AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ಮಾಡಲು ರಾಜಮೌಳಿ ಎದುರು ಹಲವು ಬೇಡಿಕೆ ಇಟ್ಟಿದ್ದ ಶ್ರೀದೇವಿ; ಆಮೇಲೆ ಆಗಿದ್ದೇನು?

ಸಂದೀಪ್ ರೆಡ್ಡಿ ವಂಗಾ ಹಾಗೂ ದೀಪಿಕಾ ಪಡುಕೋಣೆ ವಿವಾದದ ನಡುವೆ 'ಬಾಹುಬಲಿ' ಸಮಯದ ಹಳೆಯ ಘಟನೆ ನೆನಪಾಗಿದೆ. ಆಗ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಹಿರಿಯ ನಟಿ ಶ್ರೀದೇವಿ ನಡುವೆ ಸಂಭಾವನೆ ಮತ್ತು ಬೇಡಿಕೆಗಳ ವಿಚಾರವಾಗಿ ಭಾರಿ ವಿವಾದ ಸೃಷ್ಟಿಯಾಗಿತ್ತು. ನಂತರ ರಾಜಮೌಳಿ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದರು.

‘ಬಾಹುಬಲಿ’ ಮಾಡಲು ರಾಜಮೌಳಿ ಎದುರು ಹಲವು ಬೇಡಿಕೆ ಇಟ್ಟಿದ್ದ ಶ್ರೀದೇವಿ; ಆಮೇಲೆ ಆಗಿದ್ದೇನು?
ಶ್ರಿದೇವಿ-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Aug 27, 2026 | 1:22 PM

Share

ಮುಖ್ಯಾಂಶಗಳು

  • ದೀಪಿಕಾ vs ವಂಗಾ ಗಲಾಟೆ
  • ನೆನಪಾಯ್ತು ಶ್ರೀದೇವಿ-ರಾಜಮೌಳಿ ಹಳೆಯ ವಿವಾದ
  • ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ರಾಜಮೌಳಿ 

ಸಂದೀಪ್ ರೆಡ್ಡಿ ವಂಗಾ ಮತ್ತು ದೀಪಿಕಾ ಪಡುಕೋಣೆ (Deepika Padukone) ನಡುವಿನ ಸಂಘರ್ಷ ಈಗ ಭಾರಿ ಚರ್ಚೆಯಲ್ಲಿದೆ. ಆದರೆ ನಟಿಯರ ಬೇಡಿಕೆಗಳ ಕುರಿತು ಗಲಾಟೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾದ ಸಮಯದಲ್ಲೂ ಇಂತಹುದೇ ಘಟನೆ ನಡೆದಿತ್ತು. ಆಗ ದಿವಂಗತ ನಟಿ ಶ್ರೀದೇವಿ ಹಾಗೂ ನಿರ್ದೇಶಕ ಎಸ್.ಎಸ್. ರಾಜಮೌಳಿ ನಡುವೆ ಬಹುದೊಡ್ಡ ವಿವಾದ ಸೃಷ್ಟಿಯಾಗಿತ್ತು.

ಪ್ರಭಾಸ್ ಅಭಿನಯದ ‘ಸ್ಪಿರಿಟ್’ ಚಿತ್ರದಿಂದ ದೀಪಿಕಾ ಹೊರಬಿದ್ದ ನಂತರ ಈ ವಿವಾದ ಆರಂಭವಾಯಿತು. ದೀಪಿಕಾ ಪಡುಕೋಣೆ ಹೆಚ್ಚಿನ ಸಂಭಾವನೆ ಕೇಳಿದರು. ಸಿನಿಮಾದ ಲಾಭದಲ್ಲಿ ಪಾಲು ಕೇಳಿದರು. ಹಾಗೂ ಮಗುವಿಗಾಗಿ ಶಿಫ್ಟ್ ಸಮಯದ ವಿನಾಯಿತಿ ಕೇಳಿದರು ಎಂದು ನಿರ್ಮಾಪಕ ಪ್ರಣಯ್ ವಂಗಾ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ದೀಪಿಕಾ ಅವರು ವಂಗಾ ಸಹೋದರರನ್ನು ಟೀಕಿಸುವ ಪೋಸ್ಟ್ ಲೈಕ್ ಮಾಡಿದ್ದರು.

ಇದಕ್ಕೂ ಮುನ್ನ ‘ಬಾಹುಬಲಿ’ ಚಿತ್ರದ ಶಿವಗಾಮಿ ಪಾತ್ರಕ್ಕೆ ಶ್ರೀದೇವಿ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಶ್ರೀದೇವಿ ಬಿಸಿನೆಸ್ ಕ್ಲಾಸ್ ಟಿಕೆಟ್ ಹಾಗೂ ಐಷಾರಾಮಿ ಹೋಟೆಲ್ ಕೊಠಡಿ ಕೇಳಿದ್ದಾರೆ ಎಂದು ರಾಜಮೌಳಿ ಆರೋಪಿಸಿದ್ದರು. ಅಲ್ಲದೆ ಶ್ರೀದೇವಿ ಸಿನಿಮಾದ ಲಾಭದಲ್ಲಿ ಶೇಕಡಾವಾರು ಪಾಲು ಕೇಳಿದ್ದಾರೆ ಎಂದಿದ್ದರು. ಶ್ರೀದೇವಿಗಾಗಿ ಅಷ್ಟು ವೆಚ್ಚ ಮಾಡುವುದು ವ್ಯರ್ಥ ಎಂದು ರಾಜಮೌಳಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

Rajamouli demeaned Sri for supposedly negotiating her pay terms..How did Rajamouli escape the backlash? Sridevi didn’t pursue the role, he pursued her for the role. And then these two guys had the audacity to mock her. She responded so gracefully. by u/just-slaying in BollyBlindsNGossip

ರಾಜಮೌಳಿ ಹೇಳಿಕೆಯಿಂದ ಶ್ರೀದೇವಿ ತೀವ್ರ ಆಘಾತಕ್ಕೆ ಒಳಗಾಗಿದ್ದರು. ರಾಜಮೌಳಿ ಮಾತುಗಳಿಂದ ತಮಗೆ ತುಂಬಾ ಬೇಸರವಾಗಿದೆ ಎಂದು ಶ್ರೀದೇವಿ ಹೇಳಿದ್ದರು. ತಾವು ಐದು ದಶಕಗಳಿಂದ ಚಿತ್ರರಂಗದಲ್ಲಿದ್ದು ಇಂತಹ ಬೇಡಿಕೆ ಇಟ್ಟಿಲ್ಲ ಎಂದಿದ್ದರು. ಈ ಆರೋಪಗಳು ಸಂಪೂರ್ಣ ಸುಳ್ಳು ಎಂದು ಶ್ರೀದೇವಿ ಸ್ಪಷ್ಟನೆ ನೀಡಿದ್ದರು. ನಂತರ ರಾಜಮೌಳಿ ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯ ಹಾಡಿದ್ದರು.

ಇದನ್ನೂ ಓದಿ: ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ನಡೆದಿದ್ದಕ್ಕೆ ಕೊನೆಗೂ ಅಸಲಿ ಕಾರಣ ಬಯಲು

ಕೆಲ ವರ್ಷಗಳ ನಂತರ ಶ್ರೀದೇವಿ ಪತಿ ಬೋನಿ ಕಪೂರ್ ಈ ವಿವಾದದ ಅಸಲಿ ಸತ್ಯ ಬಿಚ್ಚಿಟ್ಟಿದ್ದರು. ನಿರ್ಮಾಪಕ ಶೋಬು ಯರ್ಲಗಡ್ಡ ಅವರು ರಾಜಮೌಳಿಗೆ ಸುಳ್ಳು ಮಾಹಿತಿ ನೀಡಿದ್ದರು ಎಂದು ನಂತರ ಗೊತ್ತಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:19 pm, Thu, 27 August 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!