AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

26/11 ಮುಂಬೈ ದಾಳಿಯ ಘಟನೆಯನ್ನು ಆಧರಿಸಿ ‘ಭಾರತ್ ಭಾಗ್ಯ ವಿಧಾತ’ ಸಿನಿಮಾ ಮಾಡಲಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ನಟಿ ಕಂಗನಾ ರಣಾವತ್ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಿಂದ ಕಂಗನಾ ಅವರಿಗೆ ಮತ್ತೊಂದು ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ
Bharat Bhhagya Viddhaata Poster
ಮದನ್​ ಕುಮಾರ್​
|

Updated on: Jun 02, 2026 | 8:50 PM

Share

ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರಣಾವತ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾದ ಟ್ರೇಲರ್ ಮಂಗಳವಾರ (ಜೂನ್ 2) ಬಿಡುಗಡೆಯಾಗಿದೆ. 26/11 ಮುಂಬೈ ಭೀಕರ ಭಯೋತ್ಪಾದನಾ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನೂರಾರು ರೋಗಿಗಳನ್ನು ರಕ್ಷಿಸಿದ ಮುಂಬೈನ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಯ ಧೀರ ನರ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ನೈಜ ಶೌರ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ತಪಾಡಿಯಾ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಕಂಗನಾ ರಣಾವತ್ (Kangana Ranaut) ಅವರು ನರ್ಸ್ ಪಾತ್ರವನ್ನು ಮಾಡಿದ್ದಾರೆ.

ಬಿಡುಗಡೆಯಾಗಿರುವ 2 ನಿಮಿಷ 24 ಸೆಕೆಂಡುಗಳ ಟ್ರೇಲರ್​ನಲ್ಲಿ ಭೀಕರ ಗುಂಡಿನ ಸದ್ದು, ಪೊಲೀಸ್ ಸೈರನ್ ಮತ್ತು 26/11ರ ಮುಂಬೈ ದಾಳಿಯ ಸುದ್ದಿ ಪ್ರಸಾರದ ತುಣುಕು ಹೈಲೈಟ್ ಆಗಿದೆ. ಇವುಗಳೊಂದಿಗೆ ಟ್ರೇಲರ್ ರೋಚಕವಾಗಿ ಆರಂಭವಾಗುತ್ತದೆ. ಬಳಿಕ ಆಸ್ಪತ್ರೆಯ ನರ್ಸ್‌ಗಳ ದೈನಂದಿನ ಶಾಂತಿಯುತ ಜೀವನವನ್ನು ತೋರಿಸಲಾಗುತ್ತದೆ. ಆದರೆ ಉಗ್ರರ ದಾಳಿ ಆಸ್ಪತ್ರೆಯ ಮೇಲೆ ನಡೆದಾಗ ಇಡೀ ಪರಿಸ್ಥಿತಿಯೇ ಬದಲಾಗಿಹೋಗುತ್ತದೆ.

‘ಭಾರತ್ ಭಾಗ್ಯ ವಿಧಾತ’ ಸಿನಿಮಾ ಟ್ರೇಲರ್:

ಆಸ್ಪತ್ರೆಯೊಳಗೆ ಉಗ್ರರು ನುಗ್ಗಿ ದಾಳಿ ನಡೆಸುತ್ತಿರುವಾಗ, ಕಂಗನಾ ಅವರ ಪಾತ್ರವು ತನ್ನ ಪ್ರಾಣದ ಹಂಗು ತೊರೆದು ಒಳಗೆ ಸಿಲುಕಿರುವ ರೋಗಿಗಳನ್ನು ರಕ್ಷಿಸಲು ಮುಂದಾಗುತ್ತದೆ. ತೀವ್ರವಾದ ಅಪಾಯ ಮತ್ತು ಸಾವಿನ ಭಯದ ನಡುವೆಯೂ ಹೆಲ್ತ್‌ಕೇರ್ ಸಿಬ್ಬಂದಿ ತೋರಿದ ಧೈರ್ಯ ಹಾಗೂ ನಿಸ್ವಾರ್ಥ ಸೇವೆಗೆ ಈ ಟ್ರೇಲರ್ ಕನ್ನಡಿ ಹಿಡಿದಿದೆ. ಟ್ರೇಲರ್ ನೋಡಿದ ಅಭಿಮಾನಿಗಳು ‘ಈ ಚಿತ್ರದಿಂದ ಕಂಗನಾ ಅವರಿಗೆ ಮತ್ತೊಂದು ನ್ಯಾಷನಲ್ ಅವಾರ್ಡ್ ಗ್ಯಾರಂಟಿ’ ಎಂದು ಕಮಂಟ್ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಇತಿಹಾಸದ ಪುಟಗಳಲ್ಲಿ ಮರೆತುಹೋಗುವ ಇಂತಹ ನರ್ಸ್‌ಗಳ ಮತ್ತು ವೈದ್ಯಕೀಯ ಸಿಬ್ಬಂದಿಯ ಮಹತ್ವದ ಕೊಡುಗೆಯನ್ನು ಜಗತ್ತಿಗೆ ಸಾರುವ ಉದ್ದೇಶವನ್ನು ಈ ಸಿನಿಮಾ ಹೊಂದಿದೆ. ಮುಂಬೈ ದಾಳಿಯ ಕರಾಳ ರಾತ್ರಿಯಲ್ಲಿ ಆಸ್ಪತ್ರೆಯಲ್ಲಿದ್ದ ಸುಮಾರು 400 ರೋಗಿಗಳನ್ನು ಸುರಕ್ಷಿತವಾಗಿ ಕಾಪಾಡಿದ ವೈದ್ಯಕೀಯ ಸಿಬ್ಬಂದಿಗೆ ಈ ಚಿತ್ರದ ಮೂಲಕ ಗೌರವ ಸಲ್ಲಿಸಲಾಗಿದೆ.

ಇದನ್ನೂ ಓದಿ: 8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್

‘ಭಾರತ್ ಭಾಗ್ಯ ವಿಧಾತ’ ಚಿತ್ರದಲ್ಲಿ ಕಂಗನಾ ರಣಾವತ್ ಅವರೊಂದಿಗೆ ಗಿರಿಜಾ ಓಕ್ ಪ್ರಮುಖ ಪಾತ್ರದಲ್ಲಿದ್ದಾರೆ. ಉಳಿದಂತೆ ಸ್ಮಿತಾ ತಾಂಬೆ, ಅಮೃತಾ ನಾಮದೇವ್, ಈಶಾ ಡೇ, ಪ್ರಿಯಾ ಬೆರ್ಡೆ, ಆಶಾ ಶೆಲಾರ್, ಸುಹಿತಾ ಥಟ್ಟೆ, ರಸಿಕಾ ಆಗಾಶೆ, ಆದಿತ್ಯ ಮಿಶ್ರಾ ಮತ್ತು ಜಾಹಿದ್ ಖಾನ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಜೂನ್ 12ರಂದು ಈ ಸಿನಿಮಾ ದೇಶಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್