ಆರ್ಯನ್ ಖಾನ್ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್ನಿಂದ ಮಹತ್ವದ ಆದೇಶ
ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಆರ್ಯನ್ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಆರ್ಯನ್ ಅವರನ್ನು ವಶಕ್ಕೆ ಪಡೆದಿದೆ.
ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಶಾರುಖ್ ಖಾನ್ ಮಗ ಆರ್ಯನ್ಗೆ ಸಂಕಷ್ಟ ಹೆಚ್ಚುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎನ್ಸಿಬಿ ಅಧಿಕಾರಿಗಳು ಆರ್ಯನ್ ಅವರನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ಈ ವೇಳೆ ಆರ್ಯನ್ ಸೇರಿ ಮೂವರನ್ನು ಸೋಮವಾರದವರೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಬಳಿ ಎನ್ಸಿಬಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಕೋರ್ಟ್ ಸಮ್ಮತಿಸಿದೆ.
ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಆರ್ಯನ್ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಆರ್ಯನ್ ಅವರನ್ನು ವಶಕ್ಕೆ ಪಡೆದಿದೆ. ಅಲ್ಲಿಂದ ಅವರನ್ನು ಎನ್ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್ಸಿಬಿ ಕಚೇರಿ ಒಳಗೆ ಆರ್ಯನ್ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ನಂತರ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇದಾದ ನಂತರ ಆರ್ಯನ್ ಅವರನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದೆ.
‘ಆರ್ಯನ್ಗೆ ಪಾರ್ಟಿ ಅರೇಂಜ್ ಮಾಡಿದವರು ಆಹ್ವಾನ ನೀಡಿದ್ದರು. ಅದಕ್ಕಾಗಿ ತೆರಳಿದ್ದರು. ಇದಕ್ಕೂ ಆರ್ಯನ್ಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ, ಅವರನ್ನು ಇದರಲ್ಲಿ ಸಿಲುಕಿಸಬಾರದು. ಅವರನ್ನು ಈಗಲೇ ಬಿಡಬೇಕು’ ಎಂದು ಆರ್ಯನ್ ಪರ ವಕೀಲರು ಕೋರಿದರು. ಇದಕ್ಕೆ ಎನ್ಸಿಬಿ ಅಧಿಕಾರಿಗಳು ಒಪ್ಪಲಿಲ್ಲ. ಅವರನ್ನು ಎರಡು ದಿನ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಬಳಿ ಮನವಿ ಮಾಡಿಕೊಂಡರು. ಆದರೆ, ನ್ಯಾಯಾಧೀಶರು, ಒಂದು ದಿನ ಮಾತ್ರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್ನಲ್ಲಿ ಹರಡಿರುವ ಡ್ರಗ್ಸ್ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.
ಇದನ್ನೂ ಓದಿ: ಆರ್ಯನ್ ಖಾನ್ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್ನಿಂದ ಮಹತ್ವದ ಆದೇಶ
Published On - 8:12 pm, Sun, 3 October 21