ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಜಾಹೀರಾತು ಕಾಲಂನಲ್ಲಿ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು
ಸನ್ನಿ ಡಿಯೋಲ್​
Follow us
ರಾಜೇಶ್ ದುಗ್ಗುಮನೆ
|

Updated on:Aug 21, 2023 | 10:30 AM

ನಟ ಸನ್ನಿ ಡಿಯೋಲ್ ಅವರು (Sunny Deol) ಸದ್ಯ ಸುದ್ದಿಯಲ್ಲಿದ್ದಾರೆ. ‘ಗದರ್ 2’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ಮಧ್ಯೆ ಅವರು 56 ಕೋಟಿ ರೂಪಾಯಿ ಸಾಲ ಹಿಂದಿರುಗಿಸದ ಕಾರಣ ಅವರ ಒಡೆತನದ ಬಂಗಲೆಯನ್ನು ಬ್ಯಾಂಕ್ ಆಫ್ ಬರೋಡಾದವರು ಹರಾಜಿಗೆ ಇಟ್ಟಿದ್ದರು. ಈಗ ಇದನ್ನು ಹಿಂಪಡೆಯಲಾಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಬ್ಯಾಂಕ್​ ನೀಡಿದೆ. ಈ ಬೆಳವಣಿಗೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಟೈಮ್ಸ್ ಆಫ್ ಇಂಡಿಯಾ ಮುಂಬೈ ಎಡಿಷನ್​​ನ ಜಾಹೀರಾತು ಕಾಲಂನಲ್ಲಿ ಈ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಆದರೆ, ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಕೇವಲ ನಟ ಮಾತ್ರ ಅಲ್ಲ ಸಂಸದ ಕೂಡ ಹೌದು. ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಈಗ ಅವರ ಬಂಗಲೆಯ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಾಂಗ್ರೆಸ್​ನವರು ಪ್ರಶ್ನೆ ಮಾಡಿದ್ದಾರೆ. ‘56 ಕೋಟಿ ರೂಪಾಯಿ ಸಾಲ ಮರುಪಾವತಿಸದ ಕಾರಣ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬಂಗಲೆಯನ್ನು ಹರಾಜಿಗೆ ಇಡಲಾಗಿದೆ ಎಂಬ ವಿಚಾರ ದೇಶಕ್ಕೆ ಗೊತ್ತಾಯಿತು. ಆದರೆ, 24 ಗಂಟೆ ಒಳಗೆ ಬ್ಯಾಂಕ್ ಆಫ್ ಬರೋಡಾ ಈ ಹರಾಜು ಪ್ರಕ್ರಿಯೆಯನ್ನು ತಡೆದಿದೆ. ಇದಕ್ಕೆ ತಾಂತ್ರಿಕ ಕಾರಣ ನೀಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ 2016ರಲ್ಲಿ ‘ಘಾಯಲ್ ಒನ್ಸ್ ಅಗೇನ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತ್ತು. ಈ ಚಿತ್ರವನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಈ ಚಿತ್ರ ನಿರ್ಮಾಣಕ್ಕೆ ಅವರು ಈ ಬಂಗಲೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ಹರಾಜು ಪ್ರಕ್ರಿಯೆ ನಿಂತಿರುವ ವಿಚಾರದ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 21 August 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ