೈಲಿನಲ್ಲಿ ಆರ್ಯನ್​ ಖಾನ್​ ಸ್ನಾನ ಮಾಡುತ್ತಿಲ್ಲ ಎನ್ನಲಾಗಿದೆ. ಇದು ಜೈಲು ಅಧಿಕಾರಿಗಳಿಗೆ ತಲೆನೋವು ತಂದಿದೆ. ಈ ಕುರಿತು ಹಲವು ಕಡೆಗಳಲ್ಲಿ ವರದಿ ಆಗಿದೆ.

ಸ್ಟಾರ್​ ಪುತ್ರನಾಗಿ ಹುಟ್ಟಿದ ಆರ್ಯನ್​ ಖಾನ್​ ಅವರು ಜೀವನದಲ್ಲಿ ಕಷ್ಟವನ್ನೇ ಕಂಡಿರಲಿಲ್ಲ. ಇಷ್ಟು ದಿನ ಐಷಾರಾಮಿ ಜೀವನ ಸಾಗಿಸಿದ್ದ ಅವರಿಗೆ ಈಗ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗಿದೆ. ಅಲ್ಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಸ್ನಾನವನ್ನೂ ಮಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬಂದಿದೆ.

ಶಾರುಖ್​ ಪುತ್ರನ ಈ ವರ್ತನೆಯಿಂದ ಜೈಲು ಅಧಿಕಾರಿಗಳಿಗೆ ತಲೆನೋವು ಉಂಟಾಗಿದೆ. ಹೀಗೆಲ್ಲ ಮಾಡಿ ಆರೋಗ್ಯ ಕೆಡಿಸಿಕೊಂಡರೆ ಮುಂದಿನ ವಿಚಾರಣೆಗೆ ತೊಂದರೆ ಆಗುತ್ತದೆ. ಹಾಗಾಗಿ ಜೈಲು ಅಧಿಕಾರಿಗಳು ಶಾರುಖ್​ ಪುತ್ರನನ್ನು ಬೇರೊಂದು ಸೆಲ್​ಗೆ ವರ್ಗಾಯಿಸಿದ್ದಾರೆ. ಆದರೆ ಅಲ್ಲಿ ಅವರನ್ನು ಭೇಟಿ ಮಾಡಲು ಶಾರುಖ್​ ಖಾನ್​, ಗೌರಿ ಖಾನ್​ ಸೇರಿದಂತೆ ಯಾರಿಗೂ ಅವಕಾಶ ನೀಡಿಲ್ಲ. ಕೇವಲ ವಿಡಿಯೋ ಕಾಲ್​ ಮೂಲಕ ಮಾತನಾಡಲು ಅವಕಾಶ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಅ.20ರವರೆಗೆ ಆರ್ಯನ್ ಖಾನ್​ ಜೈಲಿನಲ್ಲೇ ಕಳೆಯಬೇಕಾಗಿದೆ. ಆ ಬಳಿಕ ಅವರಿಗೆ ಜಾಮೀನು ಸಿಗುತ್ತೋ ಇಲ್ಲವೋ ಎಂಬ ಕೌತುಕ ಮನೆ ಮಾಡಿದೆ. ಘಟಾನುಘಟಿ ವಕೀಲರ ಸಹಾಯ ಪಡೆದುಕೊಳ್ಳುತ್ತಿರುವ ಶಾರುಖ್​ ಖಾನ್​ ಅವರು ಮಗನಿಗೆ ಜಾಮೀನು ಕೊಡಿಸಲು ಕಷ್ಟಪಡುತ್ತಿದ್ದಾರೆ. ಆರ್ಯನ್​ ಖಾನ್​ ಮಾಡಿದ ತಪ್ಪಿನಿಂದಾಗಿ ಶಾರುಖ್​ ವೃತ್ತಿಜೀವನ ಕೂಡ ಹಾದಿ ತಪ್ಪುವಂತಾಗಿದೆ. ಅನೇಕ ಪ್ರತಿಷ್ಠಿತ ಕಂಪನಿಗಳು ಶಾರುಖ್​ ಜೊತೆ ಮಾಡಿಕೊಂಡಿದ್ದ ಜಾಹೀರಾತು ಒಪ್ಪಂದವನ್ನು ಮುರಿದುಕೊಳ್ಳುತ್ತಿವೆ.

ಇದನ್ನೂ ಓದಿ:

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ