Mayank Dixit: ಸಲ್ಮಾನ್​ ಖಾನ್​ ಸಿನಿಮಾದ ಸಹಾಯಕ ನಿರ್ದೇಶಕನಿಗೆ ಥಳಿತ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ

ದೆಹಲಿಯ ಲಕ್ಷ್ಮೀ ನಗರ್​ ಏರಿಯಾದಲ್ಲಿ ಈ ಘಟನೆ ನಡೆದಿದೆ. ಮಯಾಂಕ್​ ದೀಕ್ಷಿತ್​ ಮೇಲೆ 6 ಜನರು ಹಲ್ಲೆ ಮಾಡಿ ಪರಾರಿ ಆಗಿದ್ದಾರೆ. ಆಸ್ಪತ್ರೆಯಲ್ಲಿ ಮಯಾಂಕ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

Mayank Dixit: ಸಲ್ಮಾನ್​ ಖಾನ್​ ಸಿನಿಮಾದ ಸಹಾಯಕ ನಿರ್ದೇಶಕನಿಗೆ ಥಳಿತ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ
ಮಯಾಂಕ್​ ದೀಕ್ಷಿತ್​
Follow us
ಮದನ್​ ಕುಮಾರ್​
|

Updated on: Jul 06, 2023 | 4:17 PM

ಬಾಲಿವುಡ್​ನಲ್ಲಿ ಕಾಸ್ಟಿಂಗ್​ ಡೈರೆಕ್ಟರ್​ ಆಗಿ ಮತ್ತು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮಯಾಂಕ್​ ದೀಕ್ಷಿತ್​ (Mayank Dixit) ಅವರ ಮೇಲೆ ಹಲ್ಲೆ ಮಾಡಲಾಗಿದೆ. ಭಾನುವಾರ (ಜುಲೈ 2) ರಾತ್ರಿ ಈ ಘಟನೆ ನಡೆದಿದೆ ಎಂಬುದು ತಿಳಿದುಬಂದಿದೆ. 6 ಜನರ ಗುಂಪು ಮಯಾಂಕ್​ ದೀಕ್ಷಿತ್​ ಮೇಲೆ ಹಲ್ಲೆ (Assault) ಮಾಡಿದೆ. ಆರೋಪಿಗಳು ಈಗ ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಲ್ಮಾನ್​ ಖಾನ್​ (Salman Khan) ನಟನೆಯ ‘ಯುವರಾಜ್​’ ಸಿನಿಮಾಗೆ ಮಯಾಂಕ್​ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರ ಮೇಲೆ 6 ಮಂದಿಗೆ ಯಾವ ದ್ವೇಷ ಇತ್ತು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ದೆಹಲಿಯ ಲಕ್ಷ್ಮೀ ನಗರ್​ ಏರಿಯಾದಲ್ಲಿ ಈ ಘಟನೆ ನಡೆದಿದೆ. ಕಾರು ನಿಲ್ಲಿಸುವ ವಿಚಾರಕ್ಕೆ ಮಯಾಂಕ್​ ದೀಕ್ಷಿತ್​ ಮತ್ತು 6 ಜನರ ನಡುವೆ ಜಗಳು ಶುರುವಾಯಿತು. ಅದು ವಿಕೋಪಕ್ಕೆ ತಿರುಗಿದಾಗ ಮಯಾಂಕ್​ ಮೇಲೆ ಹಲ್ಲೆ ನಡೆಯಿತು. ಈ ಜಗಳದಲ್ಲಿ ಮಯಾಂಕ್​ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇದನ್ನೂ ಓದಿ: ರಸ್ತೆ ಬದಿ ಸೊಪ್ಪು ಮಾರುತ್ತಿದ್ದ ವೃದ್ಧೆ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ

ಮಯಾಂಕ್​ ದೀಕ್ಷಿತ್​ ಮೇಲೆ ಹಲ್ಲೆ ಮಾಡಿದ ಆ 6 ಮಂದಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ಸ್ಥಳದ ಅಕ್ಕಪಕ್ಕದ ಏರಿಯಾಗಳ ಸಿಸಿಟಿವಿ ದೃಶ್ಯಗಳನ್ನು ದೆಹಲಿ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಲ್ಲೆ ಕುರಿತಂತೆ ಎಫ್​ಐಆರ್​ ದಾಖಲು ಮಾಡಿಕೊಳ್ಳಲಾಗಿದೆ. ಘಟನೆಯ ಬಗ್ಗೆ ಮಯಾಂಕ್​ ದೀಕ್ಷಿತ್​ ಅವರು ಇನ್ನೂ ತಮ್ಮ ಹೇಳಿಕೆ ನೀಡುವುದು ಬಾಕಿ ಇದೆ. ಅವರ ತಲೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಆಸ್ಪತ್ರೆಯ ಬೆಡ್​ನಲ್ಲಿ ಮಯಾಂಕ್​ ದೀಕ್ಷಿತ್​ ಅವರು ಮಲಗಿರುವ ಫೋಟೋಗಳು ವೈರಲ್​ ಆಗಿವೆ. ಅವರ ಕಣ್ಣಿನ ಭಾಗ ನೀಲಿ ಆಗಿದೆ. ಕುತ್ತಿಗೆಗೆ ಬ್ಯಾಂಡೇಜ್​ ಹಾಕಲಾಗಿದೆ. ಮಯಾಂಕ್ ಕೆಲಸ ಮಾಡುವುದು ಮುಂಬೈನಲ್ಲಿ ಆದರೂ ಮೂಲತಃ ಅವರು ದೆಹಲಿಯವರು. ದೆಹಲಿಯಲ್ಲಿ ಜರ್ನಲಿಸಂ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಮುಂಬೈಗೆ ಬಂದು ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದರು. ಕಾಸ್ಟಿಂಗ್​ ಡೈರೆಕ್ಟರ್​ ಆಗಿಯೂ ಅವರು ಫೇಮಸ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ