ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್

ಆರ್ಯನ್​ ಖಾನ್​ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಇತ್ತೀಚೆಗೆ ಆರ್ಯನ್ ಖಾನ್​​ಗೆ ಪಾಸ್​ಪೋರ್ಟ್ ಹಿಂದಿರುಗಿಸಲಾಗಿದೆ. ಈಗ ಆರ್ಯನ್ ಖಾನ್​ ಮತ್ತೆ ಪಾರ್ಟಿ ಮಾಡುತ್ತಿದ್ದಾರೆ.

ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್
ಆರ್ಯನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 20, 2022 | 4:17 PM

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ (Aryan Khan) ಅವರು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಡ್ರಗ್ಸ್ ಕೇಸ್​ನಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಒಂದು ತಿಂಗಳು ಜೈಲಿನಲ್ಲಿದ್ದು, ನಂತರ ಮನೆಗೆ ಬಂದರು. ಈಗ ಅವರ ಜೀವನದಲ್ಲಿ ಎಲ್ಲವೂ ಸಮ ಸ್ಥಿತಿಗೆ ಮರಳುತ್ತಿದೆ. ಅವರ ವಿರುದ್ಧ ಹಾಕಲಾಗಿದ್ದ ಕೇಸ್ ಸಾಕ್ಷ್ಯ ಇಲ್ಲದೆ ಬಿದ್ದು ಹೋಗಿದೆ. ಈಗ ಅವರು ಮತ್ತೆ ಪಾರ್ಟಿಮೂಡ್​ನಲ್ಲಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಆರ್ಯನ್ ಖಾನ್ ಅವರನ್ನು ಅಕ್ಟೋಬರ್​ ತಿಂಗಳಲ್ಲಿ ಕ್ರೂಸ್​​ ಶಿಪ್​ನಲ್ಲಿ ಅರೆಸ್ಟ್ ಮಾಡಲಾಯಿತು. ಈ ವೇಳೆ ಅವರು ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾದವು. ಆದರೆ, ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು ಹಾಗೂ ಅವರ ಬಳಿ ಮಾದಕ ವಸ್ತು ಇತ್ತು ಎಂಬುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಇತ್ತೀಚೆಗೆ ಆರ್ಯನ್ ಖಾನ್​​ಗೆ ಪಾಸ್​ಪೋರ್ಟ್ ಹಿಂದಿರುಗಿಸಲಾಗಿದೆ. ಈಗ ಆರ್ಯನ್ ಖಾನ್​ ಮತ್ತೆ ಪಾರ್ಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಮುಂಬೈನ ಪಬ್​ ಒಂದರಲ್ಲಿ ಆರ್ಯನ್ ಖಾನ್ ಗೆಳೆಯರ ಜತೆ ಪಾರ್ಟಿ ಮಾಡಿದ್ದಾರೆ. ಆರ್ಯನ್ ಅವರು ಡ್ಯಾನ್ಸ್ ಮಾಡುತ್ತಾ ಮದ್ಯ ಸೇವಿಸುತ್ತಿರುವುದು ವೈರಲ್ ಆದ ವಿಡಿಯೋದಲ್ಲಿದೆ. ಇದನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಆರ್ಯನ್ ಖಾನ್ ಅವರು ಈ ಮೊದಲು ಇಷ್ಟೊಂದು ಹೈಲೈಟ್ ಆಗಿರಲಿಲ್ಲ. ಆರ್ಯನ್ ಖಾನ್ ಅವರು ಶಾರುಖ್ ಖಾನ್ ಮಗ ಎಂಬುದು ಅವರ ಫ್ಯಾನ್ಸ್​ ವಲಯಕ್ಕೆ ಮಾತ್ರ ಗೊತ್ತಿತ್ತು. ಆದರೆ, ಈಗ ಅವರು ಇಡೀ ದೇಶಕ್ಕೆ ಪರಿಚಯ ಆಗಿದ್ದಾರೆ. ಸುದ್ದಿ ವಾಹಿನಿಗಳಲ್ಲಿ ಪದೇಪದೇ ಆರ್ಯನ್​ ತೋರಿಸಲಾಯಿತು. ಹೀಗಾಗಿ, ಅವರು ಅನೇಕರಿಗೆ ಪರಿಚಯಗೊಂಡರು.

ಆರ್ಯನ್ ಅವರು ವೆಬ್ ಸರಣಿ ಒಂದನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ನಿರ್ಮಾಣ ಸಂಸ್ಥೆ ಅಡಿ ಈ ಚಿತ್ರ ಸಿದ್ಧಗೊಳ್ಳಲಿದೆ ಎನ್ನಲಾಗುತ್ತಿದೆ. ಇದು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ.

Published On - 4:08 pm, Wed, 20 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ