AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ’ ಎರಡನೇ ಪಾರ್ಟ್​ನಲ್ಲಿ ಆರ್ಯನ್ ಖಾನ್? ವೈರಲ್ ಆಯ್ತು ನಕಲಿ ಪೋಸ್ಟರ್  

ಶಾರುಖ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ನಟ. ಮಗ ಆರ್ಯನ್ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂಬುದು ಶಾರುಖ್ ಉದ್ದೇಶ ಆಗಿತ್ತು. ಆದರೆ, ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್ ಹೆಸರು ಸೇರಿಕೊಂಡಿತು.

‘ಬ್ರಹ್ಮಾಸ್ತ್ರ’ ಎರಡನೇ ಪಾರ್ಟ್​ನಲ್ಲಿ ಆರ್ಯನ್ ಖಾನ್? ವೈರಲ್ ಆಯ್ತು ನಕಲಿ ಪೋಸ್ಟರ್  
ಆರ್ಯನ್
TV9 Web
| Edited By: |

Updated on: Oct 01, 2022 | 8:01 PM

Share

ಅಯಾನ್ ಮುಖರ್ಜಿ (Ayan Mukerji) ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೂರು ಭಾಗ​ಗಳಲ್ಲಿ ಬರಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿತ್ತು. ಈಗ ಮೊದಲ ಪಾರ್ಟ್ ಹಿಟ್ ಆಗಿರುವುದರಿಂದ ಎರಡನೇ ಪಾರ್ಟ್ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಶಾರುಖ್ ಖಾನ್ ಅವರು ಮೊದಲ ಪಾರ್ಟ್​ನಲ್ಲಿ ಮಿಂಚಿದ್ದರು. ಈಗ ಆರ್ಯನ್ ಖಾನ್ (Aryan Khan) ಅವರು ಎರಡನೇ ಪಾರ್ಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಎಡಿಟ್ ಮಾಡಲಾದ ಫೋಟೋಗಳು ಹರಿದಾಡುತ್ತಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಶಾರುಖ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ನಟ. ಮಗ ಆರ್ಯನ್ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂಬುದು ಶಾರುಖ್ ಉದ್ದೇಶ ಆಗಿತ್ತು. ಆದರೆ, ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್ ಹೆಸರು ಸೇರಿಕೊಂಡಿತು. ಅವರು ಅರೆಸ್ಟ್ ಕೂಡ ಆದರು. ಈ ಕಾರಣದಿಂದ ಹಲವು ಸಮಯ ಆರ್ಯನ್ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈಗ ಆರ್ಯನ್ ಖಾನ್ ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಅವರು ನಟನೆಗೂ ಕಾಲಿಡಲಿದ್ದಾರಂತೆ.

ಮೊದಲ ಪಾರ್ಟ್​ನಲ್ಲಿ ವಾನರ ಅಸ್ತ್ರವನ್ನು ಶಾರುಖ್ ನಿರ್ವಹಿಸಿದ್ದರು. ಆದರೆ, ಈ ಪಾತ್ರ ಮೊದಲ ಪಾರ್ಟ್​ನಲ್ಲೇ ಕೊನೆಯಾಗುತ್ತದೆ. ಈ ಕಾರಣಕ್ಕೆ ಎರಡನೇ ಪಾರ್ಟ್​ನಲ್ಲಿ ಆ ಪಾತ್ರವನ್ನು ಆರ್ಯನ್ ಖಾನ್ ನಿರ್ವಹಿಸಿದರೆ ಉತ್ತಮ ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ವಿವಿಧ ರೀತಿಯ ಫ್ಯಾನ್ ಮೇಡ್ ಪೋಸ್ಟ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

ಅಯಾನ್ ಮುಖರ್ಜಿ ಅವರು ಈಗಾಗಲೇ ‘ಬ್ರಹ್ಮಾಸ್ತ್ರ 2’ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ಯಾರೆಲ್ಲ ಇರಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ. ಮೊದಲ ಪಾರ್ಟ್​ಗಿಂತಲೂ ಎರಡನೇ ಪಾರ್ಟ್​ ಅದ್ದೂರಿಯಾಗಿ ಮೂಡಿ ಬರಲಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಇದನ್ನೂ ಓದಿ: ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ

ಆರ್ಯನ್ ಖಾನ್ ವಿಚಾರಕ್ಕೆ ಬರೋದಾದರೆ ವೆಬ್ ಸೀರಿಸ್ ನಿರ್ದೇಶನ ಮಾಡಲು ಅವರು ನಿರ್ಧರಿಸಿದ್ದಾರೆ. ಶಾರುಖ್ ಖಾನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಸ್ಕ್ರಿಪ್ಟ್ ಕೆಲಸಗಳಲ್ಲಿ ಆರ್ಯನ್ ಖಾನ್ ಬ್ಯುಸಿ ಆಗಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಬಹುದು.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು