ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

ಡ್ರಗ್ಸ್​ ಪಾರ್ಟಿ ಮೇಲೆ ದಾಳಿ ಮಾಡಿದ ಬಳಿಕ ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?
ಕೆಪಿ ಗೋಸಾವಿ, ಆರ್ಯನ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 05, 2021 | 8:55 AM

ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ರಾತ್ರೋರಾತ್ರಿ ಕುಖ್ಯಾತಿ ಪಡೆದುಕೊಂಡಿದ್ದಾರೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡುವಾಗ ಅವರು ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೇವ್​ ಪಾರ್ಟಿ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದಾಗ ಅನೇಕರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು. ಆ ಸಂದರ್ಭದಲ್ಲಿ ಆರ್ಯನ್​ ಖಾನ್​ ಜೊತೆ ಕ್ಲಿಕ್ಕಿಸಿದ ಒಂದು ಸೆಲ್ಫಿ ಈಗ ಸಖತ್​ ವೈರಲ್​ ಆಗಿದೆ.

ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿಯ ಹಾವ-ಭಾವ ನೋಡಿದರೆ ಸ್ಟಾರ್​ ಪುತ್ರನ ಬಗ್ಗೆ ಅವರು ಸಖತ್​ ಅಭಿಮಾನ ಇಟ್ಟುಕೊಂಡಂತಿದೆ. ಅಂಥ ಟೆನ್ಷನ್​ ವೇಳೆಯಲ್ಲೂ ಆರ್ಯನ್​ ಅವರು ಸೆಲ್ಫಿಗೆ ಪೋಸ್​ ನೀಡಿದ್ದಾರೆ. ಈ ವೈರಲ್​ ಫೋಟೋ ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

ಅಷ್ಟಕ್ಕೂ ಈಗ ಹುಟ್ಟಿಕೊಂಡಿರುವ ಪ್ರಶ್ನೆ ಏನೆಂದರೆ, ಆರ್ಯನ್​ ಜೊತೆ ಅಭಿಮಾನದ ಸೆಲ್ಫಿ ಕ್ಲಿಕ್ಕಿಸಿಕೊಂಡು ಆ ವ್ಯಕ್ತಿ ಯಾರು? ಎನ್​ಸಿಬಿ ಅಧಿಕಾರಿಗಳ ತಂಡದ ಸದಸ್ಯರೇ ಇರಬಹುದು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ಆದರೆ ಆ ಮಾತನ್ನು ಎನ್​ಸಿಬಿ ತಳ್ಳಿ ಹಾಕಿದೆ. ‘ವೈರಲ್ ಫೋಟೋದಲ್ಲಿ ಆರ್ಯನ್​ ಖಾನ್​ ಜೊತೆ ಇರುವ ವ್ಯಕ್ತಿಯು ಎನ್​ಸಿಬಿ ಅಧಿಕಾರಿ ಅಥವಾ ನೌಕರ ಅಲ್ಲ’ ಎಂದು ಮಾದಕವಸ್ತು ನಿಯಂತ್ರಣ ಮಂಡಳಿಯು ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಆದರೆ ಆ ವ್ಯಕ್ತಿ ಯಾರು ಎಂಬುದಕ್ಕೆ ಎನ್​ಸಿಬಿ ಉತ್ತರ ನೀಡಿಲ್ಲ.

ಡ್ರಗ್​ ಕೇಸ್​ನಲ್ಲಿ ಸಿಲುಕಿರುವ ಆರ್ಯನ್​ ಖಾನ್​ ಅವರನ್ನು ಎನ್​ಸಿಬಿ ಅಧಿಕಾರಿಗಳು ಸೋಮವಾರ (ಅ.4) ಮುಂಬೈ ಕಿಲ್ಲಾ ಕೋರ್ಟ್​ ಎದುರು ಹಾಜರುಪಡಿಸಿದ್ದಾರೆ. ಈ ವೇಳೆ ಆರ್ಯನ್​ ಕಸ್ಟಡಿ ಅವಧಿಯನ್ನು ಅಕ್ಟೋಬರ್​ 13ರವರೆಗೆ ವಿಸ್ತರಿಸುವಂತೆ ಕೋರ್ಟ್​ ಮುಂದೆ ಎನ್​ಸಿಬಿ ಕೋರಿದೆ. ಆದರೆ, ಅಕ್ಟೋಬರ್​ 7ರವರೆಗೆ ಎನ್​ಸಿಬಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ. ಆರ್ಯನ್​ ಜತೆಗೆ ಉಳಿದ ಆರೋಪಿಗಳ ಎನ್​ಸಿಬಿ ಕಸ್ಟಡಿ ಅವಧಿ ಕೂಡ ವಿಸ್ತರಣೆ ಆಗಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್‌ ಸಿಂಗ್‌ ವಾದ ಮಂಡನೆ ಮಾಡಿದರು.

ಇದನ್ನೂ ಓದಿ:

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್