Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ

Pathaan Movie | Bajrang Dal: ‘ಪಠಾಣ್’ ಚಿತ್ರ ಜನವರಿ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ರಿಲೀಸ್ ಮಾಡಬಾರದು ಎಂದು ಗುಜರಾತ್​ನ ಭಜರಂಗ ದಳದ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ
ಭಜರಂಗ ದಳದ ಕಾರ್ಯಕರ್ತರ ದಾಂಧಲೆ, ಶಾರುಖ್​ ಖಾನ್​
Follow us
TV9 Web
| Updated By: ಮದನ್​ ಕುಮಾರ್​

Updated on: Jan 05, 2023 | 2:59 PM

ಶಾರುಖ್​ ಖಾನ್​ (Shah Rukh Khan) ಅಭಿನಯದ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದ್ದಂತೆಯೇ ವಿರೋಧದ ಕಾವು ಕೂಡ ಹೆಚ್ಚಾಗುತ್ತಿದೆ. ಹಿಂದೂ ಪರ ಸಂಘಟನೆಗಳು ಈ ಸಿನಿಮಾದ ವಿರುದ್ಧ ತಿರುಗಿಬಿದ್ದಿವೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಕಾಂಟ್ರವರ್ಸಿ ಜೋರಾಗಿದೆ. ಈಗ ಭಜರಂಗ ದಳ (Bajrang Dal) ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ನಡೆದಿದೆ. ಚಿತ್ರಮಂದಿರವೊಂದರಲ್ಲಿ ‘ಪಠಾಣ್​’ (Pathaan Movie) ಚಿತ್ರದ ಪೋಸ್ಟರ್​ ಮತ್ತು ಸ್ಟ್ಯಾಂಡಿಗಳನ್ನು ಹಾಕಲಾಗಿತ್ತು. ಅದನ್ನು ಕಿತ್ತು ಹಾಕುವ ಮೂಲಕ ಭಜರಂಗ ದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ಪಠಾಣ್’ ಸಿನಿಮಾ ಜನವರಿ 25ರಂದು ಬಿಡುಗಡೆ ಆಗಲಿದೆ. ಆದರೆ ಈ ಚಿತ್ರವನ್ನು ರಿಲೀಸ್ ಮಾಡಬಾರದು ಎಂದು ಭಜರಂಗ ದಳದ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ‘ಸನಾತನ ಧರ್ಮ ವಿರೋಧಿ ಶಾರುಖ್​ ಖಾನ್ ಹಾಗೂ ಟುಕ್ಡೆ ಟುಕ್ಡೆ ಗ್ಯಾಂಗ್​ನ ದೀಪಿಕಾ ಪಡುಕೋಣೆ ನಟಿಸಿದ ಸಿನಿಮಾವನ್ನು ಪ್ರದರ್ಶನ ಮಾಡಲು ಬಿಡುವುದಿಲ್ಲ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ

‘ಮಲ್ಟಿಪ್ಲೆಕ್ಸ್​ನವರಿಗೆ ವಾರ್ನಿಂಗ್​ ನೀಡಿದ್ದೇವೆ. ಒಂದು ವೇಳೆ ಸಿನಿಮಾ ರಿಲೀಸ್​ ಮಾಡಿದರೆ ಭಜರಂಗ ದಳವು ತನ್ನ ವರಸೆ ತೋರಿಸಬೇಕಾಗುತ್ತದೆ’ ಎಂದು ಬೆದರಿಕೆಯೊಂದಿಗೆ ಈ ವಿಡಿಯೋವನ್ನ ಭಜರಂಗ ದಳದ ಕಾರ್ಯಕರ್ತರು ಹಂಚಿಕೊಂಡಿದ್ದಾರೆ. ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

ಮಲ್ಟಿಪ್ಲೆಕ್ಸ್​ನಲ್ಲಿ ಹಾಕಲಾಗಿದ್ದ ‘ಪಠಾಣ್​’ ಚಿತ್ರದ ಪೋಸ್ಟರ್​ಗಳನ್ನು ಕಿತ್ತು ಎಸೆಯಲಾಗಿದೆ. ‘ಜೈ ಶ್ರೀರಾಮ್​’ ಎಂದು ಘೋಷಣೆ ಕೂಗುತ್ತ ಗಲಾಟೆ ಮಾಡಲಾಗಿದೆ. ದಾಂಧಲೆ ತಡೆಯಲು ಅಲ್ಲಿನ ಸಿಬ್ಬಂದಿ ಪ್ರಯತ್ನ ನಡೆಸಿದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ವಿರೋಧ ಇದೇ ರೀತಿ ಮುಂದುವರಿದರೆ ಚಿತ್ರದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ, ಈ ರೀತಿ ದಾಂಧಲೆ ನಡೆಸಿದ್ದರ ಬಗ್ಗೆ ಟೀಕೆ ಕೂಡ ವ್ಯಕ್ತವಾಗುತ್ತಿದೆ.

ಬದಲಾಗಿಲ್ಲ ‘ಪಠಾಣ್​’ ಟೈಟಲ್​:

‘ಪಠಾಣ್​’ ಸಿನಿಮಾದ ಟೈಟಲ್​ ಬದಲಾಗಬೇಕು ಎಂದು ಒಂದು ವರ್ಗದ ಜನರು ಒತ್ತಡ ಹೇರಿದ್ದರು. ಆದರೆ ಶೀರ್ಷಿಕೆ ಬದಲಾಯಿಸಲು ಚಿತ್ರತಂಡ ಸಿದ್ಧವಿಲ್ಲ. ಚಿತ್ರದ ಟೈಟಲ್​ ‘ಪಠಾಣ್​’ ಎಂದೇ ಇರಲಿದೆ ಎಂಬುದು ಖಚಿತವಾಗಿದೆ. ಆದಷ್ಟು ಬೇಗ ಟ್ರೇಲರ್​ ಬಿಡುಗಡೆ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಶಾರುಖ್​ ಖಾನ್​ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ಜಾನ್​ ಅಬ್ರಾಹಂ ಕೂಡ ‘ಪಠಾಣ್​’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಖ್ಯಾತ ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಿಂದಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗಿನಲ್ಲೂ ‘ಪಠಾಣ್​’ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ