AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂದಿಗೂ ನಾನು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲ್ಲ’: ಖಡಕ್ ಆಗಿ ಹೇಳಿದ ಸನ್ನಿ ಡಿಯೋಲ್

ಬಾಲಿವುಡ್​ನ ಕೆಲವು ಸ್ಟಾರ್ ನಟರು ಪಾನ್ ಮಸಾಲಾ, ಗುಟ್ಕಾ ಜಾಹೀರಾತುಗಳಲ್ಲಿ ನಟಿಸಿ ವಿವಾದ ಮಾಡಿಕೊಂಡಿದ್ದಾರೆ. ಆದರೆ ಸನ್ನಿ ಡಿಯೋಲ್ ಅವರು ಎಂದಿಗೂ ಇಂಥ ಜಾಹೀರಾತಿನಲ್ಲಿ ನಟಿಸಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ‘ಬಟ್ವಾರಾ 1947’ ಸಿನಿಮಾ ಬಿಡುಗಡೆ ಬಳಿಕ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

‘ಎಂದಿಗೂ ನಾನು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲ್ಲ’: ಖಡಕ್ ಆಗಿ ಹೇಳಿದ ಸನ್ನಿ ಡಿಯೋಲ್
Sunny Deol
ಮದನ್​ ಕುಮಾರ್​
|

Updated on: Aug 17, 2026 | 9:12 PM

Share

ಶಾರುಖ್ ಖಾನ್, ಟೈಗರ್ ಶ್ರಾಫ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಅವರು ಗುಟ್ಕಾ (Gutka) ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಜನರಿಂದ ವಿರೋಧ ವ್ಯಕ್ತವಾಯಿತು. ಅಲ್ಲದೇ, ಕಾನೂನಿನ ಸಂಕಷ್ಟವೂ ಎದುರಾಯಿತು. ಇಂಥ ಜಾಹೀರಾತುಗಳ ವಿಷಯದಲ್ಲಿ ಬಾಲಿವುಡ್‌ನ ಹಿರಿಯ ನಟ ಸನ್ನಿ ಡಿಯೋಲ್ (Sunny Deol) ಅವರು ಸ್ಪಷ್ಟ ನಿಲುವು ಹೊಂದಿದ್ದಾರೆ. ತಾವು ಎಂದಿಗೂ ಪಾನ್ ಮಸಾಲಾ (Pan Masala) ಜಾಹೀರಾತುಗಳಲ್ಲಿ ಅಭಿನಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಶುಭಂಕರ್ ಮಿಶ್ರಾ ಅವರ ಪೋಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಸನ್ನಿ ಡಿಯೋಲ್, ತಮಗೆ ಇಂತಹ ಜಾಹೀರಾತುಗಳ ಆಫರ್ ಬಂದಿದ್ದರೂ ಸಹ ಅವುಗಳನ್ನು ನಿರಾಕರಿಸಿದ್ದಾಗಿ ಹೇಳಿದ್ದಾರೆ. ತಾವು ಇಂಥ ಜಾಹೀರಾತುಗಳಲ್ಲಿ ನಟಿಸದೇ ಇರುವುದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಅವರ ನಿರ್ಧಾರವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ತಮ್ಮ ನಿರ್ಧಾರದ ಬಗ್ಗೆ ಮಾತನಾಡಿದ ಸನ್ನಿ ಡಿಯೋಲ್, ‘ನಾನು ಪಾನ್ ಮಸಾಲಾ ಜಾಹೀರಾತುಗಳನ್ನು ಮಾಡಿಲ್ಲ ಹಾಗೂ ಮುಂದೆಯೂ ಎಂದಿಗೂ ಮಾಡುವುದಿಲ್ಲ. ಇಂತಹ ಆಫರ್‌ಗಳು ಬರುತ್ತವೆ, ಆದರೆ ನಾನು ಒಪ್ಪುವುದಿಲ್ಲ. ನನಗೆ ನಂಬಿಕೆ ಇಲ್ಲದ ಅಥವಾ ಸೂಕ್ತವಲ್ಲದ ವಸ್ತುಗಳನ್ನು ಪ್ರಚಾರ ಮಾಡಲು ನಾನು ಬಯಸುವುದಿಲ್ಲ. ಇಂತಹ ಉತ್ಪನ್ನಗಳನ್ನು ಉತ್ತೇಜಿಸುವುದು ಒಳ್ಳೆಯದಲ್ಲ’ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಸನ್ನಿ ಡಿಯೋಲ್ ಅವರು ‘ನನ್ನ ಆತ್ಮಸಾಕ್ಷಿ ಒಪ್ಪದ ಹಲವು ಕೆಲಸಗಳನ್ನು ನಾನು ಮಾಡುವುದಿಲ್ಲ. ನನ್ನ ಮನಸ್ಸಿಗೆ ಯಾವುದು ಸರಿ ಎನಿಸುತ್ತದೆಯೋ ಅದನ್ನು ಮಾತ್ರ ಮಾಡುತ್ತೇನೆ’ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮಗೆ ಬರುವ ಬ್ರ್ಯಾಂಡ್ ಜಾಹೀರಾತುಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ಭಾರತ ಮತ್ತು ಭಾರತೀಯತೆಯ ಸಂಕೇತವಾಗಿ ಗುರುತಿಸಿಕೊಂಡಿದ್ದರೂ ಸಹ, ನನಗೆ ಹೆಚ್ಚಿನ ಜಾಹೀರಾತುಗಳು ಬರುವುದಿಲ್ಲ. ಅದಕ್ಕೆ ಕಾರಣ ಏನೆಂಬುದು ನನಗೂ ತಿಳಿದಿಲ್ಲ. ಹಿಂದೆ ನನಗೆ ಸಿನಿಮಾಗಳು ಸಿಗದಿರಲು ಕಾರಣ ಏನೆಂದು ತಿಳಿಯದಂತೆಯೇ, ಜಾಹೀರಾತುಗಳ ವಿಷಯದಲ್ಲೂ ನನಗೇನೂ ಅರ್ಥವಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗುಟ್ಕಾ ಪ್ರಚಾರ: ಶಾರುಖ್, ಅಜಯ್, ಟೈಗರ್ ಶ್ರಾಫ್​​ಗೆ ನೊಟೀಸ್

ಸಿನಿಮಾ ವಿಷಯಕ್ಕೆ ಬರುವುದಾದರೆ, ಸನ್ನಿ ಡಿಯೋಲ್ ಅಭಿನಯದ ‘ಬಟ್ವಾರಾ 1947’ ಸಿನಿಮಾ ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ರಾಜ್‌ಕುಮಾರ್ ಸಂತೋಷಿ ನಿರ್ದೇಶನದ ಮತ್ತು ಆಮಿರ್ ಖಾನ್ ನಿರ್ಮಾಣದ ಈ ಚಿತ್ರದಲ್ಲಿ ಪ್ರೀತಿ ಜಿಂಟಾ, ಶಬಾನಾ ಆಜ್ಮಿ, ಅಲಿ ಫಜಲ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್