AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಮರುಕ

ಹಿಂದೂಗಳನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಈ ಘಟನೆ ಬಗ್ಗೆ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ವಿಡಿಯೋ ಮೂಲಕ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಮರುಕ
Salim Merchant
ಮದನ್​ ಕುಮಾರ್​
|

Updated on:Apr 24, 2025 | 8:23 PM

Share

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ನಡೆದಿದ ದಾಳಿ ಬಗ್ಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ರಶ್ಮಿಕಾ ಮಂದಣ್ಣ, ಕಿಯಾರಾ ಅಡ್ವಾಣಿ ಸೇರಿದಂತೆ ಹಲವು ಕಲಾವಿದರು ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ. ಈಗ ಖ್ಯಾತ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಅವರು ಕೂಡ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ.

‘ಹಿಂದೂಗಳು ಎಂಬ ಕಾರಣಕ್ಕೆ ಪಹಲ್ಗಾಮ್​ನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಹಂತಕರು ಮುಸ್ಲಿಮರೇ? ಅಲ್ಲ, ಅವರು ಭಯೋತ್ಪಾದಕರು. ಯಾಕೆಂದರೆ ಇಸ್ಲಾಂ ಇದನ್ನು ಹೇಳಿಕೊಡುವುದಿಲ್ಲ. ಧರ್ಮದ ವಿಚಾರದಲ್ಲಿ ಯಾವುದೇ ಬಲವಂತ ಮಾಡುವಂತಿಲ್ಲ ಎಂದು ಖುರಾನ್​ನಲ್ಲಿ ಬರೆದಿದೆ’ ಎಂದು ಸಲೀಂ ಮರ್ಚೆಂಟ್ ಅವರು ವಿಡಿಯೋ ಆರಂಭಿಸಿದ್ದಾರೆ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
Image
ಪಾಕ್ ಸೇನೆಗೆ ನಡುಕ ಶುರು: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ರಹಸ್ಯ
Image
ಮೆಹಂದಿ ಮಾಸುವ ಮುನ್ನವೇ ನವವಿವಾಹಿತೆಯ ಕುಂಕುಮ ಅಳಿಸಿದ ಉಗ್ರರು
Image
ಪಹಲ್ಗಾಮ್ ದಾಳಿ: ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ

‘ಇಂಥ ಒಂದು ದಿನವನ್ನು ನೋಡುವಂತಾಯಿತಲ್ಲ ಎಂದು ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ. ನನ್ನ ಅಮಾಯಕ ಹಿಂದೂ ಸಹೋದರ, ಸಹೋದರಿಯರನ್ನು ಹತ್ಯೆ ಮಾಡಲಾಗಿದೆ. ಈ ದ್ವೇಷ ಯಾವಾಗ ಮುಗಿಯುತ್ತದೆ? ಕಳೆದ 2-3 ವರ್ಷಗಳಿಂದ ಕಾಶ್ಮೀರದ ಜನರು ಸರಿಯಾಗಿ ಜೀವನ ಮಾಡುತ್ತಿದ್ದರು. ಅವರ ಜೀವನದಲ್ಲಿ ಮತ್ತೆ ಅದೇ ಸಮಸ್ಯೆ ಶುರುವಾಗಿದೆ’ ಎಂದು ಸಲೀಂ ಮರ್ಚೆಂಟ್ ಅವರು ಹೇಳಿದ್ದಾರೆ.

‘ನನ್ನ ನೋವು ಮತ್ತು ಕೋಪವನ್ನು ಹೇಗೆ ವ್ಯಕ್ತಪಡಿಸಲಿ ಎಂಬುದೇ ತಿಳಿಯುತ್ತಿಲ್ಲ. ಅಮಾಯಕ ಜನರು ಪ್ರಾಣ ತೆತ್ತಿದ್ದಾರೆ. ತಲೆ ಬಾಗಿ ನಾನು ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬದವರಿಗೆ ದೇವರು ಶಕ್ತಿ ನೀಡಲಿ. ಓಂ ಶಾಂತಿ’ ಎನ್ನುವ ಮೂಲ ಸಲೀಂ ಮರ್ಚೆಂಟ್ ಅವರು ವಿಡಿಯೋ ಪೂರ್ಣಗೊಳಿಸಿದ್ದಾರೆ. ಅವರ ಮಾತುಗಳಿಗೆ ಅನೇಕರು ಸಹಮತ ಸೂಚಿಸಿದ್ದಾರೆ.

ಇದನ್ನೂ ಓದಿ: ‘ಕಾಶ್ಮೀರ ನರಕ ಆಗುತ್ತಿದೆ’: ಪಹಲ್ಗಾಮ್‌ ಉಗ್ರರ ದಾಳಿಗೆ ನಟ ಸಲ್ಮಾನ್ ಖಾನ್ ಖಂಡನೆ

ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್​ನಲ್ಲಿ ಗುಂಡಿನ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕೃತ್ಯದ ಹಿಂದೆ ಪಾಕ್ ಕೈವಾಡ ಇದೆ. ಹಾಗಾಗಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕಲಿಸಲು ಭಾರತ ಸರ್ಕಾರ ಮುಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:10 pm, Thu, 24 April 25

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?