ಜಾಮೀನು ತಿರಸ್ಕಾರಗೊಂಡ ಬೆನ್ನಲ್ಲೇ ಆರ್ಯನ್ ಖಾನ್​ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

| Updated By: ರಾಜೇಶ್ ದುಗ್ಗುಮನೆ

Updated on: Oct 21, 2021 | 5:22 PM

ಆರ್ಯನ್​ ಪರ ವಕೀಲರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಮತ್ತೊಂದಷ್ಟು ದಿನ ಆರ್ಯನ್​ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ಜಾಮೀನು ತಿರಸ್ಕಾರಗೊಂಡ ಬೆನ್ನಲ್ಲೇ ಆರ್ಯನ್ ಖಾನ್​ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ಆರ್ಯನ್ ಖಾನ್
Follow us on

ರೇವ್​​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್​ಗೆ ಸಂಕಷ್ಟ ಸದ್ಯಕ್ಕೆ ಮುಗಿಯುವ ರೀತಿಯಲ್ಲಿ ಕಾಣುತ್ತಿಲ್ಲ.  ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ಅಕ್ಟೋಬರ್​ 20ರಂದು ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬೆನ್ನಲ್ಲೇ ಆರ್ಯನ್​ ಖಾನ್​ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್​ 30ರವರೆಗೆ ವಿಸ್ತರಣೆ ಮಾಡಿ ಎನ್​ಸಿಬಿ ಕೋರ್ಟ್​ ಆದೇಶ ಹೊರಡಿಸಿದೆ. ಆರ್ಯನ್​ ಪರ ವಕೀಲರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಮತ್ತೊಂದಷ್ಟು ದಿನ ಆರ್ಯನ್​ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ಡ್ರಗ್ಸ್ ಕಳ್ಳ ಸಾಗಣೆ ಬಹಳ‌‌ ಗಂಭೀರ, ಕಳಕಳಿಯ ವಿಷಯ. ರೇವ್ ಪಾರ್ಟಿಗಳಲ್ಲಿ ಯುವಜನತೆ ಡ್ರಗ್ಸ್ ಸೇವನೆ ಮಾಡುತ್ತಾರೆ. ಇದರಿಂದ ದೇಶಕ್ಕೆ ತೊಂದರೆ ಆಗುತ್ತದೆ. ಇದು ಒಂದಿಬ್ಬರ ಡ್ರಗ್ಸ್ ಸೇವನೆಗೆ ಸಂಬಂಧಪಟ್ಟಿದ್ದಲ್ಲ. ನಾವು ಇಡೀ ಜಾಲದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆರ್ಯನ್ ಖಾನ್​​​ನನ್ನು‌ ಪಾರ್ಟಿಗೆ ಆಹ್ವಾನಿಸಲಾಗಿತ್ತು. ಯಾರು, ಯಾವಾಗ ಆಹ್ವಾನಿಸಿದರು ಎಂದು ಹೇಳುತ್ತಿಲ್ಲ. ಅವರಿಗೆ ಜಾಮೀನು ನೀಡಬಾರದು ಎಂದು ಎನ್​ಸಿಬಿ ಪರ ವಕೀಲರು ವಾದ ಮಂಡಿಸಿದ್ದರು. ಅಲ್ಲದೆ, ಆರ್ಯನ್​ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ, ಅವರಿಗೆ ಜಾಮೀನು ಸಿಗುತ್ತಿಲ್ಲ.

ವಿಚಾರಣೆಗೆ ಹಾಜರಾದ ಅನನ್ಯಾ ಪಾಂಡೆ:

ಎನ್​ಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದಾರೆ. ಶಾರುಖ್​ ಖಾನ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೇ ಉದಯೋನ್ಮುಖ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೂ ದಾಳಿ ನಡೆದಿದ್ದು, ಡ್ರಗ್ಸ್​ ಕೇಸ್​ ಸುಳಿಯಲ್ಲಿ ಅವರೂ ಸಿಕ್ಕಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಚಂಕಿ ಪಾಂಡೆ ಬೇಡಿಕೆಯ ನಟ ಆಗಿದ್ದರು. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗಿದೆ. ಶಾರುಖ್​ ಮಗ ಆರ್ಯನ್​ಗೂ ಚಂಕಿ ಪಾಂಡೆ ಮಗಳು ಅನನ್ಯಾ ನಡುವೆ ಒಳ್ಳೆಯ ಗೆಳೆತನ ಇತ್ತು. ಇದು ಅವರಿಗೆ ಸಂಕಷ್ಟ ತಂದಿಟ್ಟಿದ್ದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಂತೆಯೇ ಅನನ್ಯಾ ಮುಂಬೈನ ಎನ್​ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.

Published On - 5:17 pm, Thu, 21 October 21