AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ

ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟ ಬಾಬಿ ಡಿಯೋಲ್ ಅವರ 'ಬಂದರ್' ಚಿತ್ರವು ಮೊದಲ ದಿನ 50 ಲಕ್ಷ ರೂ. ಕಲೆಕ್ಷನ್‌ನೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಅನುರಾಗ್ ಕಶ್ಯಪ್ ಅವರ ಹಿಂದಿ ಚಿತ್ರರಂಗದ ವಿರುದ್ಧದ ಹೇಳಿಕೆಗಳು ಮತ್ತು ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು ಚಿತ್ರದ ವೈಫಲ್ಯಕ್ಕೆ ಕಾರಣ ಎಂದು ವಿಶ್ಲೇಷಿಸಲಾಗಿದೆ. ಕಡಿಮೆ ಆಕ್ಯುಪೆನ್ಸಿ, ದೊಡ್ಡ ಸಿನಿಮಾಗಳ ಸ್ಪರ್ಧೆ 'ಬಂದರ್' ಚಿತ್ರಕ್ಕೆ ಮತ್ತಷ್ಟು ಹಿನ್ನಡೆ ತಂದಿದೆ.

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ 'ಬಂದರ್'; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ
ಬಂದರ್
ರಾಜೇಶ್ ದುಗ್ಗುಮನೆ
|

Updated on: Jun 06, 2026 | 1:00 PM

Share

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು ಗ್ರಾಸ್ ಗಳಿಕೆ 60 ಲಕ್ಷಕ್ಕೆ ಬಂದು ನಿಂತಿದೆ.

ಸಿನಿಮಾ ವಿಶ್ಲೇಷಕರ ಪ್ರಕಾರ, ಚಿತ್ರದ ಈ ಭಾರಿ ಸೋಲಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಇತ್ತೀಚಿನ ನಡೆಗಳೂ ಕಾರಣ ಇರಬಹುದು ಎನ್ನಲಾಗುತ್ತಿದೆ. ಅನುರಾಗ್ ಕಶ್ಯಪ್ ಅವರು ಈ ಹಿಂದೆ ಬಾಲಿವುಡ್‌ನ ಕಾರ್ಯವೈಖರಿಯನ್ನು ಬಹಿರಂಗವಾಗಿಯೇ ಬೈದು, ತೀವ್ರ ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ, ಅವರು ಮುಂಬೈ ನಗರವನ್ನು ತೊರೆದು ಬೆಂಗಳೂರಿನಲ್ಲಿ ಬಂದು ಸೆಟಲ್ ಆಗಿದ್ದಾರೆ.

ಬಾಲಿವುಡ್ ಮಾರುಕಟ್ಟೆಯಿಂದ ದೂರ ಸರಿದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವುದು ಹಾಗೂ ಹಿಂದಿ ಚಿತ್ರರಂಗದ ವಿರುದ್ಧ ಅವರು ನೀಡಿದ್ದ ಹೇಳಿಕೆ ಉತ್ತರ ಭಾರತದ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಕಾರಾತ್ಮಕ ಭಾವನೆ ಮೂಡಿಸಿರಬಹುದು. ಇದು ನೇರವಾಗಿ ‘ಬಂದರ್’ ಚಿತ್ರದ ಓಪನಿಂಗ್‌ಗೆ ಭಾರಿ ಹಿನ್ನಡೆ ತಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮೊದಲ ದಿನ ‘ಬಂದರ್’ ಸಿನಿಮಾ ದೇಶಾದ್ಯಂತ 1,365 ಶೋಗಳು ಪ್ರದರ್ಶನ ಕಂಡಿದ್ದು, ಕೇವಲ 12.58% ರಷ್ಟು ಒಟ್ಟಾರೆ ಆಕ್ಯುಪೆನ್ಸಿ ಪಡೆದುಕೊಂಡಿದೆ. ದೆಹಲಿ-ಎನ್‌ಸಿಆರ್ ಭಾಗದಲ್ಲಿ ಅತಿ ಹೆಚ್ಚು ಅಂದರೆ 253 ಶೋಗಳು ಇದ್ದರೂ ಅಲ್ಲಿ ಕೇವಲ 9% ಆಕ್ಯುಪೆನ್ಸಿ ಇತ್ತು. ಇನ್ನು ಅಹಮದಾಬಾದ್‌ನಲ್ಲಿ 106 ಶೋಗಳಿದ್ದರೂ ಕೇವಲ 6% ಪ್ರೇಕ್ಷಕರು ಮಾತ್ರ ಚಿತ್ರಮಂದಿರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅನುರಾಗ್ ಕಶ್ಯಪ್ ಅವಹೇಳನಕಾರಿ ಹೇಳಿಕೆ: ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

‘ಅನಿಮಲ್’ ಬಳಿಕ ಬಾಬಿ ಡಿಯೋಲ್ ಸ್ಟಾರ್​​ಡಂ ಬಲದಾಗಿದೆ. ಅವರು ‘ಬಂದರ್’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಆದರೂ ಕಲೆಕ್ಷನ್ ಹೆಚ್ಚಿಲ್ಲ. ಸದ್ಯ ಚಿತ್ರಮಂದಿರಗಳಲ್ಲಿ ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಮತ್ತು ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರಗಳು ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಈ ದೊಡ್ಡ ಸಿನಿಮಾಗಳ ಪೈಪೋಟಿಯ ನಡುವೆ ‘ಬಂದರ್’ ಸಿಲುಕಿದೆ. ಕನ್ನಡದ ಖ್ಯಾತ ನಟ ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು
ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ
ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ