‘ಮಗನೇ ಆ ಶರ್ಟ್​ ನನ್ನದು’; ಆರ್ಯನ್​ ಖಾನ್ ಹೊಸ ಪೋಸ್ಟ್​ಗೆ ಕಮೆಂಟ್ ಹಾಕಿ ಕಾಲೆಳೆದ ಶಾರುಖ್​

ಆರ್ಯನ್ ಖಾನ್ ಆ ಘಟನೆಯನ್ನು ಸಂಪೂರ್ಣವಾಗಿ ಮರೆಯುತ್ತಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರು ಹಾಕಿದ ಹೊಸ ಪೋಸ್ಟ್ ಸಖತ್ ಗಮನ ಸೆಳೆದಿದೆ.

‘ಮಗನೇ ಆ ಶರ್ಟ್​ ನನ್ನದು’; ಆರ್ಯನ್​ ಖಾನ್ ಹೊಸ ಪೋಸ್ಟ್​ಗೆ ಕಮೆಂಟ್ ಹಾಕಿ ಕಾಲೆಳೆದ ಶಾರುಖ್​
ಆರ್ಯನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 14, 2022 | 6:30 AM

ಆರ್ಯನ್ ಖಾನ್ (Aryan Khan) ಅವರು ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದರು. ಈ ಪ್ರಕರಣದಲ್ಲಿ ಅವರ ಕೈವಾಡ ಇಲ್ಲ ಎಂಬುದನ್ನು ಕೋರ್ಟ್​​ ತೀರ್ಪು ನೀಡಿತ್ತು. ಆರ್ಯನ್ ಖಾನ್ ಅವರು ಜೈಲಿನಲ್ಲಿದ್ದ ಸಂದರ್ಭದಲ್ಲಿ ಶಾರುಖ್ ಖಾನ್ (Shah Rukh Khan) ಅವರು ತುಂಬಾನೇ ಚಿಂತಾಕ್ರಾಂತರಾಗಿದ್ದರು. ಶಾರುಖ್ ಊಟ ಬಿಟ್ಟಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹುಟ್ಟಿಕೊಂಡಿದ್ದವು. ಆರ್ಯನ್​ ಖಾನ್​ಗೆ ಶಾರುಖ್ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ಇದು ತೋರಿಸಿತ್ತು. ಈಗ ಆರ್ಯನ್ ಖಾನ್ ಪೋಸ್ಟ್​ಗೆ ಶಾರುಖ್ ಸಖತ್ ಫನ್ನಿ ಆಗಿ ಪ್ರತಿಕ್ರಿಯಿಸಿದ್ದಾರೆ.

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದ ನಂತರ ಅವರು ಒಂದು ತಿಂಗಳು ಜೈಲಿನಲ್ಲಿದ್ದು ಬಂದರು. ಜೈಲಿನಿಂದ ಹೊರ ಬಂದ ನಂತರದಲ್ಲಿ ಆರ್ಯನ್ ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಂಡಿಲ್ಲ. ಈ ಘಟನೆ ನಡೆದು ಒಂದು ವರ್ಷ ಕಳೆಯುತ್ತಾ ಬಂದಿದೆ. ಆರ್ಯನ್ ಖಾನ್ ಆ ಘಟನೆಯನ್ನು ಸಂಪೂರ್ಣವಾಗಿ ಮರೆಯುತ್ತಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರು ಹಾಕಿದ ಹೊಸ ಪೋಸ್ಟ್ ಸಖತ್ ಗಮನ ಸೆಳೆದಿದೆ.

ಖಾಸಗಿ ಬ್ರ್ಯಾಂಡ್​ನ ಜತೆ ಆರ್ಯನ್​ ಖಾನ್ ಒಪ್ಪಂದ ಮಾಡಿಕೊಂಡಿದ್ದಾರೆ. ಅದರ ಪ್ರಮೋಷನ್​​ಗಾಗಿ ಅವರು ಹೊಸ ಪೋಸ್ಟ್ ಹಾಕಿದ್ದಾರೆ. ಈ ಫೋಟೋದಲ್ಲಿ ಸಖತ್ ಹ್ಯಾಂಡ್ಸಮ್​ ಆಗಿ ಕಾಣಿಸಿಕೊಂಡಿದ್ದಾರೆ ಆರ್ಯನ್ ಖಾನ್. ಫೋಟೋ ನೋಡಿದ ಅನೇಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಶಾರುಖ್ ಕೂಡ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಆರ್ಯನ್ ಸಹೋದರಿ ಸುಹಾನಾ ಖಾನ್ ಅವರು ಕಣ್ಣಿನಲ್ಲಿ ಹಾರ್ಟ್ ಇರುವ ಎಮೋಜಿ ಪೋಸ್ಟ್ ಮಾಡಿದ್ದಾರೆ. ಆರ್ಯನ್ ಖಾನ್ ತಾಯಿ ಗೌರಿ ಖಾನ್ ಅವರು ‘ನನ್ನ ಹುಡುಗ. ಲವ್​.. ಲವ್​.. ಲವ್​..’ ಎಂದು ಕಮೆಂಟ್ ಮಾಡಿದ್ದಾರೆ. ಶಾರುಖ್ ಖಾನ್ ಅವರು ತಮ್ಮದೇ ಶೈಲಿಯಲ್ಲಿ ಕಮೆಂಟ್ ಹಾಕಿದ್ದಾರೆ. ‘ಚೆನ್ನಾಗಿ ಕಾಣುತ್ತಿದ್ದೀಯಾ. ತಂದೆಯಲ್ಲಿ ಯಾವ ವಿಚಾರ ಸೈಲೆಂಟ್ ಇರುತ್ತದೆಯೋ ಅದು ಮಗನಲ್ಲಿ ಎದ್ದು ಕಾಣುತ್ತದೆ. ಅಂದಹಾಗೆ ಆ ಟಿ-ಶರ್ಟ್​ ನನ್ನದು’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಸ್ಟಾರ್ ನಟಿಯ ತಂಗಿ ಜತೆ ಆರ್ಯನ್ ಖಾನ್ ಸುತ್ತಾಟ; ಪಾರ್ಟಿ ಫೋಟೋ ವೈರಲ್

ಆರ್ಯನ್ ಖಾನ್ ಅವರು ಹೊಸ ವೆಬ್​ ಸೀರಿಸ್ ನಿರ್ದೇಶನ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ಶಾರುಖ್ ಖಾನ್ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ