AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ

Ashish Vidyarthi: ಬಹುಭಾಷಾ ನಟ ಆಶಿಷ್ ವಿದ್ಯಾರ್ಥಿ ತಮ್ಮ 60ನೇ ವಯಸ್ಸಿನಲ್ಲಿ ರೂಪಾಲಿ ಬರುವ ಎಂಬುವರೊಟ್ಟಿಗೆ ಮದುವೆಯಾಗಿದ್ದಾರೆ. ಇದು ಅವರಿಗೆ ಎರಡನೇ ಮದುವೆ.

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ
ಆಶಿಷ್ ವಿದ್ಯಾರ್ಥಿ-ರೂಪಾಲಿ ಬರುವ
ಮಂಜುನಾಥ ಸಿ.
|

Updated on: May 25, 2023 | 5:16 PM

Share

ಬಹುಭಾಷಾ ನಟ, ಹಾಗೂ ಜನಪ್ರಿಯ ಫೂಡ್ ವ್ಲಾಗರ್ ಆಶಿಷ್ ವಿದ್ಯಾರ್ಥಿ (Ashish Vidyarthi) ತಮ್ಮ 60ನೇ ವಯಸ್ಸಿನಲ್ಲಿ ಎರಡನೇ ಬಾರಿ ಮದುವೆಯಾಗಿದ್ದಾರೆ. ಇಂದು (ಮೇ 25) ಅಸ್ಸಾಮಿ ಮೂಲದ ರೂಪಾಲಿ ಬರುವ (Roopali Baruva) ಎಂಬುವರನ್ನು ಸರಳವಾಗಿ ಆಶಿಷ್ ವಿದ್ಯಾರ್ಥಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಜೀವನದ ಈ ಹಂತದಲ್ಲಿ ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಬಹಳ ಖುಷಿಯಾಗಿದೆ ಎಂದು ಆಶಿಷ್ ವಿದ್ಯಾರ್ಥಿ ಹೇಳಿಕೊಂಡಿದ್ದಾರೆ.

ಗುವಾಹಟಿಯವರಾಗಿರುವ ರೂಪಾಲಿ ಬರುವ ಫ್ಯಾಷನ್ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊಲ್ಕತ್ತದ ಅಪ್​ಸ್ಕೇಲ್ ಫ್ಯಾಷನ್ಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ರೂಪಾಲಿ ಹಾಗೂ ಆಶಿಷ್​ರ ವಿವಾಹ ಸಹ ಕೊಲ್ಕತ್ತದಲ್ಲಿ ನಡೆದಿದೆ. ಆಶಿಷ್ ವಿದ್ಯಾರ್ಥಿಗೆ ಇದು ಎರಡನೇ ಮದುವೆ ಈ ಹಿಂದೆ ನಟಿ ಶಕುಂತಲಾ ಅವರ ಪುತ್ರಿ ರಜೋಶಿ ಜೊತೆಗೆ ಆಶಿಷ್ ವಿದ್ಯಾರ್ಥಿ ವಿವಾಹವಾಗಿದ್ದರು. ಹಲವು ವರ್ಷಗಳ ದಾಂಪತ್ಯದ ಬಳಿಕ ಇಬ್ಬರೂ ದೂರಾದರು. ಈಗ ಆಶಿಷ್ ವಿದ್ಯಾರ್ಥಿ ರೂಪಾಲಿಯನ್ನು ವಿವಾಹವಾಗಿದ್ದಾರೆ.

ಆಶಿಷ್ ವಿದ್ಯಾರ್ಥಿ ಭಾರತದ ಜನಪ್ರಿಯ ಪೋಷಕ ನಟ ಹಾಗೂ ವಿಲನ್​ಗಳಲ್ಲಿ ಒಬ್ಬರು. ಕನ್ನಡ ಸೇರಿದಂತೆ 11 ಭಾಷೆಗಳ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದಿರುವ ಆಶಿಷ್ ವಿದ್ಯಾರ್ಥಿ ಕೋವಿಡ್ ಬಳಿಕ ವ್ಲಾಗಿಂಗ್ ಸಹ ಆರಂಭ ಮಾಡಿದ್ದಾರೆ. ಹಲವು ನಗರಗಳಿಗೆ ತೆರಳಿ ಅಲ್ಲಿನ ಜನಪ್ರಿಯ ಖಾದ್ಯಗಳನ್ನು ಸವಿಯುತ್ತಾ ಫೂಡ್ ವ್ಲಾಗಿಂಗ್ ಸಹ ಮಾಡುತ್ತಿದ್ದಾರೆ. ಆಶಿಷ್ ವಿದ್ಯಾರ್ಥಿಯವರ ಫೂಡ್ ವ್ಲಾಗಿಂಗ್ ಬಹಳ ಜನಪ್ರಿಯ.

ಮದುವೆ ಬಗ್ಗೆ ಮಾಧ್ಯಮವೊಂದರೊಟ್ಟಿಗೆ ಚುಟುಕಾಗಿ ಮಾತನಾಡಿರುವ ಆಶಿಷ್ ವಿದ್ಯಾರ್ಥಿ, ”ಜೀವನದ ಈ ಹಂತದಲ್ಲಿ ನಾನು ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಅದ್ಭುತವಾದ ಅನುಭವ. ನಾವು ಸರಳವಾಗಿ ರಿಜಿಸ್ಟರ್ ಮದುವೆ ಆಗಿದ್ದೇವೆ. ಇಂದು ಸಂಜೆ ಆಪ್ತೇಷ್ಟರಿಗಆಗಿ ರಿಸೆಪ್ಷನ್ ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ನೀವು ಹೇಗೆ ರೂಪಾಲಿಯನ್ನು ಭೇಟಿ ಆದಿರಿ ಎಂಬ ಪ್ರಶ್ನೆಗೆ, ಅದೊಂದು ದೊಡ್ಡ ಕತೆ ಯಾವಾಗಲಾದರು ಬಿಡುವು ಮಾಡಿಕೊಂಡು ಹೇಳುತ್ತೇನೆ ಎಂದಿದ್ದಾರೆ.

ಇನ್ನು ಆಶಿಷ್​ರ ಹೊಸ ಪತ್ನಿ ರೂಪಾಲಿ ಮಾತನಾಡಿ, ”ನಾವು ಕೆಲವು ತಿಂಗಳುಗಳ ಮುಂಚೆ ಪರಸ್ಪರ ಭೇಟಿಯಾದೆವು. ಇಬ್ಬರಿಗೂ ಪರಸ್ಪರರ ವ್ಯಕ್ತಿತ್ವ ಇಷ್ಟವಾಯಿತು ಹಾಗಾಗಿ ನಮ್ಮ ಗೆಳೆತನವನ್ನು ಇನ್ನೊಂದು ಹಂತ ಮೇಲಕ್ಕೆ ಕೊಂಡೊಯ್ಯಲು ನಿಶ್ಚಿಯಿಸಿದೆವು. ಆದರೆ ನಮ್ಮ ಮದುವೆ ಸರಳವಾಗಿರಬೇಕೆಂದು ನಾವು ಮೊದಲೇ ನಿಶ್ಚಯ ಮಾಡಿದ್ದೆವು” ಎಂದಿದ್ದಾರೆ.

ಆಶಿಷ್ ವಿದ್ಯಾರ್ಥಿ ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಮುಖವಾದವುಗಳೆಂದರೆ, ಎಕೆ 47, ಕೋಟಿಗೊಬ್ಬ, ನಂದಿ, ದುರ್ಗಿ, ಆಕಾಶ್, ನಮ್ಮಣ್ಣ, ಆ ದಿನಗಳು, ಶಕ್ತಿ, ಬಚ್ಚನ್ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!