ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ

ಚಾಕು ಇರಿತದಿಂದ ಸೈಫ್ ಅಲಿ ಖಾನ್ ಅವರಿಗೆ ಗಂಭೀರ ಗಾಯಗಳು ಆಗಿವೆ. ಈ ಘಟನೆ ಬಳಿಕ ಆತಂಕ ಹೆಚ್ಚಾಗಿದೆ. ಶಂಕಿತ ವ್ಯಕ್ತಿಯು ಅಪಾರ್ಟ್​ಮೆಂಟ್​ ಮೆಟ್ಟಿಲುಗಳನ್ನು ಹತ್ತುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆತನ ಗುರುತು ಪತ್ತೆ ಆಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ
Suspect, Saif Ali Khan

Updated on: Jan 16, 2025 | 6:15 PM

ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ. ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದರು. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು. ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ತಿವಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಹೃದ್ರೋಗ ತಜ್ಞರ ಸಮ್ಮುಖದಲ್ಲಿ ಸೈಫ್ ಅಲಿ ಖಾನ್​ಗೆ ಸರ್ಜರಿ; ಆರೋಗ್ಯ ಸ್ಥಿರ, ಅಪಾಯದಿಂದ ಪಾರು: ಲೀಲಾವತಿ ಆಸ್ಪತ್ರೆ ವೈದ್ಯರು

ಈ ಘಟನೆ ಬಗ್ಗೆ ಅನೇಕ ಅನುಮಾನಗಳು ಮೂಡಿವೆ. ಸೈಫ್ ಕುಟುಂಬದವರು ವಾಸವಾಗಿರುವ ಅಪಾರ್ಟ್​ಮೆಂಟ್​ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲವೇ? ದರೋಡೆಗೆ ಯತ್ನಿಸಿದ ವ್ಯಕ್ತಿಗಳ ಹಿನ್ನೆಲೆ ಏನು ಎಂಬ ಪ್ರಶ್ನೆ ಎದ್ದಿದೆ. ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಬೆನ್ನಿನಲ್ಲಿ ಇದ್ದ ಚಾಕು ಹೊರತೆಗೆಯಲಾಗಿದೆ. ಎಡಗೈ ಮತ್ತು ಕುತ್ತಿಗೆ ಭಾಗಕ್ಕೆ ಪ್ಲಾಸ್ಟಿಕ್ ಸರ್ಜರಿ ತಂಡವರು ಚಿಕಿತ್ಸೆ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us