AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ

ಶಿಲ್ಪಾ ಶಿಂಧೆ ವಿರುದ್ಧ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕುತ್ತಿದ್ದಾರೆ. ಒಬ್ಬ ಪುರುಷನ ಗೌರವ ಮತ್ತು ವೃತ್ತಿಜೀವನಕ್ಕೆ ಧಕ್ಕೆ ತಂದಿರುವುದಕ್ಕಾಗಿ ನಿರ್ಮಾಪಕರು ನಟಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ
Shilpa Shinde
ಮದನ್​ ಕುಮಾರ್​
|

Updated on: Jun 03, 2026 | 10:06 PM

Share

ಕಿರುತೆರೆಯ ಜನಪ್ರಿಯ ನಟಿ ಮತ್ತು ‘ಬಿಗ್ ಬಾಸ್’ ವಿನ್ನರ್ ಶಿಲ್ಪಾ ಶಿಂಧೆ (Shilpa Shinde) ಅವರು ತಮ್ಮ ಹಳೆಯ ವಿವಾದವೊಂದರ ಕುರಿತು ನೀಡಿರುವ ಹೇಳಿಕೆ ಈಗ ಹೊಸದೊಂದು ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ. ಸೂಪರ್ ಹಿಟ್ ಹಿಂದಿ ಧಾರಾವಾಹಿ ‘ಭಾಬಿ ಜಿ ಘರ್ ಪರ್ ಹೈ’ (Bhabi Ji Ghar Par Hain) ನಿರ್ಮಾಪಕರ ವಿರುದ್ಧ ತಾವು ಈ ಹಿಂದೆ ಹೂಡಿದ್ದ ಲೈಂಗಿಕ ಕಿರುಕುಳದ ಕೇಸ್ (Harassment Case) ಸುಳ್ಳು ಎಂದು ಅವರು ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪುರುಷರ ಹಕ್ಕುಗಳ ಸಂಘಟನೆಯೊಂದು ನಟಿಯನ್ನು ಬಂಧಿಸುವಂತೆ ಮುಂಬೈ ಪೊಲೀಸರನ್ನು ಆಗ್ರಹಿಸಿದೆ.

ಭಾರ್ತಿ ಸಿಂಗ್ ಮತ್ತು ಹರ್ಷ್ ಲಿಂಬಾಚಿಯಾ ನಡೆಸಿಕೊಡುವ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶಿಲ್ಪಾ ಶಿಂಧೆ ಈ ಆಘಾತಕಾರಿ ವಿಷಯವನ್ನು ಹಂಚಿಕೊಂಡಿದ್ದಾರೆ. ಅವರ ಈ ಹೇಳಿಕೆ ಹೊರಬರುತ್ತಿದ್ದಂತೆ ದೆಹಲಿ ಮೂಲದ ಪುರುಷರ ಹಕ್ಕುಗಳ ಸಂಘಟನೆಯಾದ ‘NCMIndia Council for Men Affairs’ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಶಿಲ್ಪಾ ಶಿಂಧೆ ಅವರು ಕಾನೂನನ್ನು ದುರುಪಯೋಗಪಡಿಸಿಕೊಂಡು ನಿರ್ಮಾಪಕರ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು ಎಂಬುದು ಅವರ ಒಪ್ಪಿಗೆಯಿಂದಲೇ ಸಾಬೀತಾಗಿದೆ. ಹಾಗಾಗಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಯು ಮುಂಬೈ ಪೊಲೀಸರನ್ನು ಒತ್ತಾಯಿಸಿದೆ.

ಪಾಡ್‌ಕಾಸ್ಟ್‌ನಲ್ಲಿ ಶಿಲ್ಪಾ ಶಿಂಧೆ ಹೇಳಿದ್ದೇನು? ಧಾರಾವಾಹಿಯ ನಿರ್ಮಾಪಕ ಸಂಜಯ್ ಕೊಹ್ಲಿ ವಿರುದ್ಧ ವರ್ಷಗಳ ಹಿಂದೆ ದಾಖಲಿಸಿದ್ದ ಲೈಂಗಿಕ ಕಿರುಕುಳದ ದೂರು ಸಂಪೂರ್ಣವಾಗಿ ನಿಜವಾಗಿರಲಿಲ್ಲ ಎಂದು ಶಿಲ್ಪಾ ಅವರು ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಆ ಸಮಯದಲ್ಲಿ ತಮಗೆ ಬೇರೆ ಯಾವುದೇ ದಾರಿ ಕಾಣದಿದ್ದಕ್ಕೆ ಮತ್ತು ತಮ್ಮ ಬಾಕಿ ಹಣವನ್ನು ವಸೂಲಿ ಮಾಡುವ ಉದ್ದೇಶದಿಂದ ಅನಿವಾರ್ಯವಾಗಿ ಆ ರೀತಿಯ ಕೇಸ್ ದಾಖಲಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

‘ಬಳಿಕ ಆ ಪ್ರಕರಣವು ಇಬ್ಬರ ನಡುವಿನ ಮಾತುಕತೆಯ ಮೂಲಕ ಇತ್ಯರ್ಥವಾಯಿತು. ನನ್ನ ಬಾಕಿ ಇದ್ದ ಪೇಮೆಂಟ್ ಕೂಡ ಕ್ಲಿಯರ್ ಆಯಿತು. ಈಗ ನಿರ್ಮಾಪಕರ ಜೊತೆ ನನ್ನ ಸಂಬಂಧ ಚೆನ್ನಾಗಿದೆ ಮತ್ತು ನಮ್ಮ ನಡುವೆ ಯಾವುದೇ ದ್ವೇಷ ಇಲ್ಲ’ ಎಂದು ಶಿಲ್ಪಾ ಶಿಂಧೆ ಸಮರ್ಥಿಸಿಕೊಂಡಿದ್ದಾರೆ. ಆದರೆ, ತಾವು ನೀಡಿದ್ದ ದೂರು ಸುಳ್ಳು ಎಂದು ಈಗ ಸ್ವತಃ ಅವರೇ ಒಪ್ಪಿಕೊಂಡಿರುವುದು ಪುರುಷರ ಹಕ್ಕುಗಳ ಪರ ಹೋರಾಡುವ ಸಂಘಟನೆಗಳನ್ನು ಕೆರಳಿಸಿದೆ.

ಇದನ್ನೂ ಓದಿ: ‘ಧುರಂಧರ್’ ಚಿತ್ರತಂಡದ ಸದಸ್ಯನ ಲೈಂಗಿಕ ದೌರ್ಜನ್ಯ ಕೃತ್ಯ ಸಾಬೀತು; ಕಠಿಣ ಕ್ರಮ

ವಿವಾದದ ಹಿನ್ನೆಲೆ: 2016ರಲ್ಲಿ ‘ಭಾಬಿ ಜಿ ಘರ್ ಪರ್ ಹೈ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುವ ಮೂಲಕ ಶಿಲ್ಪಾ ಶಿಂಧೆ ದೇಶಾದ್ಯಂತ ಮನೆಮಾತಾಗಿದ್ದರು. ಆದರೆ ಅದೇ ಸಮಯದಲ್ಲಿ ಸಂಭಾವನೆ ಮತ್ತು ಒಪ್ಪಂದದ ವಿಚಾರವಾಗಿ ನಿರ್ಮಾಪಕರೊಂದಿಗೆ ಭಿನ್ನಾಭಿಪ್ರಾಯ ಮೂಡಿ ಅವರು ದಿಢೀರ್ ಶೋನಿಂದ ಹೊರನಡೆದಿದ್ದರು. ಈ ವೇಳೆ ಇಡೀ ಟಿವಿ ಉದ್ಯಮದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಈ ವಿವಾದ, ಕೋರ್ಟ್ ಮೆಟ್ಟಿಲೇರಿ ತಿಂಗಳುಗಟ್ಟಲೆ ಸುದ್ದಿಯಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ