AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಕುನುಗ್ಗಲಿನಲ್ಲಿ ಸಿಲುಕಿ ಒದ್ದಾಡಿದ ಆರ್ಯನ್ ಖಾನ್; ವಿಡಿಯೋ ವೈರಲ್

ನಟ ರಾಘವ್ ಜುಯಲ್ ಜನ್ಮದಿನದ ಪಾರ್ಟಿಯಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪಾಲ್ಗೊಂಡಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಅಭಿಮಾನಿಗಳ ಅತಿಯಾದ ನೂಕುನುಗ್ಗಲಿನಿಂದಾಗಿ ಆರ್ಯನ್ ತೀವ್ರವಾಗಿ ಒದ್ದಾಡಿದ್ದಾರೆ. ನೂಕುನುಗ್ಗಲಿನಲ್ಲಿ ಒಬ್ಬ ವ್ಯಕ್ತಿ ಅವರ ಕಾಲಿಗೆ ಬಿದ್ದ ಘಟನೆ ಹಾಗೂ ತುಂಬಿಹೋಗಿದ್ದ ಲಿಫ್ಟ್‌ನಲ್ಲಿ ಜಾಗವಿಲ್ಲದೆ ಆರ್ಯನ್ ಕೆಳಗೆ ಕುಳಿತ ದೃಶ್ಯಗಳು ಸದ್ಯ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿವೆ.

ನೂಕುನುಗ್ಗಲಿನಲ್ಲಿ ಸಿಲುಕಿ ಒದ್ದಾಡಿದ ಆರ್ಯನ್ ಖಾನ್; ವಿಡಿಯೋ ವೈರಲ್
ಆರ್ಯನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 10, 2026 | 1:09 PM

Share

ಮುಖ್ಯಾಂಶಗಳು

  • ರಾಘವ್ ಜುಯಲ್ ಬರ್ತ್‌ಡೇ ಪಾರ್ಟಿಯಲ್ಲಿ ಭಾರಿ ಗದ್ದಲ
  • ಆರ್ಯನ್ ಖಾನ್ ಕಾಲಿಗೆ ಬಿದ್ದ ಅಪರಿಚಿತ ವ್ಯಕ್ತಿ
  • ತುಂಬಿ ತುಳುಕುತ್ತಿದ್ದ ಲಿಫ್ಟ್‌ನಲ್ಲಿ ನೂಕಾಟ

ನಟ ಹಾಗೂ ಡ್ಯಾನ್ಸರ್ ರಾಘವ್ ಜುಯಲ್ ಅವರ ಜನ್ಮದಿನದ ಪಾರ್ಟಿ ಗುರುವಾರ ರಾತ್ರಿ ನಡೆಯಿತು. ಈ ಸಂಭ್ರಮದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಅದರಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಎಂಟ್ರಿ ಮತ್ತು ಎಕ್ಸಿಟ್ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಅವರು ನೂಕು ನುಗ್ಗಲಿನಲ್ಲಿ ಸಿಲುಕಿ ಒದ್​ದಾಡಿದ್ದಾರೆ.

ಆರ್ಯನ್ ಕಾಲಿಗೆ ಬಿದ್ದ ವ್ಯಕ್ತಿ

ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಆರ್ಯನ್ ಖಾನ್ ಜನದಟ್ಟಣೆಯ ನಡುವೆ ಸಾಗುತ್ತಿರುವುದು ಕಾಣಿಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಅವರಿಗೆ ದಾರಿ ಮಾಡಿಕೊಡಲು ಹರಸಾಹಸ ಪಡುತ್ತಿದ್ದರು. ಆ ನೂಕುನುಗ್ಗಲಿನಲ್ಲಿ ಒಬ್ಬ ವ್ಯಕ್ತಿ ನಿಯಂತ್ರಣ ತಪ್ಪಿ ಆರ್ಯನ್ ಕಾಲಿಗೆ ಬಿದ್ದಿದ್ದಾನೆ. ತಕ್ಷಣವೇ ಸೆಕ್ಯೂರಿಟಿ ತಂಡ ಆ ವ್ಯಕ್ತಿಯನ್ನು ಮೇಲೆತ್ತಿ ಆರ್ಯನ್ ಅವರನ್ನು ಕಾರಿನವರೆಗೆ ಸುರಕ್ಷಿತವಾಗಿ ಕರೆದೊಯ್ದಿದೆ. ಈ ಗದ್ದಲದಿಂದ ಆರ್ಯನ್ ಖಾನ್ ಸ್ವಲ್ಪ ಅಸಮಾಧಾನಗೊಂಡಂತೆ ಕಂಡಿದ್ದಾರೆ.

ಲಿಫ್ಟ್‌ನಲ್ಲಿ ಕುಳಿತ ಆರ್ಯನ್

ಮತ್ತೊಂದು ವಿಡಿಯೋದಲ್ಲಿ ಆರ್ಯನ್ ಖಾನ್ ಜನರಿಂದ ತುಂಬಿಹೋಗಿದ್ದ ಲಿಫ್ಟ್‌ನಲ್ಲಿದ್ದರು. ಅಲ್ಲಿ ಜಾಗವಿಲ್ಲದೆ ಜನರು ಒಬ್ಬರನ್ನೊಬ್ಬರು ತಳ್ಳಾಡುತ್ತಿದ್ದರು. ಈ ವೇಳೆ ಜನದಟ್ಟಣೆಯಿಂದ ತಪ್ಪಿಸಿಕೊಳ್ಳಲು ಆರ್ಯನ್ ಕೆಳಗೆ ಕುಳಿತುಕೊಂಡಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಗೊಂದಲದ ವಾತಾವರಣ ನಿರ್ಮಾಣವಾಗಿದ್ದಕ್ಕೆ ಬೇಸರ ಹೊರಹಾಕಿದ್ದಾರೆ.

ರಾಘವ್ ಮತ್ತು ಆರ್ಯನ್ ಸಂಬಂಧ

ಆರ್ಯನ್ ಖಾನ್ ಕಪ್ಪು ಬಣ್ಣದ ಜಾಕೆಟ್ ಮತ್ತು ಜೀನ್ಸ್ ಧರಿಸಿ ಸರಳವಾಗಿ ಪಾರ್ಟಿಗೆ ಬಂದಿದ್ದರು. ಅವರು ಲೋ ಪ್ರೊಫೈಲ್ ಕಾಯ್ದುಕೊಳ್ಳಲು ಯತ್ನಿಸಿದರೂ ಫೋಟೋಗ್ರಾಫರ್‌ಗಳು ಮತ್ತು ಅಭಿಮಾನಿಗಳು ಅವರನ್ನು ಮುತ್ತಿಕೊಂಡರು. ಆರ್ಯನ್ ಖಾನ್ ನಿರ್ದೇಶನದ ‘ಬ್ಯಾಡ್ಸ್ ಆಫ್ ಬಾಲಿವುಡ್’ ಸರಣಿಯಲ್ಲಿ ರಾಘವ್ ನಟಿಸಿದ್ದಾರೆ. ಈ ವೆಬ್ ಸರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿ ಒಂದು ವರ್ಷವಾಗುತ್ತ ಬಂದಿದೆ. ಆ ವೃತ್ತಿಪರ ಒಡನಾಟದ ಹಿನ್ನೆಲೆಯಲ್ಲಿ ಆರ್ಯನ್ ಈ ಪಾರ್ಟಿಗೆ ಬಂದಿದ್ದರು.

ಒಟ್ಟಿಗೆ ಕಾಣಿಸಿಕೊಂಡ ಶೆಹನಾಜ್ – ರಾಘವ್

ಇದೇ ಪಾರ್ಟಿಯಲ್ಲಿ ನಟಿ ಶೆಹನಾಜ್ ಗಿಲ್ ಮತ್ತು ರಾಘವ್ ಜುಯಲ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಪಾರ್ಟಿ ಮುಗಿದ ನಂತರ ರಾಘವ್ ಅವರು ಶೆಹನಾಜ್ ಒಂದೇ ಕಾರಿನಲ್ಲಿ ತೆರಳಿದ್ದಾರೆ. 2023ರ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾದ ನಂತರ ಇವರಿಬ್ಬರ ಡೇಟಿಂಗ್ ವದಂತಿಗಳು ಕೇಳಿಬರುತ್ತಿವೆ. ಆದರೆ ಇಬ್ಬರೂ ತಾವು ಕೇವಲ ಉತ್ತಮ ಸ್ನೇಹಿತರು ಎಂದು ಹೇಳುತ್ತಾ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ