ಆರ್ಯನ್ ಮತ್ತೊಂದು ಮುಖ ಬಯಲು; ವೈರಲ್ ಆಯ್ತು ಹಳೇ ವಿಡಿಯೋ
ಆರ್ಯನ್ ಸೆಲೆಬ್ರಿಟಿ ಮಗ ಆಗಿರಬಹುದು. ಆದರೆ, ಅವರಿಗೆ ಎಲ್ಲರಿಗೂ ಸಹಾಯ ಮಾಡಬೇಕು ಎನ್ನುವ ಮನಸ್ಸಿದೆ. ಆರ್ಯನ್ ಅವರು ಮಲೈಕಾ ಅರೋರಾ ಸೇರಿ ಇತರರ ಜತೆ ಮುಂಬೈನ ರೆಸ್ಟೋರೆಂಟ್ ಒಂದಕ್ಕೆ ತೆರಳಿದ್ದರು.
ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ಗೆ ಸಂಕಷ್ಟ ಹೆಚ್ಚುತ್ತಿದೆ. ಕೇವಲ 23ನೇ ವಯಸ್ಸಿಗೆ ಅವರು ಡ್ರಗ್ಸ್ ಕೇಸ್ನಲ್ಲಿ ಎನ್ಸಿಬಿ ಬಲೆಗೆ ಬಿದ್ದಿದ್ದಾರೆ. ಇದರಿಂದ ಅವರ ಕರಿಯರ್ಗೆ ದೊಡ್ಡ ಮಟ್ಟದಲ್ಲಿ ಹೊಡೆತ ಬೀಳುವ ಸಾಧ್ಯತೆ ಇದೆ. ಹೀಗಿರುವಾಗಲೇ ಆರ್ಯನ್ ಅವರ ಮತ್ತೊಂದು ಮುಖ ಅನಾವರಣ ಆಗಿದೆ. ಹಳೆಯ ವಿಡಿಯೋ ಒಂದು ಈಗ ವೈರಲ್ ಆಗಿದೆ.
ಆರ್ಯನ್ ಸೆಲೆಬ್ರಿಟಿ ಮಗ ಆಗಿರಬಹುದು. ಆದರೆ, ಅವರಿಗೆ ಎಲ್ಲರಿಗೂ ಸಹಾಯ ಮಾಡಬೇಕು ಎನ್ನುವ ಮನಸ್ಸಿದೆ. ಆರ್ಯನ್ ಅವರು ಮಲೈಕಾ ಅರೋರಾ ಸೇರಿ ಇತರರ ಜತೆ ಮುಂಬೈನ ರೆಸ್ಟೋರೆಂಟ್ ಒಂದಕ್ಕೆ ತೆರಳಿದ್ದರು. ಅಲ್ಲಿಂದ ಅವರು ಹೊರ ಬರುತ್ತಿದ್ದಂತೆ ಸಣ್ಣ ಮಕ್ಕಳು ಭಿಕ್ಷೆ ಎತ್ತುತ್ತಿರುವುದು ಕಂಡು ಬಂದಿದೆ. ಈ ವೇಳೆ ಅವರಿಗೆ ಆರ್ಯನ್ ಸಹಾಯ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.
View this post on Instagram
ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಆರ್ಯನ್ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಆರ್ಯನ್ ಅವರನ್ನು ವಶಕ್ಕೆ ಪಡೆದಿದೆ. ಅಲ್ಲಿಂದ ಅವರನ್ನು ಎನ್ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್ಸಿಬಿ ಕಚೇರಿ ಒಳಗೆ ಆರ್ಯನ್ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ಈಗ ಅವರನ್ನು ಅರೆಸ್ಟ್ ಮಾಡಲಾಗಿದೆ. ಇದರಿಂದ ಶಾರುಖ್ ವಿಚಲಿತರಾಗಿದ್ದಾರೆ.
ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್ನಲ್ಲಿ ಹರಡಿರುವ ಡ್ರಗ್ಸ್ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ. ಆರ್ಯನ್ ಖಾನ್ಗೆ ನಟನಾಗುವ ಆಸಕ್ತಿ ಇಲ್ಲವಂತೆ. ಅದನ್ನು ಈ ಹಿಂದೆ ಶಾರುಖ್ ಹೇಳಿಕೊಂಡಿದ್ದರು. ಹಾಗಂತ ಅವರು ಸಿನಿಮಾ ಕ್ಷೇತ್ರದಿಂದ ದೂರ ಉಳಿದುಕೊಳ್ಳುತ್ತಾರೆ ಎಂದರ್ಥವಲ್ಲ. ನಿರ್ದೇಶನದಲ್ಲಿ ತೊಡಗಿಕೊಳ್ಳುವ ಆಸಕ್ತಿ ಅವರಿಗೆ ಇದೆ. ಲಂಡನ್ನ ‘ಸೆವೆನ್ ಓಕ್ಸ್ ಹೈಸ್ಕೂಲ್’ನಲ್ಲಿ ಆರ್ಯನ್ ಪದವಿ ಶಿಕ್ಷಣ ಪಡೆದಿದ್ದಾರೆ. ಕಳೆದ ವರ್ಷ, ಅಂದರೆ 2020ರಲ್ಲಿ ಫೈನ್ ಆರ್ಟ್ಸ್, ಸಿನಿಮ್ಯಾಟಿಕ್ ಆರ್ಟ್ಸ್, ಫಿಲ್ಮ್ ಮತ್ತು ಟೆಲಿವಿಷನ್ ಪ್ರೊಡಕ್ಷನ್ ವಿಷಯಗಳಲ್ಲಿ ಅವರು ಪದವಿ ಪಡೆದಿದ್ದಾರೆ.
ಇದನ್ನೂ ಓದಿ: ಆರ್ಯನ್ ಖಾನ್ಗೆ ಜಾಮೀನು ಅಥವಾ ಜೈಲು? ಮತ್ತೆ ಕೋರ್ಟ್ ಮುಂದೆ ಬರಲಿರುವ ಶಾರುಖ್ ಪುತ್ರ